Andolana originals

ಇಂದಿನಿಂದ ಸ್ವಯಂ ಗಣತಿ

ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ

ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ 

ಬೆಂಗಳೂರು: ರಾಷ್ಟ್ರೀಯ ಜನಗಣತಿ ೨೦೨೭ರ ಪ್ರಯುಕ್ತ ಬುಧವಾರ (ಏ.೧) ರಾಜ್ಯದಾದ್ಯಂತ ಮನೆ ಪಟ್ಟಿ ಮತ್ತು ಮನೆ ಸ್ವಯಂ ಗಣತಿ ಕಾರ್ಯ ಆರಂಭವಾಗಲಿದೆ. ಈ ಕಾರ್ಯವು ೧೫ ದಿನಗಳವರೆಗೆ ನಡೆಯಲಿದೆ. ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜನಗಣತಿ- ೨೦೨೭ರ ಪ್ರಥಮ ಹಂತದಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯಾಚರಣೆಗೆ ಸಂಬಂಽಸಿದಂತೆ ಪೂರ್ವ ಸಿದ್ಧತಾ ಕಾರ್ಯಗಳನ್ನು ವೇಗಗೊಳಿಸಲಾಗಿದ್ದು, ನಾಗರಿಕರು ತಮ್ಮ ಮನೆ ಹಾಗೂ ಕುಟುಂಬದ ಮೂಲ ಮಾಹಿತಿಯನ್ನು ನಿಖರವಾಗಿ ದಾಖಲಿಸುವುದು ಅತ್ಯಂತ ಮಹತ್ವದ್ದಾಗಿರುತ್ತದೆ.

ಸಾರ್ವ ಜನಿಕರಿಗೆ ತಮ್ಮ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಅವಕಾಶ ನೀಡುತ್ತದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಕೋವಿಡ್ ಕಾರಣದಿಂದಾಗಿ ೨೦೨೧ರಲ್ಲಿ ನಡೆಯ ಬೇಕಿದ್ದ ಜನಗಣತಿ ಮುಂದೂಡಲ್ಪಟ್ಟಿತ್ತು. ಈ ಬೃಹತ್ ಕಾರ್ಯವನ್ನು ನಡೆಸಲು ಕೇಂದ್ರ ಸಚಿವ ಸಂಪುಟವು ೧೧,೭೧೮ ಕೋಟಿ ರೂ.ಗಳ ಬಜೆಟ್ ಅನ್ನು ಅನು ಮೋದಿಸಿತ್ತು. ಕೊನೆಯ ರಾಷ್ಟ್ರವ್ಯಾಪಿ ಜನ ಗಣತಿಯನ್ನು ೨೦೧೧ರಲ್ಲಿ ನಡೆಸಲಾಗಿತ್ತು.

ಅದರಂತೆ, ಮನೆಯ ಯಾವುದೇ ಒಬ್ಬ ಸದಸ್ಯರು ಸುಮಾರು ೧೫-೨೦ ನಿಮಿಷಗಳ ಅವಽಯಲ್ಲಿ ಸ್ವಯಂ-ಗಣತಿ ಮಾಡಿ ಮನೆಯ ವಿವರಗಳನ್ನು ಒದಗಿಸಬಹುದು.

೨ನೇ ಹಂತದಲ್ಲಿ ಏ.೧೬ ರಿಂದ ಮೇ ೧೫ ರ ವರೆಗೆ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮನೆಪಟ್ಟಿ ಮತ್ತು ಮನೆ ಗಣತಿ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಗಣತಿದಾರರು ಮನೆಗೆ ಭೇಟಿ ನೀಡಿದಾಗ, ದೃಢೀ ಕರಿಸಲು ಮತ್ತು ಸ್ವಯಂ-ಗಣತಿ ದತ್ತಾಂಶದ ಅಂತಿಮ ಸಲ್ಲಿಕೆಗಾಗಿ ಸ್ವಯಂ-ಗಣತಿ ಐಡಿಯನ್ನು ಗಣತಿದಾರರೊಂದಿಗೆ ಹಂಚಿಕೊಳ್ಳಬೇಕಾಗಿರುತ್ತದೆ. ಸ್ವಯಂ ಗಣತಿ ಪ್ರಕ್ರಿಯೆಗಾಗಿ ನಿಗದಿಪಡಿಸಿರುವ ಅವಧಿಯಲ್ಲಿ ನಾಗರಿಕರು ತಮ್ಮ ಮಾಹಿತಿಯನ್ನು ದಾಖಲಿಸಲು ಅವಕಾಶವಿದ್ದು, ಇದರಿಂದ ಜನಗಣತಿ ಕಾರ್ಯದಲ್ಲಿ ಪಾರದರ್ಶಕತೆ, ವೇಗ ಮತ್ತು ನಿಖರತೆ ಹೆಚ್ಚಲಿದೆ.

ಏನೆಲ್ಲಾ ಮಾಹಿತಿ ?: 

ಮನೆ ಮಾಲೀಕತ್ವ, ಕಟ್ಟಡದ ವಿಧ, ಕುಡಿಯುವ ನೀರು, ವಿದ್ಯುತ್, ಶೌಚಾಲಯ ಸೌಲಭ್ಯ, ವಾಹನಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಲಭ್ಯತೆ ಸೇರಿದಂತೆ ೩೪ ಪ್ರಮುಖ ಪ್ರಶ್ನೆಗಳಿಗೆ ಉತ್ತರಿಸಬೇಕು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago