ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ
ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ ಸರ್ಕಾರಿ ಶಾಲೆಗಳಲ್ಲಿ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದು ಮನೆಗಳತ್ತ ಶಿಕ್ಷಕರು ತೆರಳುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ವಡಕೆಹಳ್ಳ ಕ್ಲಸ್ಟರ್ ವ್ಯಾಪ್ತಿಯ ದಂಟಳ್ಳಿ ಶಾಲೆಗಳಲ್ಲಿ ಶಾಲಾ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಜಿಪಿಎಸ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವಧಿಗೂ ಮುನ್ನ ಶಾಲೆಗೆ ಬೀಗ: ದಂಟಳ್ಳಿ ಗ್ರಾಮದಲ್ಲಿರುವ ೨ ಸರ್ಕಾರಿ ಶಾಲೆಗಳಲ್ಲಿ ಸಂಜೆ ೪ರವರೆಗೂ ಶಾಲಾ ಅವಧಿ ಇದ್ದರೂ ಅದಕ್ಕೂ ಮುಂಚಿತವಾಗಿಯೇ ಶಾಲೆಗೆ ಬೀಗ ಹಾಕಿ ಮನೆಯತ್ತ ಶಿಕ್ಷಕರು ತೆರಳುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಾಕ್ಷಿ ಸಮೇತ ತಿಳಿಸಿದೆ.
ಕಳೆದ ವಾರ ಡಿ.೨೪ ರಂದು ಆ ಭಾಗದ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಧ್ಯಾಹ್ನ ೩.೩೦ಕ್ಕೆ ಶಾಲೆಗೆ ಬೇಗ ಹಾಕಲಾಗಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರಿಲ್ಲದೆ ಮಕ್ಕಳೇ ಶಾಲೆಗೆ ಬೀಗ ಹಾಕುವ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಇಂತಹ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕೊಳ್ಳೆಗಾಲ ತಾಲ್ಲೂಕು ಅಧ್ಯಕ್ಷ ಅಜ್ಗರ್ ಪಾಷ ಆಗ್ರಹಿಸಿದ್ದಾರೆ.
ಹೀಗೆ ಅವಧಿಗೂ ಮುನ್ನವೇ ಶಾಲೆಗೆ ಬೇಗ ಹಾಕುತ್ತಿರುವುದು ಮಕ್ಕಳ ಕಲಿಕೆಗೆ ಹಿನ್ನಡೆ ಉಂಟುಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಬಸ್ ವ್ಯವಸ್ಥೆ ಇಲ್ಲ : ಶಾಲಾ ಸಮಯಕ್ಕೆ ಅನುಗುಣವಾಗಿ ಕಾಡಂಚಿನ ಗ್ರಾಮದ ಪ್ರದೇಶಗಳಿಗೆ ತೆರಳಲು ಹಾಗೂ ವಾಪಸ್ ಬರಲು ಸೂಕ್ತ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಇರುವ ಬಸ್ ವ್ಯವಸ್ಥೆಗೆ ಹೊಂದಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಸಾರಿಗೆ ವ್ಯವಸ್ಥೆಯನ್ನು ಶಾಲೆಯ ಸಮಯಕ್ಕೆ ಅನುಗುಣವಾಗಿ ಸರಿದೂಗಿಸಿದರೆ ಇಂಥ ಸಮಸ್ಯೆಗಳಿಗೆ ಮುಕ್ತಿ ಸಿಗಬಹುದು ಎಂದು ಹೆಸರು ಹೇಳಲು ಇಚ್ಛಿಸದ ಶಿಕ್ಷಕರು ಮನವಿ ಮಾಡಿಕೊಂಡಿದ್ದಾರೆ.
ಹನೂರು ಶೈಕ್ಷಣಿಕ ವಲಯದ ಬೈಲೂರು, ಮೀಣ್ಯಂ, ಹೂಗ್ಯಂ, ಜಲ್ಲಿಪಾಳ್ಯ, ದಂಟಳ್ಳಿ, ಪೊನ್ನಾಚಿ, ಶಾಗ್ಯ, ಗೋಪಿನಾಥಂ ಮತ್ತಿತರ ಕಾಡಂಚಿನ ಗ್ರಾಮಗಳಿಗೆ ಶಾಲಾ ಅವಧಿಯಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಶಿಕ್ಷಕರಿಗೂ ತೊಂದರೆಯಾಗುತ್ತಿದೆ. ಆದ್ದರಿಂದ ಶಾಲೆ ಅವಧಿ ಮುಗಿದ ನಂತರದ ಸಮಯಕ್ಕೆ ತಕ್ಕಂತೆ ಬಸ್ ವ್ಯವಸ್ಥೆ ಮಾಡಿದರೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೂ ಹೆಚ್ಚಿನ ಅನು ಕೂಲವಾಗಲಿದೆ. ಆದ್ದರಿಂದ ಸಾರಿಗೆ ಅಽಕಾರಿಗಳು ಕಾಡಂಚಿನ ಗ್ರಾಮಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂಬ ಒತ್ತಾಯ ಕೇಳಿಬಂದಿದೆ.
” ಕಾಡಂಚಿನ ಗ್ರಾಮಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ತೊಂದರೆ ಆಗುತ್ತಿದೆ. ಆದರೂ ಸರ್ಕಾರಿ ನಿಯಮದಂತೆ ಶಾಲಾ ಅವಧಿ ಮುಗಿಯುವವರೆಗೂ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಬೇಕು. ಯಾರು ತಪ್ಪು ಮಾಡಿದ್ದಾರೆಯೋ ಅವರಿಗೆ ನೋಟಿಸ್ ನೀಡಿ ಮಾಹಿತಿ ತೆಗೆದುಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಕ್ರಮ ವಹಿಸಲಾಗುವುದು.
ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ, ಹನೂರು ವಲಯ
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್‌ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…