ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ
ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ ಶಿರಗೋಡು ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಇದೀಗ ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ.
ಮಕ್ಕಳ ದಾಖಲಾತಿ ಕಡಿಮೆಯಾಗಿ ಕ್ರಮೇಣ ಸರ್ಕಾರಿ ಶಾಲೆಯನ್ನು ಮುಚ್ಚಿ ರುವುದರಿಂದ ಇದೀಗ ಕಟ್ಟಡ ನಿರುಪಯುಕ್ತವಾಗಿದ್ದು, ಪಾಳು ಕೊಂಪೆಯಂತಾಗಿದೆ. ಕಿಟಕಿ ಬಾಗಿಲು ಇಲ್ಲದೆ ಅನಾಥವಾಗಿದ್ದು, ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಶಾಲಾ ಕೊಠಡಿಗಳಲ್ಲಿ ಬಿಯರ್ ಬಾಟಲಿಗಳು ಹಾಗೂ ಇನ್ನಿತರ ಮದ್ಯದ ಬಾಟಲಿಗಳು, ಪೌಚ್‌ಗಳು ಕಣ್ಣಿಗೆ ರಾಚುತ್ತಿವೆ.
ಅಲ್ಲದೇ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಡುವ ಎಲ್ಲ ಲಕ್ಷಣಗಳೂ ಕಾಣಿಸುತ್ತಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಸರ್ಕಾರಿ ಶಾಲೆಯ ಕೊಠಡಿಯಲ್ಲಿ ಅನೇಕ ಮದ್ಯದ ಬಾಟಲಿಗಳು ಬಿದ್ದಿರುವುದನ್ನು ಗಮನಿಸಿದರೆ ಈ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಯಾವುದೇ ಅಳುಕಿಲ್ಲದೆ ನಡೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತದೆ. ಸಂಬಂಧಪಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನಿರುಪಯುಕ್ತವಾಗಿರುವ ಶಾಲೆಯ ಕೊಠಡಿಯಲ್ಲಿ ಒಂದು ಒಳ್ಳೆಯ ಗ್ರಂಥಾಲಯವನ್ನು ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಧಿಕಾರಿಗಳು ನಮ್ಮ ಮನವಿಯನ್ನು ಪುರಸ್ಕರಿಸಿ ಇದೇ ಕೊಠಡಿಯಲ್ಲಿ ಗ್ರಂಥಾಲಯ ತೆರೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಮುಚ್ಚಿರುವ ಸರ್ಕಾರಿ ಶಾಲೆಗಳು:
ಶಿರಗೋಡು ಶಾಲೆಯನ್ನು ಮುಚ್ಚಿ ಸುಮಾರು ೭ ವರ್ಷಗಳೇ ಕಳೆದಿವೆ. ೨೦೧೭-೨೦೧೮ರ ಸಾಲಿನಲ್ಲೇ ಮಕ್ಕಳಿಲ್ಲ ಎಂಬ ಕಾರಣಕ್ಕೆ ಶಾಲೆಯನ್ನು ಮುಚ್ಚಲಾಗಿತ್ತು. ಇದೀಗ ಹನೂರು ತಾಲ್ಲೂಕಿನಲ್ಲಿ ಶಿರಗೋಡು ಸೇರಿದಂತೆ ಸುಂಟರದೊಡ್ಡಿ, ದೊಡ್ಡ ಮಾಲಾಪುರ, ಚಿಕ್ಕಾಲತ್ತೂರು, ಇನ್ನಿತರ ಶಾಲೆಗಳು ಸಹ ಮುಚ್ಚುವ ಹಂತಕ್ಕೆ ಬಂದಿವೆ.
ವಿಷಯ ತಿಳಿದ ತಕ್ಷಣ ಸ್ವಚ್ಛತೆ:
ಪತ್ರಿಕಾ ಮಾಧ್ಯಮದವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಈ ವಿಚಾರವಾಗಿ ಚರ್ಚೆ ನಡೆಸಿದ ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಶಾಲೆಯ ಒಳಗಡೆ ಇದ್ದಂತಹ ಮದ್ಯದ ಬಾಟಲಿಗಳನ್ನು ತೆರವುಗೊಳಿಸಿ, ಶಾಲೆಯನ್ನು ಸ್ವಚ್ಛಗೊಳಿಸಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…