Andolana originals

ಸರ್ವರ್ ಸಮಸ್ಯೆ; ಪಡಿತರ ಪಡೆಯಲು ಪಡಿಪಾಟಲು

ಭೇರ್ಯ ಮಹೇಶ್

ಅವಳಿ ತಾಲ್ಲೂಕುಗಳಲ್ಲಿ ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹ 

ಕೆ.ಆರ್.ನಗರ: ಕೇಂದ್ರ ಸರ್ಕಾರದ ನಿರ್ದೇಶನದಂತೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಆಹಾರಧಾನ್ಯವನ್ನು ಒಂದೇ ಅವಧಿಯಲ್ಲಿ ವಿತರಿಸಲಾಗುತ್ತಿದ್ದು, ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ ಎದುರಾಗಿರುವುದರಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿ ಮುಂದೆ ರಾತ್ರಿ ವೇಳೆವರೆಗೂ ಚಾತಕಪಕ್ಷಿಯಂತೆ ಕಾಯುವಂತಾಗಿದೆ.

ತಾಲ್ಲೂಕಿನ ಗಂಧನಹಳ್ಳಿ, ಹೊಸ ಅಗ್ರಹಾರ ಸೇರಿದಂತೆ ಅವಳಿ ತಾಲ್ಲೂಕುಗಳ ಪಡಿತರದಾರರು ಆಹಾರ ಧಾನ್ಯವನ್ನು ಪಡೆದುಕೊಳ್ಳಲು ತಡರಾತ್ರಿಯವರೆಗೂ ಸರದಿ ಸಾಲಿನಲ್ಲಿ ನಿಂತು  ಎರಡೆರಡು ಬಾರಿ ಬಯೋಮೆಟ್ರಿಕ್ ಬೆರಳಚ್ಚು ನೀಡುತ್ತಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ರಾಜ್ಯಾದ್ಯಂತ ಪಡಿತರ ಚೀಟಿದಾರರಿಗೆ ಎರಡು ತಿಂಗಳ ಪಡಿತರ ಅಕ್ಕಿಯನ್ನು ಒಂದೇ ಅವಧಿಯಲ್ಲಿ ವಿತರಿಸಲಾಗುತ್ತಿದೆ. ಆದರೆ ೨ ತಿಂಗಳ ಪಡಿತರ ಪಡೆಯಲು ಪ್ರತ್ಯೇಕವಾಗಿ ಬಯೋಮೆಟ್ರಿಕ್ ಬೆರಳಚ್ಚು ನೀಡಬೇಕಿರುವುದರಿಂದ ಸರ್ವರ್ ಸಮಸ್ಯೆ ಪಡಿತರದಾರರಿಗೆ ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ತಲೆ ನೋವಾಗಿ ಪರಿಣಮಿಸಿದೆ.

ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ಕಾಯುವ ಪರಿಸ್ಥಿತಿ ಬಿಪಿಎಲ್ ಹಾಗೂ ಎಎವೈ ಕಾರ್ಡು ದಾರರಿಗೆ ಬಂದಿದೆ. ಎರಡು ತಿಂಗಳ ಪಡಿತರ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ತಮ್ಮ ದಿನ ನಿತ್ಯದ ಕೂಲಿ ಕೆಲಸ ಬಿಟ್ಟು ತೆರಳುತ್ತಿದ್ದಾರೆ. ಆದರೆ ಸರ್ವರ್ ನಿಧಾನಗತಿ ಹಾಗೂ ವ್ಯತ್ಯಯದಿಂದ ಪಡಿತರ ಪಡೆಯಲು ಗಂಟೆಗಟ್ಟಲೆ ಕಾಯಬೇಕಾಗಿದೆ. ಸರ್ವರ್ ಸಮಸ್ಯೆ ಕುರಿತು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಆಹಾರ ಇಲಾಖೆ ಅಧಿಕಾರಿಗಳಿಗೆ ಪಡಿತರದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರು ಮಾಹಿತಿ ನೀಡಿದ್ದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಅವಳಿ ತಾಲ್ಲೂಕುಗಳ ಆಹಾರ ಇಲಾಖೆ ಶಿರಸ್ತೆದಾರರು ಪಡಿತರ ವಿತರಣೆ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಸರ್ವರ್ ಸಮಸ್ಯೆ ಆಲಿಸದೆ ಇರುವುದು ಪಡಿತದಾರರನ್ನು ಕೆರಳಿಸಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸದಿದ್ದರೆ ಆಹಾರ ಇಲಾಖೆ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಡಿತದಾರರು ಒತ್ತಾಯಿಸುತ್ತಿದ್ದಾರೆ. ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪದೇಪದೇ ಸರ್ವರ್ ಸಮಸ್ಯೆ ಎಂಬ ನೆಪವೊಡ್ಡಲಾಗುತ್ತಿದೆ. ಆದ್ದರಿಂದ ಉಚಿತ ಅಕ್ಕಿ ವಿತರಣೆಯ ಜೊತೆಗೆ ತಾಂತ್ರಿಕ ವ್ಯವಸ್ಥೆಯನ್ನೂ ಸಮರ್ಪಕವಾಗಿ ನಿರ್ವಹಿಸಿ, ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂಬುದು ಪಡಿತರದಾರರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರ ಒತ್ತಾಯವಾಗಿದೆ.

” ನ್ಯಾಯಬೆಲೆ ಅಂಗಡಿಗಳಲ್ಲಿ ಮೊದಲು ಎರಡು ದಿನ ಪಡಿತರ ವಿತರಣೆ ಮಾಡಿ ಬಳಿಕ ೨೫ರಂದು ಬೆಳಿಗ್ಗೆ ಬನ್ನಿ ಅಥವಾ ಸಂಜೆ ಬನ್ನಿ ಎಂದು ಸಬೂಬು ಹೇಳುತ್ತಾರೆ. ಕಾರಣ ಕೇಳಿದರೆ ಸರ್ವರ್ ಸಮಸ್ಯೆ ಎಂದು ನೆಪ ಹೇಳುತ್ತಾರೆ. ಈ ಸಮಸ್ಯೆ ಸರಿಪಡಿಸು ವವರು ಯಾರು? ಆಹಾರ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ, ಆಹಾರ ಇಲಾಖೆ ಅಧಿಕಾರಿಗಳ ಅಸಡ್ಡೆ ಕಾಣುತ್ತಿದೆ.”

-ಡೇರಿ ಬೀರೇಶ್, ಪಡಿತರದಾರರು, ಗಂಧನಹಳ್ಳಿ ಗ್ರಾಮ

” ಅವಳಿ ತಾಲ್ಲೂಕುಗಳಲ್ಲಿ ಶೇ.೮೨ರಷ್ಟು ಪಡಿತರವನ್ನು ವಿತರಣೆ ಮಾಡಲಾಗಿದೆ. ಸರ್ವರ್ ಸಮಸ್ಯೆ ಇದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಭಾನುವಾರವಾದರೂ ಜನರು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ಪಡೆಯುತ್ತಿದ್ದಾರೆ. ಹಾಗಾಗಿ ಸೋಮವಾರ ಕಡೇ ದಿನವಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳನ್ನು ಸರ್ವರ್ ಸಮಸ್ಯೆ ಇರುವ ನ್ಯಾಯಬೆಲೆ ಅಂಗಡಿಗಳಿಗೆ ಕಳುಹಿಸಿ ಸಮಸ್ಯೆ ಬಗೆಹರಿಸಲಾಗುತ್ತದೆ.”

-ಜಿ.ಸುರೇಂದ್ರಮೂರ್ತಿ, ತಹಸಿಲ್ದಾರ್, ಕೆ.ಆರ್.ನಗರ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

32 mins ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

34 mins ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

36 mins ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

42 mins ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

57 mins ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

1 hour ago