Mysore
20
overcast clouds

Social Media

ಬುಧವಾರ, 13 ನವೆಂಬರ್ 2024
Light
Dark

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೪-೨೫ನೇ ಸಾಲಿಗೆ ಮೆಟ್ರಿಕ್ ನಂತರದ ‘ವಿದ್ಯಾರ್ಥಿವೇತನ’, ‘ಶುಲ್ಕ ಮರುಪಾವತಿ’, ‘ವಿದ್ಯಾಸಿರಿ’ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ನ. ೩೦ ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಸಲ್ಲಿಸಬಹುದು. ಮಾಹಿತಿಗಾಗಿ ಮೊ.ಸಂ 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ದೂ. ಸಂ. 19032 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: