ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೪-೨೫ನೇ ಸಾಲಿಗೆ ಮೆಟ್ರಿಕ್ ನಂತರದ ‘ವಿದ್ಯಾರ್ಥಿವೇತನ’, ‘ಶುಲ್ಕ ಮರುಪಾವತಿ’, ‘ವಿದ್ಯಾಸಿರಿ’ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ನ. ೩೦ ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಸಲ್ಲಿಸಬಹುದು. ಮಾಹಿತಿಗಾಗಿ ಮೊ.ಸಂ 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ದೂ. ಸಂ. 19032 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…
ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ…