Andolana originals

ದ್ವಿತೀಯ ಪಿಯುಸಿ: 5, 255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ನವೀನ್ ಡಿಸೋಜ

ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

೨೦೨೪-೨೫ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೆ ೪ನೇ ಸ್ಥಾನ ಪಡೆದಿತ್ತು. ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಪ್ರಾಧ್ಯಾಪಕರ ಸಹಕಾರದಲ್ಲಿ ಶ್ರಮಿಸಲಾಗುತ್ತಿದೆ. ಪರೀಕ್ಷೆ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿ ನೇತತ್ವದಲ್ಲಿ ಸಭೆ ನಡೆಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ಅನನುಕೂಲ ಆಗದಂತೆ ಪರೀಕ್ಷೆಗಳನ್ನು ನಡೆಸ ಬೇಕು ಎಂದು ಸಂಬಂಧಿಸಿದವರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಒಟ್ಟು ೧೮ ಪರೀಕ್ಷಾ ಕೇಂದ್ರಗಳಿದ್ದು, ಎಲ್ಲ ಕೇಂದ್ರಗಳಲ್ಲೂ ಉತ್ತಮ ಗಾಳಿ,ಬೆಳಕಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರೂ ಸೇರಿದಂತೆ ಎಲ್ಲರಿಗೂ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ನಿಯಂತ್ರಣ ಕೇಂದ್ರಗಳಲ್ಲಿನ ಎಲ್ಲ ಚಟುವಟಿಕೆಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲೇ ನಡೆಯಲಿವೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸುಗಮ ವಾಗಿ ಪರೀಕ್ಷೆ ನಡೆಯಲು ಬೇಕಾದ ಎಲ್ಲಾ ಕ್ರಮಗಳ ಜತೆಗೆ ಇಲಾಖೆ ಸನ್ನದ್ಧವಾಗಿದೆ.

ಜಿಲ್ಲೆಯಲ್ಲಿ ಈ ಬಾರಿ ೫,೨೫೫ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದು, ಮೊದಲ ಬಾರಿಗೆ ೪,೮೦೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ೨೫೦ ವಿದ್ಯಾರ್ಥಿಗಳು ಖಾಸಗಿಯಾಗಿ ಹಾಗೂ ೧೯೬ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ ೧,೦೫೪ ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ೨,೬೦೩ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ೧,೫೯೮ ವಿದ್ಯಾರ್ಥಿಗಳೂ ಸೇರಿದಂತೆ ಒಟ್ಟು ೫,೨೫೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಹಾಗೆಯೇ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಿಜಯ್ ತಿಳಿಸಿದ್ದಾರೆ.

ಜಿಯಲ್ಲಿ ಪರೀಕ್ಷೆಯನ್ನು ಸುಗಮ ಮತ್ತು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ೭ ಕಡೆಗಳಲ್ಲಿ ಮಾರ್ಗಾಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ೨ ಕಡೆ, ಸೋಮವಾರಪೇಟೆ ತಾಲ್ಲೂಕಿನಲ್ಲಿ ೧, ಕುಶಾಲನಗರ ತಾಲ್ಲೂಕಿನಲ್ಲಿ ೨, ವಿರಾಜಪೇಟೆ ತಾಲ್ಲೂಕಿನಲ್ಲಿ ೧ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ೧ ಮಾರ್ಗಾಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ. ಮಾರ್ಗಾಧಿಕಾರಿಗಳ ತಂಡದಲ್ಲಿ ಕಂದಾಯ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಇರಲಿದ್ದಾರೆ.

” ಜಿಲ್ಲೆಯ ೧೮ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮಡಿಕೇರಿ ತಾಲ್ಲೂಕಿನ ೫, ಸೋಮವಾರಪೇಟೆ ತಾಲ್ಲೂಕಿನ ೮ ಮತ್ತು ವಿರಾಜಪೇಟೆ ತಾಲ್ಲೂಕಿನ ೫ ಕಡೆಗಳಲ್ಲಿ ಪರೀಕ್ಷೆ ನಡೆಯಲಿದೆ. ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಪರೀಕ್ಷಾ ಸಮಯದಲ್ಲಿ ಮಕ್ಕಳಿಗೆ ಸಮಸ್ಯೆಯಾಗದಂತೆ ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತಿದೆ. ವಿದ್ಯಾರ್ಥಿಗಳಿರುವ ಪ್ರದೇಶದ ೧೦-೧೫ ಕಿ.ಮೀ. ಒಳಗೆ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಕಳೆದ ಬಾರಿ ಶೇ.೮೩.೮೪ ಫಲಿತಾಂಶ ಬಂದಿತ್ತು. ಈ ಬಾರಿ ಅದಕ್ಕಿಂತಲೂ ಉತ್ತಮ ಫಲಿತಾಂಶ ಪಡೆಯಲು ಪ್ರಯತ್ನಿಸಲಾಗುತ್ತಿದೆ.”

-ವಿಜಯ್, ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ 

” ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಫೆ.೨೮ ರಿಂದ ಮಾ.೧೭ ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ನಿಯೋಜನೆ ಸೇರಿದಂತೆ ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಪಾಲಿಸುವಂತೆ ತಿಳಿಸಲಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಲಾಗಿದೆ.”

-ಎಸ್.ಜೆ.ಸೋಮಶೇಖರ್, ಜಿಲ್ಲಾಧಿಕಾರಿ, ಕೊಡಗು

” ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪದವಿ ಪೂರ್ವ ಶಿಕ್ಷಣ, ಕಂದಾಯ, ಪೊಲೀಸ್, ಖಜಾನೆ, ಸಾರಿಗೆ, ಸೆಸ್ಕ್, ಆರೋಗ್ಯ ಹೀಗೆ ವಿವಿಧ ಇಲಾಖೆಗಳು ತಂಡವಾಗಿ ಕಾರ್ಯನಿರ್ವಹಿಸಲಿವೆ.”

-ಆರ್.ಐಶ್ವರ್ಯ, ಹೆಚ್ಚುವರಿ ಜಿಲ್ಲಾಧಿಕಾರಿ, ಕೊಡಗು

 

 

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

7 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

8 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

8 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

12 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

17 hours ago