Andolana originals

ಅವಧಿಗೂ ಮುನ್ನ ಶಾಲೆಗೆ ಬೀಗ; ಕಲಿಕೆಗೆ ಹಿನ್ನಡೆ

ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ 

ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ ಸರ್ಕಾರಿ ಶಾಲೆಗಳಲ್ಲಿ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದು ಮನೆಗಳತ್ತ ಶಿಕ್ಷಕರು ತೆರಳುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ವಡಕೆಹಳ್ಳ ಕ್ಲಸ್ಟರ್ ವ್ಯಾಪ್ತಿಯ ದಂಟಳ್ಳಿ ಶಾಲೆಗಳಲ್ಲಿ ಶಾಲಾ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಜಿಪಿಎಸ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಧಿಗೂ ಮುನ್ನ ಶಾಲೆಗೆ ಬೀಗ: ದಂಟಳ್ಳಿ ಗ್ರಾಮದಲ್ಲಿರುವ ೨ ಸರ್ಕಾರಿ ಶಾಲೆಗಳಲ್ಲಿ ಸಂಜೆ ೪ರವರೆಗೂ ಶಾಲಾ ಅವಧಿ ಇದ್ದರೂ ಅದಕ್ಕೂ ಮುಂಚಿತವಾಗಿಯೇ ಶಾಲೆಗೆ ಬೀಗ ಹಾಕಿ ಮನೆಯತ್ತ ಶಿಕ್ಷಕರು ತೆರಳುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಾಕ್ಷಿ ಸಮೇತ ತಿಳಿಸಿದೆ.

ಕಳೆದ ವಾರ ಡಿ.೨೪ ರಂದು ಆ ಭಾಗದ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಧ್ಯಾಹ್ನ ೩.೩೦ಕ್ಕೆ ಶಾಲೆಗೆ ಬೇಗ ಹಾಕಲಾಗಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರಿಲ್ಲದೆ ಮಕ್ಕಳೇ ಶಾಲೆಗೆ ಬೀಗ ಹಾಕುವ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಇಂತಹ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕೊಳ್ಳೆಗಾಲ ತಾಲ್ಲೂಕು ಅಧ್ಯಕ್ಷ ಅಜ್ಗರ್ ಪಾಷ ಆಗ್ರಹಿಸಿದ್ದಾರೆ.

ಹೀಗೆ ಅವಧಿಗೂ ಮುನ್ನವೇ ಶಾಲೆಗೆ ಬೇಗ ಹಾಕುತ್ತಿರುವುದು ಮಕ್ಕಳ ಕಲಿಕೆಗೆ ಹಿನ್ನಡೆ ಉಂಟುಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಬಸ್ ವ್ಯವಸ್ಥೆ ಇಲ್ಲ : ಶಾಲಾ ಸಮಯಕ್ಕೆ ಅನುಗುಣವಾಗಿ ಕಾಡಂಚಿನ ಗ್ರಾಮದ ಪ್ರದೇಶಗಳಿಗೆ ತೆರಳಲು ಹಾಗೂ ವಾಪಸ್ ಬರಲು ಸೂಕ್ತ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಇರುವ ಬಸ್ ವ್ಯವಸ್ಥೆಗೆ ಹೊಂದಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಸಾರಿಗೆ ವ್ಯವಸ್ಥೆಯನ್ನು ಶಾಲೆಯ ಸಮಯಕ್ಕೆ ಅನುಗುಣವಾಗಿ ಸರಿದೂಗಿಸಿದರೆ ಇಂಥ ಸಮಸ್ಯೆಗಳಿಗೆ ಮುಕ್ತಿ ಸಿಗಬಹುದು ಎಂದು ಹೆಸರು ಹೇಳಲು ಇಚ್ಛಿಸದ ಶಿಕ್ಷಕರು  ಮನವಿ ಮಾಡಿಕೊಂಡಿದ್ದಾರೆ.

ಹನೂರು ಶೈಕ್ಷಣಿಕ ವಲಯದ ಬೈಲೂರು, ಮೀಣ್ಯಂ, ಹೂಗ್ಯಂ, ಜಲ್ಲಿಪಾಳ್ಯ, ದಂಟಳ್ಳಿ, ಪೊನ್ನಾಚಿ, ಶಾಗ್ಯ, ಗೋಪಿನಾಥಂ ಮತ್ತಿತರ ಕಾಡಂಚಿನ ಗ್ರಾಮಗಳಿಗೆ ಶಾಲಾ ಅವಧಿಯಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಶಿಕ್ಷಕರಿಗೂ ತೊಂದರೆಯಾಗುತ್ತಿದೆ. ಆದ್ದರಿಂದ ಶಾಲೆ ಅವಧಿ ಮುಗಿದ ನಂತರದ ಸಮಯಕ್ಕೆ ತಕ್ಕಂತೆ ಬಸ್ ವ್ಯವಸ್ಥೆ ಮಾಡಿದರೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೂ ಹೆಚ್ಚಿನ ಅನು ಕೂಲವಾಗಲಿದೆ. ಆದ್ದರಿಂದ ಸಾರಿಗೆ ಅಽಕಾರಿಗಳು ಕಾಡಂಚಿನ ಗ್ರಾಮಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

” ಕಾಡಂಚಿನ ಗ್ರಾಮಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ತೊಂದರೆ ಆಗುತ್ತಿದೆ. ಆದರೂ ಸರ್ಕಾರಿ ನಿಯಮದಂತೆ ಶಾಲಾ ಅವಧಿ ಮುಗಿಯುವವರೆಗೂ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಬೇಕು. ಯಾರು ತಪ್ಪು ಮಾಡಿದ್ದಾರೆಯೋ ಅವರಿಗೆ ನೋಟಿಸ್ ನೀಡಿ ಮಾಹಿತಿ ತೆಗೆದುಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಕ್ರಮ ವಹಿಸಲಾಗುವುದು.

ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ, ಹನೂರು ವಲಯ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago