‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ
ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ೪೦.೬೮ ಲಕ್ಷ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಅಥವಾ ಪಾದರಕ್ಷೆ(ಚಪ್ಪಲಿ) ವಿತರಿಸಲು ಸರ್ಕಾರ ಮುಂದಾಗಿದೆ.
ಈ ಸಂಬಂಧ ೬ ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಎಸ್‌ಎಟಿಎಸ್ ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ದಾಖಲಾತಿಯ ಸಂಖ್ಯೆಯನ್ನು ಖಚಿತಪಡಿಸಿ ಕೊಂಡು ಅದಕ್ಕೆ ಅನುಗುಣವಾಗಿ ಅನುದಾನವನ್ನು ಭರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಆದೇಶಿಸಿದೆ.
ಅನುದಾನ ಬಳಕೆಗೆ ಹಲವು ಷರತ್ತು ಮತ್ತು ನಿಬಂಧನೆಗಳನ್ನು ವಿಧಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಪಾದರಕ್ಷೆಯನ್ನು ಸ್ಥಳೀಯವಾಗಿ ಖರೀದಿಸಿ ವಿತರಣೆಮಾಡುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ)ಗೆ ವಹಿಸುವಂತೆ ಹೇಳಲಾಗಿದೆ.
ಎಸ್‌ಡಿಎಂಸಿಯು ಶೂ ಮತ್ತು ಸಾಕ್ಸ್ ಖರೀದಿ ಸಮಿತಿಯನ್ನು ರಚಿಸಿ, ಆ ಸಮಿತಿಯ ಮೂಲಕ ಪ್ರತಿಷ್ಠಿತ ಬ್ರಾಂಡೆಡ್ ಕಂಪೆನಿಗಳ ಅಧಿಕೃತ ಸರಬರಾಜುದಾರರಿಂದ ಒಂದು ಜೊತೆ ಕಪ್ಪು ಬಣ್ಣದ ಶೂ ಮತ್ತು ಎರಡು ಜೊತೆ ಬಿಳಿ ಬಣ್ಣದ ಸಾಕ್ಸ್ ಖರೀದಿಸಿ ವಿತರಿಸುವುದು. ಸ್ಥಳೀಯ ವಾತಾವರಣಕ್ಕೆ ಅನುಗುಣ ವಾಗಿ ಶೂ ಮತ್ತು ಸಾಕ್ಸ್‌ಗಳ ಬದಲಾಗಿ ಪಾದರಕ್ಷೆಗಳನ್ನು ಖರೀದಿಸಿ ವಿತರಿಸುವಂತೆ ಷರತ್ತು ವಿಧಿಸಲಾಗಿದೆ.
ದಶಕಗಳ ಬಳಿಕ ಮತ್ತೆಮುನ್ನೆಲೆಗೆ: ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ಬದಲು ಪಾದರಕ್ಷೆ ವಿತರಿಸುವ ಪ್ರಸ್ತಾವನೆ ಹೊಸದೇನಲ್ಲ. ೨೦೧೫-೧೬ನೇ ಶೈಕ್ಷಣಿಕ ವರ್ಷದಲ್ಲೂ ಇಂತಹದೊಂದು ಯೋಜನೆಯನ್ನು ರೂಪಿಸಲಾಗಿತ್ತು. ಆದರೆ, ಬೇರೆ ಬೇರೆ ಕಾರಣಗಳಿಂದಾಗಿ ಪ್ರಸ್ತಾವನೆಯನ್ನು ಕೈಬಿಡಲಾಗಿತ್ತು. ದಶಕಗಳ ಬಳಿಕ ವಿದ್ಯಾರ್ಥಿಗಳಿಗೆ ‘ಪಾದರಕ್ಷೆ ಭಾಗ್ಯ’ ನೀಡಲು ಸರ್ಕಾರ ಮುಂದಾಗಿದ್ದು, ಒಂದರಿಂದ ಐದನೇ ತರಗತಿ ವಿದ್ಯಾರ್ಥಿಗಳಿಗೆ ತಲಾ ೨೬೫ ರೂ., ೬ರಿಂದ ೮ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ ೨೯೫ ರೂ., ೯ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ ೩೨೫ ರೂ. ಖರೀದಿದರವನ್ನು ನಿಗದಿಪಡಿಸಲಾಗಿದೆ. ಆದರೂ ಸೇವಾ ದೃಷ್ಟಿಯಿಂದ ದಾನಿಗಳು, ಖಾಸಗಿ ಸಂಸ್ಥೆಗಳು ಈ ಉದ್ದೇಶಕ್ಕಾಗಿ ಹೆಚ್ಚುವರಿ ಹಣ ನೀಡಿದಲ್ಲಿ ಅದನ್ನು ಬಳಸಿಕೊಂಡು ಇನ್ನೂ ಉತ್ತಮ ಗುಣಮಟ್ಟದ ಶೂ ಮತ್ತು ಸಾಕ್ಸ್ ಖರೀದಿಸಿ ವಿತರಿಸುವಂತೆ ಸೂಚಿಸಲಾಗಿದೆ.
ಶೂ ಮತ್ತು ಪಾದರಕ್ಷೆಗಳ ವೈಶಿಷ್ಟ್ಯತೆ: ಶೂಗಳ ಮೇಲ್ಪದರ ಪಾಲಿವಿನೈಲ್(ಪಿವಿಸಿ) ಕೋಟೆಡ್ ಎಸ್ಕೋಸ್/ಪಾಲಿಯೆಸ್ಟರ್ /ಪಾಲಿಯೆಸ್ಟರ್ ಕಾಟನ್ -ಬ್ರಿಕ್ ೧.೫ ಎಂಎಂ ಹೊಂದಿದ ಮತ್ತು ಎಕ್ಸ್ಟೆಂಡೆಡ್ ಪಾಲಿವಿನೈಲ್ ಕ್ಲೋರೈಡ್ ಸೋಲ್ ಹೊಂದಿದ ಹಾಗೂ ಪಾದರಕ್ಷೆಯ ಒಳಪದರ ಬಟ್ಟೆ/-ಬ್ರಿಕ್‌ನಿಂದ ಕೂಡಿರುವುದನ್ನು (ಅಂದಾಜು ೦.೮ ಎಂಎಂ ದಪ್ಪ) ಖರೀದಿಸುವುದು. ಎಸ್‌ಡಿಎಂಸಿಗಳು ಪಾದರಕ್ಷೆಗಳನ್ನು ಖರೀದಿಸಲು ತೀರ್ಮಾನಿಸಿದಲ್ಲಿ ವೆಲ್‌ಕ್ರೋ ಪಾದರಕ್ಷೆಗಳನ್ನು ಮತ್ತು ಲೈನಿಂಗ್ ಸಾಕ್ಸ್ ಖರೀದಿಸಿ ವಿತರಿಸುವಂತೆ ಹೇಳಲಾಗಿದೆ.
ಹವಾಮಾನ ವೈಪರೀತ್ಯ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸ್ಥಳೀಯ ವಾತಾವರಣಕ್ಕೆ ಅನುಗುಣವಾಗಿ ಶೂ ಮತ್ತು ಸಾಕ್ಸ್‌ಗಳ ಬದಲಾಗಿ ಪಾದರಕ್ಷೆಗಳನ್ನು ಖರೀದಿಸಿ ವಿತರಿಸಲು ಸೂಚಿಸಲಾಗಿದೆ. ಮಳೆಗಾಲ ಮತ್ತು ಬಿಸಿಲ ಬೇಗೆ ಹೆಚ್ಚಿರುವ ಸಂದರ್ಭದಲ್ಲಿ ದಿನವಿಡೀ ಶೂ ಮತ್ತು ಸಾಕ್ಸ್ ಧರಿಸುವುದರಿಂದ ವಿದ್ಯಾರ್ಥಿಗಳಿಗೆ ಚರ್ಮದಲ್ಲಿ ಸೋಂಕು ಹರಡುವ ಜೊತೆಗೆ ಮಳೆಗಾಲದಲ್ಲಿ ಶೂ ಮತ್ತು ಸಾಕ್ಸ್ ಒದ್ದೆಯಾಗಿ ವಾಸನೆ ಹರಡುವುದು ಸೇರಿ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಹಾಗೆಯೇ ಬಿರುಬಿಸಿಲಿನ ದಿನಗಳಲ್ಲಿ ಮತ್ತು ಮಳೆಗಾಲದ ಕೆಸರಿನಲ್ಲಿ ಮಕ್ಕಳಿಗೆ ಶೂಗಳಿಗಿಂತ ಪಾದರಕ್ಷೆ ಧರಿಸುವುದು ಆರಾಮದಾಯಕ ಎಂಬ ಸಲಹೆಗಳ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…
ಭೇರ್ಯ ಮಹೇಶ್ ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಾಣ; ೧ ಲಕ್ಷ ಆಸನಗಳ ವ್ಯವಸ್ಥೆ ಹಾಸನ: ಜಾ.ದಳ ಪ್ರಾದೇಶಿಕ ಪಕ್ಷದ ಬೆಳ್ಳಿ…