Andolana originals

ಓದುಗರ ಪತ್ರ: ಕುತ್ಸಿತ ರಾಜಕಾರಣ?

ರಾಜಸ್ತಾನ ಸರ್ಕಾರವು ಅಲ್ಲಿನ ಸರ್ಕಾರಿ ಶಾಲೆಗಳ 9ನೇ ತರಗತಿಯ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೀಡುವ ಬೈಸಿಕಲ್‌ಗಳ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದ್ದು, ಇದಕ್ಕಾಗಿ 11 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ಹಿಂದೆ ವಸುಂಧರಾ ರಾಜೆ ಸಿಂದಿಯಾ ಮುಖ್ಯಮಂತ್ರಿ ಯಾಗಿದ ಸಂದರ್ಭದಲ್ಲಿ ಈ ಬೈಸಿಕಲ್‌ಗಳು ಕೇಸರಿ ಬಣ್ಣದಲ್ಲಿ ದ್ದವು. ತದನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಆ ಸೈಕಲ್‌ಗಳ ಬಣ್ಣವನ್ನು ಕಪ್ಪು ಬಣ್ಣಕ್ಕೆ ಬದಲಾಯಿಸಿತ್ತು. ಈಗ ಮತ್ತೊಮ್ಮೆ ರಾಜಸ್ತಾನದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಬೈಸಿಕಲ್‌ಗಳ ಬಣ್ಣವನ್ನು ಮತ್ತೇ ಕೇಸರಿ ಬಣ್ಣಕ್ಕೆ ಬದಲಾಯಿಸುತ್ತಿದೆ. ಸದ್ಯ ರಾಜಕೀಯ ಪಕ್ಷಗಳು ಹೀಗೆ ಮಕ್ಕಳಿಗೆ ಕೊಡುವ ಬೈಸಿಕಲ್ ಗಳಲ್ಲಿಯೂ ರಾಜಕೀಯ ಮಾಡುತ್ತಿರುವುದನ್ನು ನೋಡಿದರೆ ಈ ಕುತ್ತಿತ ರಾಜಕೀಯಕ್ಕೆ ಕೊನೆ ಎಂದು? ಎಂಬ ಪ್ರಶ್ನೆ ಮೂಡುತ್ತದೆ. ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೆರವು ನೀಡಿದರೆ ದೇಶ ದಿವಾಳಿಯಾಗುತ್ತದೆ ಎನ್ನುವವರು ರಾಜಸ್ತಾನ ಸರ್ಕಾರದ ಈ ದುಂದು ವೆಚ್ಚವನ್ನು ಏಕೆ ಪ್ರಶ್ನಿಸುತ್ತಿಲ್ಲ?
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು,

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

2 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

3 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

6 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

6 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

6 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

6 hours ago