Andolana originals

ಸಹಕಾರಿಗಳ ಪಾಲಿನ ಸಂಜೀವಿನಿ ‘ಯಶಸ್ವಿನಿ’ ಸದಸ್ಯತ್ವ ನೋಂದಣಿ ಪ್ರಕ್ರಿಯೆ ಶುರು

ಗಿರೀಶ್ ಹುಣಸೂರು

೨೦೨೬ರ ಜ.೩ರಿಂದ ಮಾ.೩೧ರವರೆಗೆ ನೋಂದಣಿ ಪ್ರಕ್ರಿಯೆ

ಮೈಸೂರು: ಸಹಕಾರ ಸಂಘಗಳ ಸದಸ್ಯರ ಪಾಲಿನ ಸಂಜೀವಿನಿಯಂತಿರುವ ‘ಯಶಸ್ವಿನಿ’ ಆರೋಗ್ಯ ರಕ್ಷಣಾ ಯೋಜನೆಯನ್ನು ೨೦೨೫-೨೬ನೇ ಸಾಲಿಗೂ ಮುಂದುವರಿಸಿ ಹೊಸ ಸದಸ್ಯರ ನೋಂದಣಿಗೆ ಸಹಕಾರ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ಅದರಂತೆ ೨೦೨೬ರ ಜನವರಿ ೩ರಿಂದ ಮಾರ್ಚ್ ೩೧ರವರೆಗೆ ನೋಂದಣಿ ಪ್ರಕ್ರಿಯೆ ನಡೆಸುವಂತೆ ತಿಳಿಸಿದೆ.

೨೦೨೫-೨೬ನೇ ಸಾಲಿನಲ್ಲಿ ೫೦ ಲಕ್ಷ ಸದಸ್ಯರನ್ನು ನೋಂದಾಯಿಸಲು ಗುರಿ ನಿಗದಿಪಡಿಸಿದ್ದು, ಪ್ರತಿ ಜಿಲ್ಲೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗುರಿ ನಿಗದಿಪಡಿಸಿದ್ದು, ೨೦೨೪-೨೫ನೇ ಸಾಲಿನಲ್ಲಿ ನೋಂದಾಯಿಸಿದ ಎಲ್ಲ ಸದಸ್ಯರನ್ನೂ ೨೦೨೫-೨೬ನೇ ಸಾಲಿಗೆ ನವೀಕರಿಸಲು ಕ್ರಮವಹಿಸಬೇಕು ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕೆಲವು ಹಾಲು ಉತ್ಪಾದಕರ ಒಕ್ಕೂಟಗಳು, ಡಿಸಿಸಿ ಬ್ಯಾಂಕುಗಳು ಹಾಗೂ ಸಹಕಾರ ಸಂಘ-ಸಂಸ್ಥೆಗಳು ತಮ್ಮ ಸದಸ್ಯರ ವಾರ್ಷಿಕ ಯಶಸ್ವಿನಿ ವಂತಿಕೆಯನ್ನು ಭಾಗಶಃ ಅಥವಾ ಪೂರ್ಣ ವಂತಿಕೆಯನ್ನು ಸಂಘದ ಸ್ವಂತ ಬಂಡವಾಳದಿಂದ ಭರಿಸುತ್ತಿದ್ದು, ಈ ಪದ್ಧತಿಯನ್ನು ರಾಜ್ಯದ ಎಲ್ಲ ಸಹಕಾರ ಸಂಘಗಳೂ ಕೂಡ ಅನುಸರಿಸಿ ಪ್ರೋತ್ಸಾಹಿಸುವಂತೆ ಹೇಳಲಾಗಿದೆ. ೨೦೨೫-೨೬ನೇ ಸಾಲಿನಲ್ಲಿ ಚಿಕಿತ್ಸಾ ಅವಧಿಯನ್ನು ೨೦೨೬ರ ಏಪ್ರಿಲ್ ೧ರಿಂದ ೨೦೨೭ರ ಮಾರ್ಚ್ ೩೧ರವರೆಗೆ ನಿಗದಿಪಡಿಸಲಾಗಿದೆ.

‘ಯಶಸ್ವಿನಿ’ ಆರೋಗ್ಯ ರಕ್ಷಣಾ ಯೋಜನೆಯನ್ನು ೨೦೦೩ರ ಜೂನ್ ೧ರಂದು ಅಂದಿನ ಎಸ್.ಎಂ.ಕೃಷ್ಣ ಸರ್ಕಾರ ಜಾರಿಗೆ ತಂದಿತ್ತು. ಈ ಯೋಜನೆಯು ರೈತರು, ಮೀನುಗಾರರು, ನೇಕಾರರು ಮತ್ತು ರಾಜ್ಯದ ಸಹಕಾರ ಸಂಘ ಸಂಸ್ಥೆಗಳು ಆಯೋಜಿಸುವ ಸ್ವ ಸಹಾಯ ಗುಂಪುಗಳ ಇತರ ಸದಸ್ಯರನ್ನು ಒಳಗೊಂಡಿದೆ. ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ ೫ ಲಕ್ಷ ರೂ. ಗಳ ವೈದ್ಯಕೀಯ ಸೇವೆಯನ್ನು ಒದಗಿಸುತ್ತಾ ಬಂದಿದ್ದು, ಈ ಸಮಗ್ರ ಆರೋಗ್ಯ ಯೋಜನೆಯನ್ನು ಯಶಸ್ವಿನಿ ಸಹಕಾರಿ ರೈತರ ಆರೋಗ್ಯ ರಕ್ಷಣಾ ಟ್ರಸ್ಟ್ ನಿರ್ವಹಿಸುತ್ತಿದೆ.

ಯಶಸ್ವಿನಿ ಯೋಜನೆ ಮರು ಜಾರಿ: ೨೦೧೮ರಲ್ಲಿ ಸ್ಥಗಿತಗೊಳಿಸಿದ್ದ ಯಶಸ್ವಿನಿ ಯೋಜನೆಯನ್ನು ರಾಜ್ಯದ ಎಲ್ಲ ಸಹಕಾರಿಗಳು ಮತ್ತು ರೈತರ ನಿರಂತರ ಒತ್ತಾಯ ಹಾಗೂ ಬೇಡಿಕೆ ಪರಿಗಣಿಸಿ, ಯೋಜನೆಯ ಮರು ಜಾರಿಗೆ ತೀರ್ಮಾನಿಸಿದ ರಾಜ್ಯ ಸರ್ಕಾರ ೨೦೨೨-೨೩ನೇ ಸಾಲಿನ ಆಯವ್ಯಯದಲ್ಲಿ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಘೋಷಣೆ ಮಾಡಿದೆ.

ಯೋಜನೆ ಜಾರಿಗಾಗಿ ‘ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್’ ಅನ್ನು ರಚಿಸಿದ್ದು, ಮುಖ್ಯಮಂತ್ರಿಗಳು ಈ ಟ್ರಸ್ಟ್‌ನ ಮಹಾ ಪೋಷಕರಾಗಿ, ಸಹಕಾರ ಸಚಿವರು ಪೋಷಕರಾಗಿ, ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟ್ರಸ್ಟ್‌ನ ಅಧ್ಯಕ್ಷರಾಗಿರುತ್ತಾರೆ. ಸಹಕಾರ ಸಂಘಗಳ ನಿಬಂಧಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ವೈದ್ಯಕೀಯ ಕ್ಷೇತ್ರದ ನುರಿತ ವೈದ್ಯಕೀಯ ತಜ್ಞರು ಹಾಗೂ ಇಬ್ಬರು ಹಿರಿಯ  ಸಹಕಾರಿಗಳು ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಿಂದ ತಲಾ ಒಬ್ಬರು ಟ್ರಸ್ಟ್‌ನ  ಸದಸ್ಯರಾಗಿರುತ್ತಾರೆ

ನಗದು ರಹಿತವಾಗಿ ೨೧೨೮ ಚಿಕಿತ್ಸೆಗಳಿಗೆ ಅವಕಾಶ:  ನೋಂದಾಯಿತ ಸದಸ್ಯರಿಗೆ ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ ಅನ್ನು ಒದಗಿಸಲಾಗುತ್ತಿದ್ದು, ಅದನ್ನು ಬಳಸಿ, ಯೋಜನೆಯಡಿ ಗುರುತಿಸಿದ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ (ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಅಳವಡಿಸಿಕೊಂಡಿರುವ) ೧೬೫೦ ಚಿಕಿತ್ಸೆಗಳು ಮತ್ತು ೪೭೮ ಐಸಿಯು ಸೇರಿ ಒಟ್ಟು ೨೧೨೮ ಚಿಕಿತ್ಸೆಗಳನ್ನು ನಗದು ರಹಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು, ಕಿವಿ, ಮೂಗು, ಗಂಟಲು ವ್ಯಾಧಿಗಳು, ಕರುಳು ಸಂಬಂಧಿ ಕಾಯಿಲೆಗಳು, ನರಗಳಿಗೆ ಸಂಬಂಧಿಸಿದ ಕಾಯಿಲೆಗಳು, ಕಣ್ಣಿನ ಕಾಯಿಲೆಗಳು, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಕಾಯಿಲೆ ಇತ್ಯಾದಿ ರೋಗಗಳಿಗೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದೆ.

ಗುರಿ ಮೀರಿ ಸಾಧನೆ:  ೨೦೨೨-೨೩ನೇ ಸಾಲಿಗೆ ೩೦ ಲಕ್ಷ ಸದಸ್ಯರ ನೋಂದಣಿ ಗುರಿ ನೀಡಲಾಗಿತ್ತು. ಈ ಗುರಿಗೆ ಬದಲಾಗಿ ೨೦೨೩ರ ಮಾರ್ಚ್ ಅಂತ್ಯಕ್ಕೆ ಗುರಿ ಮೀರಿ ೪೭ಲಕ್ಷಕ್ಕೂ ಹೆಚ್ಚಿನ ಸದಸ್ಯರು ಯೋಜನೆಯಡಿ ನೋಂದಣಿ ಮಾಡಿಕೊಂಡಿರುವುದು ಈ ಯೋಜನೆಗೆ ಇರುವ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ೨೦೨೪ರ ಮಾರ್ಚ್ ೧೦ರವರೆಗೆ ಸುಮಾರು ೬೩,೬೯೧ ಫಲಾನುಭವಿಗಳು ೧೦೩ ಕೋಟಿ ರೂ. ಮೊತ್ತದ ಚಿಕಿತ್ಸೆಗಳನ್ನು ರಾಜ್ಯಾ ದ್ಯಂತ ಯಶಸ್ವಿನಿ ನೆಟ್‌ವರ್ಕ್ ಆಸತ್ರೆಗಳಲ್ಲಿ ಪಡೆದುಕೊಂಡಿದ್ದಾರೆ.

” ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರುಗಳು ತಮ್ಮ ಜಿಲ್ಲೆಗಳ ಸಹಕಾರ ಸಂಘಗಳ ಅಧ್ಯಕ್ಷರ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳ ಸಭೆ ಕರೆದು ಕಾರ್ಯಾಗಾರ ಏರ್ಪಡಿಸಿ, ಯೋಜನೆಯ ಮಾರ್ಗಸೂಚಿ ನಿಯಮಗಳು, ಇತಿಮಿತಿಗಳು ಮತ್ತು ಯೋಜನೆಯಡಿ ಲಭ್ಯವಿ ರುವ ಸೌಲಭ್ಯದ ವಿವರಗಳ ಮಾಹಿತಿ ನೀಡಿ, ತೆಗೆದುಕೊಂಡ ಕ್ರಮದ ಬಗ್ಗೆ ಸರ್ಕಾರಕ್ಕೆ ವರದಿ ನೀಡಲು ಸೂಚಿಸಿದೆ.”

ಜಿ.ರಂಗನಾಥ, ಅಧಿನ ಕಾರ್ಯದರ್ಶಿ, ಸಹಕಾರ ಇಲಾಖೆ

ಆಂದೋಲನ ಡೆಸ್ಕ್

Recent Posts

ರಾಕಿಂಗ್‌ ಸ್ಟಾರ್‌ ಯಶ್‌ ಹುಟ್ಟುಹಬ್ಬದಂದೇ ಅಭಿಮಾನಿಗಳಿಗೆ ಗಿಫ್ಟ್‌: ಟಾಕ್ಸಿಕ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್‌ ಸಿಕ್ಕಿದ್ದು, ಬಹುನಿರೀಕ್ಷಿತ ಟಾಕ್ಸಿಕ್‌ ಚಿತ್ರದ ಟೀಸರ್‌ ಇಂದು ರಿಲೀಸ್‌ ಆಗಿದೆ.…

35 mins ago

ಹುಲಿಗೆ ವಿಷಪ್ರಾಷನ ಮಾಡಿದ್ದ ಆರೋಪಿ ಸೆರೆ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷ ಪ್ರಶಾನದಿಂದ ಹುಲಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ…

1 hour ago

ಓದುಗರ ಪತ್ರ: ಸಾರ್ವಜನಿಕ ಶೌಚಾಲಯಗಳ ಬೀಗ ತೆರವು

ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ…

5 hours ago

ಓದುಗರ ಪತ್ರ: ಬಾಂಬ್ ಬೆದರಿಕೆ: ಕಠಿಣ ಶಿಕ್ಷೆ ನೀಡಿ

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ…

5 hours ago

ಓದುಗರ ಪತ್ರ: ದಾಖಲೆ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ…

5 hours ago

ಕಕ್ಕೆಹೊಳೆ, ಗಾಂಧಿ ವೃತ್ತದಲ್ಲಿ ಕ್ಯಾಮೆರಾ ಕಾರ್ಯಾರಂಭ

ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…

5 hours ago