ಮೈಸೂರು: ದಸರಾ ಹಾಗೂ ಶರನ್ನವರಾತ್ರಿಯ ಅಂಗವಾಗಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಬರಿಗಾಲಿನಲ್ಲಿ ಚಾಮುಂಡಿಬೆಟ್ಟ ಹತ್ತುವ ಮೂಲಕ ನವರಾತ್ರಿಯ ಹರಕೆ ತೀರಿಸಿದರು.
ಪ್ರತಿ ನವರಾತ್ರಿ ಹಾಗೂ ಆಷಾಢ ಮಾಸದ ಸಂದರ್ಭದಲ್ಲಿ ಅವರು ಬೆಟ್ಟ ಹತ್ತುವ ಪದ್ಧತಿಯನ್ನು ಆಚರಿಸುತ್ತಾ ಬಂದಿದ್ದು, ಅದೇ ರೀತಿ ಗುರುವಾರವೂ ಮೆಟ್ಟಿಲಿನ ಮೂಲಕ ಬೆಟ್ಟವನ್ನು ಹತ್ತಿದರು. ಕೆ. ಆರ್. ಕ್ಷೇತ್ರದ ಶಾಸಕ ಟಿ. ಎಸ್. ಶ್ರೀವತ್ಸ, ಮಾಜಿ ಮಹಾ ಪೌರ ಶಿವಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ಧರಾಜು ಹಾಗೂ ಸ್ಥಳೀಯ ನಾಯಕರು ಸಾಥ್ ನೀಡಿದರು. ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ನಾಡಹಬ್ಬ ದಸರಾ ಜನತೆಯ ದಸರಾ ಆಗಬೇಕೇ ಹೊರತು ಸರ್ಕಾರದ ದಸರಾವಾಗಬಾರದು. ಜೊತೆಗೆ ಅಽದೇವತೆ ನೆಲೆಸಿ ರುವ ಚಾ. ಬೆಟ್ಟವನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದರ ಜತೆಗೆ ಸ್ವಚ್ಛತೆ ಕಡೆ ಹೆಚ್ಚು ಗಮನಹರಿಸಬೇಕು ಎಂದರು. ಸಿಎಂ ಸಿದ್ದರಾಮಯ್ಯ ಅವರು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಆರೋಪಿಯಾಗಿದ್ದ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…