೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ
ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ ರಾಜಕಾಲುವೆ ಸೇತುವೆ ಕುಸಿದು ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಬಡಾವಣೆಯ ನಿವಾಸಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ರಾಜಕಾಲುವೆ ನಿರ್ಮಾಣಗೊಂಡು ದಶಕಗಳು ಕಳೆದಿದ್ದು, ಸೂಕ್ತ ನಿರ್ವಹಣೆ ಇಲ್ಲದ ಕಾರಣ ಸೇತುವೆ ಕುಸಿದು ಬಿದ್ದಿದೆ. ಸೇತುವೆ ಕುಸಿದು ೬ ತಿಂಗಳಾಗಿದ್ದು, ಬಡಾವಣೆಯಲ್ಲಿ ಸಂಚಾರ ಮಾಡಲು ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ.
ಸೇತುವೆ ಕುಸಿದ ಪರಿಣಾಮ ಒಳಚರಂಡಿಗೆ ಹಾನಿಯಾಗಿ ನೀರು ಅಕ್ಕಪಕ್ಕದ ಮನೆಗಳಿಗೆ ಹರಿದು ಹೋಗುತ್ತಿದ್ದು, ಇದರ ವಾಸನೆಗೆ ನಿದ್ರೆ ಇಲ್ಲದಂತಾಗಿದೆ. ಅಲ್ಲದೆ, ಚರ್ಮರೋಗ, ಕಾಲು ತುರಿಕೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸೇತುವೆ ಕುಸಿದ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ. ನಗರಪಾಲಿಕೆ ಚುನಾವಣೆ ನಡೆಯದಿರುವುದರಿಂದ ಅಧಿಕಾರಿಗಳ ಬೇಜವಾಬ್ದಾರಿ ಹೆಚ್ಚಾಗಿದೆ ಎಂದು ನಿವಾಸಿಗಳು ದೂರಿದ್ದಾರೆ. ಸಮಸ್ಯೆಯನ್ನು ತಕ್ಷಣ ಪರಿ ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಶಾಸಕರು ಗಮನಹರಿಸುತ್ತಿಲ್ಲ: ಸೇತುವೆ ಕುಸಿತದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗದೆ, ಜನಸ್ಪಂದನಾ ಸಭೆಗಳಲ್ಲಿ ಹಾಗೂ ಹಲವು ಬಾರಿ ಶಾಸಕರಿಗೂ ದೂರು ನೀಡಲಾಗಿದೆ. ಆದರೆ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಮತ ಕೇಳಲು ಬಡಾವಣೆಯ ಕಡೆ ಗಮನಹರಿಸುತ್ತಾರೆ. ಸಮಸ್ಯೆ ಎದುರಾದಾಗ ನಿರ್ಲಕ್ಷ್ಯ ತೋರಿಸುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಡಾವಣೆಯಲ್ಲಿ ಹಲವು ಸಮಸ್ಯೆಗಳು: ರಾಮಕೃಷ್ಣನಗರ ಬಡಾವಣೆಯ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಬಡಾವಣೆಯಲ್ಲಿರುವ ರಾಮಕೃಷ್ಣನಗರದ ಪರಮ ಹಂಸ ಉದ್ಯಾನವನ ದಲ್ಲಿ ಮಕ್ಕಳ ಆಟಿಕೆಗಳು ಮುರಿದು ಬಿದ್ದಿವೆ. ಹಾಗೆಯೇ ಕೆಲವು ಮನೆಗಳಿಗೆ ಕಳೆದ ೫ ದಿನಗಳಿಂದ ನೀರು ವ್ಯತ್ಯಯವಾಗಿದೆ ಎಂದು ನಿವಾಸಿಗಳು ಅಲವತ್ತುಕೊಂಡಿದ್ದಾರೆ.
” ಸೇತುವೆ ಕುಸಿದು ೬ ತಿಂಗಳಾಗಿದೆ. ತಕ್ಷಣ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ, ಸರಿಯಾಗಿ ಸ್ಪಂದಿಸುತ್ತಿಲ್ಲ. ನಗರಪಾಲಿಕೆಗೆ ಚುನಾವಣೆ ನಡೆಯದೆ ಜನಪ್ರತಿನಿಧಿಗಳಿಲ್ಲದ ಕಾರಣ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಟೆಂಡರ್ ಆಗಿದೆ. ಕಾಮಗಾರಿ ಆರಂಭಿಸುತ್ತೇವೆ ಎಂದು ಹೇಳುತ್ತಾರೆ.”
-ಲಕ್ಷ್ಮೀ ಕಿರಣ್‌ಗೌಡ, ನಗರಪಾಲಿಕೆ ಮಾಜಿ ಸದಸ್ಯರು
” ಸೇತುವೆ ನಿರ್ಮಾಣಕ್ಕೆ ೫೨ ಲಕ್ಷ ರೂ. ಟೆಂಡರ್ ಆಗಿದೆ. ಶುಕ್ರವಾರದಿಂದ ಕೆಲಸ ಪ್ರಾರಂಭವಾಗುತ್ತದೆ.”
ಸತ್ಯಮೂರ್ತಿ, ಅಭಿವೃದ್ಧಿ ಅಧಿಕಾರಿ, ನಗರಪಾಲಿಕೆ ವಲಯ ಕಚೇರಿ-೩
” ರಾಮಕೃಷ್ಣನಗರ ಬಡಾವಣೆಯ ರಸ್ತೆಗಳು ಮತ್ತು ಉದ್ಯಾನವನಗಳು ನಿರ್ವಹಣೆಯಿಲ್ಲದೆ ಸೊರಗಿದ್ದು, ರಾಜಕಾಲುವೆ ಸೇತುವೆ ಕುಸಿದ ಪರಿಣಾಮ ನಿವಾಸಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.”
-ಎಂ.ಬಸವಣ್ಣ
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…
ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…
ಬೆಂಗಳೂರು: ಮಾರ್ಚ್.28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್…
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…