Andolana originals

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ 

ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ೪೦.೬೮ ಲಕ್ಷ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಅಥವಾ ಪಾದರಕ್ಷೆ(ಚಪ್ಪಲಿ) ವಿತರಿಸಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ೬ ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಎಸ್‌ಎಟಿಎಸ್ ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ದಾಖಲಾತಿಯ ಸಂಖ್ಯೆಯನ್ನು ಖಚಿತಪಡಿಸಿ ಕೊಂಡು ಅದಕ್ಕೆ ಅನುಗುಣವಾಗಿ ಅನುದಾನವನ್ನು ಭರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಆದೇಶಿಸಿದೆ.

ಅನುದಾನ ಬಳಕೆಗೆ ಹಲವು ಷರತ್ತು ಮತ್ತು ನಿಬಂಧನೆಗಳನ್ನು ವಿಧಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಪಾದರಕ್ಷೆಯನ್ನು ಸ್ಥಳೀಯವಾಗಿ ಖರೀದಿಸಿ ವಿತರಣೆಮಾಡುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ)ಗೆ ವಹಿಸುವಂತೆ ಹೇಳಲಾಗಿದೆ.

ಎಸ್‌ಡಿಎಂಸಿಯು ಶೂ ಮತ್ತು ಸಾಕ್ಸ್ ಖರೀದಿ ಸಮಿತಿಯನ್ನು ರಚಿಸಿ, ಆ ಸಮಿತಿಯ ಮೂಲಕ ಪ್ರತಿಷ್ಠಿತ ಬ್ರಾಂಡೆಡ್ ಕಂಪೆನಿಗಳ ಅಧಿಕೃತ ಸರಬರಾಜುದಾರರಿಂದ ಒಂದು ಜೊತೆ ಕಪ್ಪು ಬಣ್ಣದ ಶೂ ಮತ್ತು ಎರಡು ಜೊತೆ ಬಿಳಿ ಬಣ್ಣದ ಸಾಕ್ಸ್ ಖರೀದಿಸಿ ವಿತರಿಸುವುದು. ಸ್ಥಳೀಯ ವಾತಾವರಣಕ್ಕೆ ಅನುಗುಣ ವಾಗಿ ಶೂ ಮತ್ತು ಸಾಕ್ಸ್‌ಗಳ ಬದಲಾಗಿ ಪಾದರಕ್ಷೆಗಳನ್ನು ಖರೀದಿಸಿ ವಿತರಿಸುವಂತೆ ಷರತ್ತು ವಿಧಿಸಲಾಗಿದೆ.

ದಶಕಗಳ ಬಳಿಕ ಮತ್ತೆಮುನ್ನೆಲೆಗೆ: ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ಬದಲು ಪಾದರಕ್ಷೆ ವಿತರಿಸುವ ಪ್ರಸ್ತಾವನೆ ಹೊಸದೇನಲ್ಲ. ೨೦೧೫-೧೬ನೇ ಶೈಕ್ಷಣಿಕ ವರ್ಷದಲ್ಲೂ ಇಂತಹದೊಂದು ಯೋಜನೆಯನ್ನು ರೂಪಿಸಲಾಗಿತ್ತು. ಆದರೆ, ಬೇರೆ ಬೇರೆ ಕಾರಣಗಳಿಂದಾಗಿ ಪ್ರಸ್ತಾವನೆಯನ್ನು ಕೈಬಿಡಲಾಗಿತ್ತು. ದಶಕಗಳ ಬಳಿಕ ವಿದ್ಯಾರ್ಥಿಗಳಿಗೆ ‘ಪಾದರಕ್ಷೆ ಭಾಗ್ಯ’ ನೀಡಲು ಸರ್ಕಾರ ಮುಂದಾಗಿದ್ದು, ಒಂದರಿಂದ ಐದನೇ ತರಗತಿ ವಿದ್ಯಾರ್ಥಿಗಳಿಗೆ ತಲಾ ೨೬೫ ರೂ., ೬ರಿಂದ ೮ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ ೨೯೫ ರೂ., ೯ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ ೩೨೫ ರೂ. ಖರೀದಿದರವನ್ನು ನಿಗದಿಪಡಿಸಲಾಗಿದೆ. ಆದರೂ ಸೇವಾ ದೃಷ್ಟಿಯಿಂದ ದಾನಿಗಳು, ಖಾಸಗಿ ಸಂಸ್ಥೆಗಳು ಈ ಉದ್ದೇಶಕ್ಕಾಗಿ ಹೆಚ್ಚುವರಿ ಹಣ ನೀಡಿದಲ್ಲಿ ಅದನ್ನು ಬಳಸಿಕೊಂಡು ಇನ್ನೂ ಉತ್ತಮ ಗುಣಮಟ್ಟದ ಶೂ ಮತ್ತು ಸಾಕ್ಸ್ ಖರೀದಿಸಿ ವಿತರಿಸುವಂತೆ ಸೂಚಿಸಲಾಗಿದೆ.

ಶೂ ಮತ್ತು ಪಾದರಕ್ಷೆಗಳ ವೈಶಿಷ್ಟ್ಯತೆ: ಶೂಗಳ ಮೇಲ್ಪದರ ಪಾಲಿವಿನೈಲ್(ಪಿವಿಸಿ) ಕೋಟೆಡ್ ಎಸ್ಕೋಸ್/ಪಾಲಿಯೆಸ್ಟರ್ /ಪಾಲಿಯೆಸ್ಟರ್ ಕಾಟನ್ -ಬ್ರಿಕ್ ೧.೫ ಎಂಎಂ ಹೊಂದಿದ ಮತ್ತು ಎಕ್ಸ್ಟೆಂಡೆಡ್ ಪಾಲಿವಿನೈಲ್ ಕ್ಲೋರೈಡ್ ಸೋಲ್ ಹೊಂದಿದ ಹಾಗೂ ಪಾದರಕ್ಷೆಯ ಒಳಪದರ ಬಟ್ಟೆ/-ಬ್ರಿಕ್‌ನಿಂದ ಕೂಡಿರುವುದನ್ನು (ಅಂದಾಜು ೦.೮ ಎಂಎಂ ದಪ್ಪ) ಖರೀದಿಸುವುದು. ಎಸ್‌ಡಿಎಂಸಿಗಳು  ಪಾದರಕ್ಷೆಗಳನ್ನು ಖರೀದಿಸಲು ತೀರ್ಮಾನಿಸಿದಲ್ಲಿ ವೆಲ್‌ಕ್ರೋ ಪಾದರಕ್ಷೆಗಳನ್ನು ಮತ್ತು ಲೈನಿಂಗ್ ಸಾಕ್ಸ್ ಖರೀದಿಸಿ ವಿತರಿಸುವಂತೆ ಹೇಳಲಾಗಿದೆ.

ಹವಾಮಾನ ವೈಪರೀತ್ಯ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸ್ಥಳೀಯ ವಾತಾವರಣಕ್ಕೆ ಅನುಗುಣವಾಗಿ ಶೂ ಮತ್ತು ಸಾಕ್ಸ್‌ಗಳ ಬದಲಾಗಿ ಪಾದರಕ್ಷೆಗಳನ್ನು ಖರೀದಿಸಿ ವಿತರಿಸಲು ಸೂಚಿಸಲಾಗಿದೆ. ಮಳೆಗಾಲ ಮತ್ತು ಬಿಸಿಲ ಬೇಗೆ ಹೆಚ್ಚಿರುವ ಸಂದರ್ಭದಲ್ಲಿ ದಿನವಿಡೀ ಶೂ ಮತ್ತು ಸಾಕ್ಸ್ ಧರಿಸುವುದರಿಂದ ವಿದ್ಯಾರ್ಥಿಗಳಿಗೆ ಚರ್ಮದಲ್ಲಿ ಸೋಂಕು ಹರಡುವ ಜೊತೆಗೆ ಮಳೆಗಾಲದಲ್ಲಿ ಶೂ ಮತ್ತು ಸಾಕ್ಸ್ ಒದ್ದೆಯಾಗಿ ವಾಸನೆ ಹರಡುವುದು ಸೇರಿ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಹಾಗೆಯೇ ಬಿರುಬಿಸಿಲಿನ ದಿನಗಳಲ್ಲಿ ಮತ್ತು ಮಳೆಗಾಲದ ಕೆಸರಿನಲ್ಲಿ ಮಕ್ಕಳಿಗೆ ಶೂಗಳಿಗಿಂತ ಪಾದರಕ್ಷೆ ಧರಿಸುವುದು ಆರಾಮದಾಯಕ ಎಂಬ ಸಲಹೆಗಳ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

12 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

13 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

13 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

13 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

13 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

17 hours ago