ಬಿ.ಟಿ. ಮೋಹನ್ ಕುಮಾರ್
ಉಪಾಧ್ಯಕ್ಷ ಸ್ಥಾನಕ್ಕೆ ಚಲುವರಾಜು ಅಭ್ಯರ್ಥಿ ಘೋಷಣೆ
ಅಪೆಕ್ಸ್ ಬ್ಯಾಂಕ್‌ಗೆ ಪಿ.ಎಂ.ನರೇಂದ್ರಸ್ವಾಮಿ ಪ್ರತಿನಿಧಿ
ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಪುತ್ರ ಸಚ್ಚಿನ್ ಚಲುವರಾಯಸ್ವಾಮಿ, ಉಪಾಧ್ಯಕ್ಷ ಸ್ಥಾನಕ್ಕೆ ಚಲುವರಾಜು ಅವರನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಕಳುಹಿಸಲು ತೀರ್ಮಾನಿಸಲಾಗಿದೆ.
ನ.೨೧ರ ಶುಕ್ರವಾರ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಕುಮಾರ ಕೃಪಾದಲ್ಲಿ ನಡೆದ ಸಭೆಯಲ್ಲಿ , ಸಚ್ಚಿನ್ ಚಲುವರಾಯಸ್ವಾಮಿ, ಚಲುವರಾಜು ಅವರನ್ನು ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಅಭ್ಯರ್ಥಿಗಳನ್ನಾಗಿ ಎಲ್ಲ ೧೧ ಮಂದಿ ನಿರ್ದೇಶಕರು, ಶಾಸಕರು, ಒಮ್ಮತದಿಂದ ಆಯ್ಕೆ ಮಾಡಿದರು. ತಾಂತ್ರಿಕವಾಗಿ ಶುಕ್ರವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದೆ. ೧೨ ನಿರ್ದೇಶಕರ ಸ್ಥಾನಗಳ ಪೈಕಿ ೧೧ ಮಂದಿ ಕಾಂಗ್ರೆಸ್ ಬೆಂಬಲಿತರೇ ಆಯ್ಕೆಯಾಗಿದ್ದು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳನ್ನಾಗಿ ಬೇರೆ ಪಕ್ಷದವರೊಂದಿಗೆ ಪೈಪೋಟಿಯ ಪ್ರಮೇಯವೇ ಇಲ್ಲವಾಗಿದೆ.
ಈ ಬಾರಿ ಎಂಡಿಸಿಸಿ ಬ್ಯಾಂಕ್ ಚುನಾವಣೆಗೂ ಮುನ್ನವೇ ೯ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಪಾರಮ್ಯ ಸಾಧಿಸಿತ್ತು. ಉಳಿದ ಮೂರು ಸ್ಥಾನಗಳಿಗೆನಡೆದ ಚುನಾವಣೆಯಲ್ಲಿ ಎರಡು ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ಒಂದು ಸ್ಥಾನದಲ್ಲಿ ಮಾತ್ರ ಜಾ.ದಳ ಗೆಲುವು ಸಾಧಿಸಿತು.
ಮಳವಳ್ಳಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ನಾಗಮಂಗಲ ತಾಲ್ಲೂಕುಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಸಿ.ಸಚಿನ್ ಚಲುವರಾಯಸ್ವಾಮಿ, ಜಿಲ್ಲೆಯ ಟಿಎಪಿಸಿಎಂಎಸ್‌ಗಳ ಕ್ಷೇತ್ರದಿಂದ ಕೆ.ವಿ.ದಿನೇಶ್, ಜಿಲ್ಲೆಯಲ್ಲಿನ ಕೈಗಾರಿಕಾ ಸಹಕಾರ ಸಂಘಗಳು, ಕಾರ್ಮಿಕ ಸಹಕಾರ ಸಂಘಗಳು ಮತ್ತು ಇನ್ನಿತರೆ ಸಹಕಾರ ಸಂಘಗಳ ಕ್ಷೇತ್ರದಿಂದ ಹಾಲಿಅಧ್ಯಕ್ಷ ಕೆ.ಸಿ.ಜೋಗಿಗೌಡ, ಜಿಲ್ಲೆಯಲ್ಲಿನ ಬಳಕೆದಾರರು ಮತ್ತು ಸಂಸ್ಕರಣ ಸಹಕಾರ ಸಂಘಗಳು ಮತ್ತು ನಗರ ಸಹಕಾರಿ ಬ್ಯಾಂಕ್ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್.ಅಶೋಕ್ ಹಾಗೂ ಮದ್ದೂರು ತಾಲ್ಲೂಕು ಪಿಎಸಿಸಿಎಸ್ ಕ್ಷೇತ್ರದಿಂದ ಪಿ.ಸಂದರ್ಶ, ಶ್ರೀರಂಗಪಟ್ಟಣ ತಾಲ್ಲೂಕು ಪಿಎಸಿಸಿಎಸ್ ಕ್ಷೇತ್ರದಿಂದ ಬಿ.ಗಿರೀಶ್, ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಎ.ವಿಜೇಂದ್ರಮೂರ್ತಿ, ಮಂಡ್ಯ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಸಿ.ಚಲುವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇನ್ನು ಮಂಡ್ಯ ತಾಲ್ಲೂಕು ಪಿಎಸಿಸಿಎಸ್‌ಗಳ ಕ್ಷೇತ್ರದಿಂದ ಎಸ್.ಪಿ. ಸತೀಶ್ ಮತ್ತು ಕೆ.ಆರ್.ಪೇಟೆ ತಾಲ್ಲೂಕು ಪಿಎಸಿಸಿಎಸ್‌ಗಳ ಕ್ಷೇತ್ರದಿಂದ ಎಸ್.ಎಸ್.ಅಂಬರೀಶ್ ಕಾಂಗ್ರೆಸ್ ಬೆಂಬಲಿತರಾಗಿ ಹಾಗೂ ಪಾಂಡವಪುರ ತಾಲ್ಲೂಕು ಪಿಎಸಿಸಿಎಸ್‌ಗಳ ಕ್ಷೇತ್ರದಿಂದ ಜಾ.ದಳ ಬೆಂಬಲಿತ ಅಭ್ಯರ್ಥಿ ಎಚ್.ಸಿ.ಪುಟ್ಟಸ್ವಾಮಿಗೌಡ ಚುನಾಯಿತರಾಗಿದ್ದಾರೆ.
” ನನ್ನ ಮಗ ಎನ್ನುವುದಕ್ಕಿಂತ ಹೆಚ್ಚಾಗಿ ನಾಗಮಂಗಲ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಸಚ್ಚಿನ್‌ನನ್ನು ಎಂಡಿಸಿಸಿ ಬ್ಯಾಂಕ್ ಚುನಾವಣೆ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಶಾಸಕರು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಚರ್ಚಿಸಿ, ಸಚ್ಚಿನ್ ಯುವಕನಾಗಿದ್ದು, ಬ್ಯಾಂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಿದ್ದಾರೆ ಎಂದು ತೀರ್ಮಾನಿಸಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಇದರಲ್ಲಿ ನನ್ನ ಪಾತ್ರವೇನಿಲ್ಲ.”
ಎನ್.ಚಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…