Andolana originals

ಪಿಎಂಶ್ರೀ ಯೋಜನೆಗೆ ಸಾಲಿಗ್ರಾಮ ಶಾಲೆ ಆಯ್ಕೆ

ಶಾಲೆಯ ಉನ್ನತೀಕರಣ ಹಾಗೂ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ

  

ಸಾಲಿಗ್ರಾಮ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಪಿಎಂಶ್ರೀ ಯೋಜನೆಗೆ ಆಯ್ಕೆಯಾಗುವ ಮೂಲಕ ಶಾಲೆಯ ಉನ್ನತೀಕರಣ ಹಾಗೂ ಮಕ್ಕಳ ಕಲಿಕೆಗೆ ಉತ್ತಮವಾದ ಪೂರಕ ವಾತಾವರಣ ನಿರ್ಮಾಣಕ್ಕೆ ಅನುಕೂಲವಾದಂತಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ ಕೇಂದ್ರ ಸರ್ಕಾರ ಅದರೊಂದಿಗೆ ಪ್ರಾಥಮಿಕ ಹಂತದ ಶಿಕ್ಷಣದಲ್ಲಿ ಎಲ್ಲರ ಒಳಗೊಳ್ಳುವಿಕೆ, ಕೌಶಲ ಮತ್ತು ನಾಯಕತ್ವ ಗುಣಗಳನ್ನು ಮಕ್ಕಳಲ್ಲಿ ತುಂಬುವ ನಿಟ್ಟಿನಲ್ಲಿ ಪಿಎಂಶ್ರೀ ಯೋಜನೆಯನ್ನು (ಪ್ರೈಮ್ ಮಿನಿಸ್ಟರ್ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ) 2022 2023ರಲ್ಲಿ ಜಾರಿಗೊಳಿಸಿದೆ. 2026-27ನೇ ಸಾಲಿನವರೆಗೆ ಒಟ್ಟು ಐದು ವರ್ಷಗಳ ಕಾಲ ಈ ಯೋಜನೆಯು ಜಾರಿಯಲ್ಲಿರಲಿದೆ. ಶಾಲೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಇದಾಗಿದೆ.

ಈ ಯೋಜನೆಗೆ ಮೊದಲ ಹಂತದಲ್ಲಿ ಸಾಲಿಗ್ರಾಮ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದ್ದರೆ, ಎರಡನೇ ಹಂತದಲ್ಲಿ ಚುಂಚನಕಟ್ಟೆ ಹೋಬಳಿಗೆ ಸೇರಿದ ಹೊಸಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.

ಇದರೊಂದಿಗೆ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಯೋಜನೆಗೆ ಆಯ್ಕೆಯಾಗಿರುವ ಶಾಲೆಗಳು ಎಂಬ ಹೆಗ್ಗಳಿಕೆಗೆ ಇವು ಪಾತ್ರವಾಗಿವೆ.

ಮೂಲಸೌಕರ್ಯ, ತಂತ್ರಜ್ಞಾನ, ಹೊಸ ಮಾದರಿಯ ಬೋಧನಾ ಕಲಿಕೆಯೊಂದಿಗೆ ಪಿಎಂಶ್ರೀ ಯೋಜಿತ ಶಾಲೆಗಳು ಬಹು ಮುಖ್ಯ ವಾದ ಕೌಶಲಗಳೊಂದಿಗೆ ವಿದ್ಯಾರ್ಥಿಗಳನ್ನು ಪರಿಪೂರ್ಣ ವ್ಯಕ್ತಿಗಳನ್ನಾಗಿ ರೂಪಿಸುವ ಮತ್ತು ಪೋಷಿಸುವ ಉದ್ದೇಶವನ್ನು ಹೊಂದಿವೆ.

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2023-24ನೇ ಸಾಲಿನಲ್ಲಿ ಒಟ್ಟು 139 ಮಕ್ಕಳು ದಾಖಲಾಗಿದ್ದರು. 2024-25ನೇ ಸಾಲಿನಲ್ಲಿ ಪಿಎಂಶ್ರೀ ಯೋಜನೆಗೆ ಶಾಲೆಯು ಸೇರಿದ ಪರಿಣಾಮ ಪೂರ್ವ ಪ್ರಾಥಮಿಕ ತರಗತಿಯಿಂದ 7ನೇ ತರಗತಿಯವರೆಗೆ ಒಟ್ಟು 212 ಮಕ್ಕಳು
ದಾಖಲಾಗುವ ಮೂಲಕ ಮಕ್ಕಳ ದಾಖಲಾತಿಯಲ್ಲೂ ಏರಿಕೆಯನ್ನು ಕಂಡಿದೆ. ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕಂಪ್ಯೂಟರ್ ಕಲಿಕೆ, ಯೋಗ, ನೃತ್ಯ, ಕರಾಟೆ ತರಗತಿಗಳನ್ನು ನಡೆಸಲಾಗುತ್ತಿದೆ.

ಈ ಯೋಜನೆಯಿಂದ ಶಾಲೆಗೆ ಮೊದಲ ಹಂತದಲ್ಲಿ 8.26 ಲಕ್ಷ ರೂ. ಅನುದಾನ ಬಂದಿದೆ. ಇದರಿಂದ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸಿ ಇಲ್ಲಿಗೆ ಇಬ್ಬರು ಶಿಕ್ಷಕರು, ಒಬ್ಬರು ಸಹಾಯಕರು ಹಾಗೂ ಒಬ್ಬರು ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

ಶಾಲೆಗೆ ಶೈಕ್ಷಣಿಕ, ಪ್ರಯೋಗಾಲಯ ಹಾಗೂ ಕಚೇರಿ ಪರಿಕರಗಳು, ಭೌತಿಕ ವಸ್ತುಗಳು, ಶಾಲಾ ಕೊಠಡಿಗಳಿಗೆ ಬಣ್ಣದ ಲೇಪನ, ಡಿಜಿಟಲ್ ಲೈಬ್ರರಿಗಾಗಿ ಕಂಪ್ಯೂಟರ್‌ಗಳು, ಯುಪಿಎಸ್‌ ಅಳವಡಿಸಿದ್ದು ಜೊತೆಗೆ ಶಾಲೆಯಲ್ಲಿ ರಾಷ್ಟ್ರ ನಾಯಕರು, ಕವಿಗಳು, ದಾರ್ಶನಿಕರು, ಮಹನೀಯರು ಸೇರಿದಂತೆ ವಿವಿಧ ದೇವರ ಭಾವಚಿತ್ರಗಳನ್ನು ಶಾಲೆಯಲ್ಲಿ ಅಳವಡಿಸಲಾಗಿದೆ.
ಶಾಲಾ ಮುಂಭಾಗದ ಆವರಣವನ್ನು ಸಮತಟ್ಟು ಮಾಡುವ ಕೆಲಸವು ಶೀಘ್ರದಲ್ಲಿ ನಡೆಯಲಿದ್ದು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದಕ್ಕೆ ಹೆಚ್ಚಿನ ಅನುಕೂಲವಾಗಲಿದೆ.

ಮುಂದಿನ ದಿನಗಳಲ್ಲಿ ಈ ಯೋಜನೆಯಿಂದ ಪಿಎಂಶ್ರೀ ಯೋಜನೆಯು ಶಾಲೆಗಳನ್ನು ಅಭಿವೃದ್ಧಿಪಡಿಸುವ
ಯೋಜನೆಯಾಗಿದೆ. ಶಾಲೆಗೆ ಹೈಟೆಕ್ ಶೌಚಾಲಯ ಮತ್ತು ಕುಡಿಯುವ ನೀರಿನ ಉತ್ತಮ ಸೇವಾ ಸೌಲಭ್ಯಗಳು ದೊರೆಯಲಿವೆ.

ಇಂತಹ ಶಾಲೆಯಲ್ಲಿ ಮುಖ್ಯಶಿಕ್ಷಕ ಹುದ್ದೆ ಖಾಲಿಯಿದೆ. ಈಗಿರುವ ಮಕ್ಕಳಿಗೆ ಉತ್ತಮ ಪಾಠಪ್ರವಚನಗಳನ್ನು ಮಾಡಲು ಮತ್ತೊಬ್ಬ ಶಿಕ್ಷಕರ ಅವಶ್ಯಕತೆಯಿದೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಓದುಗರ ಪತ್ರ | ರೇಣುಕಾ ಇತರರಿಗೆ ಮಾದರಿ

ತೃತೀಯ ಲಿಂಗಿಯೊಬ್ಬರು ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯಕ್ಕೆ ಕನ್ನಡ ಸಹಾಯಕ ಪ್ರಾಧ್ಯಾಪಕಿ ಯಾಗಿ ಆಯ್ಕೆಯಾಗಿರುವುದು ರಾಜ್ಯದ ಇತಿಹಾಸ ದಲ್ಲೇ ಮೊದಲಾಗಿದ್ದು,…

1 hour ago

ನುಡಿ ಜಾತ್ರೆಗೆ ದಿಢೀರ ಮಳೆ ಸಿಂಚನ

ಒಂದೆಡೆ ತಂಪಿನ ವಾತಾವರಣ : ಮತ್ತೊಂದೆಡೆ ಕಿರಿಕಿರಿ ಉಂಟುಮಾಡುವ ಕೆಸರುಮಯ ತಾಣ ಜಿ. ತಂಗಂ ಗೋಪಿನಾಥಂ ಮಂಡ್ಯ: ಕಳೆದ ಎರಡು…

1 hour ago

ರಿಯಾಯಿತಿ ಮಾರಾಟ; ಇಷ್ಟದ ಪುಸ್ತಕಕ್ಕೆ ಹುಡುಕಾಟ

ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕೃಷಿಯಲ್ಲಿ ಪ್ರಾಮುಖ್ಯತೆ ಪಡೆದಿರುವ ಮಂಡ್ಯ ಜಿಲ್ಲೆಯಲ್ಲಿ ಸಾಹಿತ್ಯಾಸಕ್ತರು ಮತ್ತು ಸಾಹಿತಿಗಳು ಕಡಿಮೆ ಏನಿಲ್ಲ ಎಂಬುದನ್ನು…

2 hours ago

‘ಸಾಹಿತ್ಯ ರಾಜಕಾರಣಿಗಳ ಎಚ್ಚರಿಸಬೇಕು’

ಮಂಡ್ಯ: ರಾಜಕಾರಣಿಗಳನ್ನು ಹೆದರಿಸ ಬಲ್ಲಂತಹ ಶಕ್ತಿ ಸಾಹಿತ್ಯಕ್ಕಿದೆ. ಹಾಗಾಗಿ ರಾಜ ಕಾರಣಿಗಳು ಹಾದಿ ತಪ್ಪದಂತೆ ಸಾಹಿತಿಗಳು ಎಚ್ಚರಿಸಬೇಕು ಎಂದು ಕಾನೂನು…

2 hours ago

ಮಂಡ್ಯದಲ್ಲಿ ದರೋಡೆ ಮಾಡಲು ಬಂದವನಿಂದ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ಪಾರ್ಸೆಲ್‌ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್‌…

11 hours ago

ನಿವೃತ್ತ ಸಾರಿಗೆ ನೌಕರರಿಗೆ ಸಿಹಿಸುದ್ದಿ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…

12 hours ago