Andolana originals

ನಿಶ್ಯಬ್ದವಾಗಿ ಸಾಗಲು ಸಜ್ಜಾಗುತ್ತಿವೆ ಸ್ತಬ್ಧಚಿತ್ರಗಳು!

ಬಂಡೀಪಾಳ್ಯ ಎಪಿಎಂಸಿಯಲ್ಲಿ ಸ್ತಬ್ಧಚಿತ್ರಗಳ ನಿರ್ಮಾಣ; 31 ಜಿಲ್ಲೆಗಳ ಸ್ತಬ್ಧಚಿತ್ರಗಳ ಅನಾವರಣಕ್ಕೆ ಸಿದ್ಧತೆ
ಕೆ.ಬಿ.ರಮೇಶ ನಾಯಕ

ಮೈಸೂರು: ದಸರಾ ಮಹೋತ್ಸವದ ಕೇಂದ್ರ ಬಿಂದುವಾದ ಜಂಬೂಸವಾರಿ ಮೆರವಣಿಗೆಗೆ ಸ್ತಬ್ಧಚಿತ್ರಗಳು ಮೆರುಗು ನೀಡಲಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ವಿನೂತನ ವಿಶೇಷ ರೀತಿಯಲ್ಲಿ ಸ್ತಬ್ಧಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಮೊದಲ ಬಾರಿಗೆ ಭಾರತೀಯ ರೈಲ್ವೆ, ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್ಐ ) ಸಾಧನೆಗಳ ಜತೆಗೆ ಸ್ವಾತಂತ್ರ್ಯಪೂರ್ವ-ನಂತರದಲ್ಲಿ ಸಾಧಿಸಿರುವ ಪ್ರಗತಿಯ ಕುರಿತ ಸ್ತಬ್ಧಚಿತ್ರಗಳು ಈ ಬಾರಿ ಗಮನ ಸೆಳೆಯಲಿವೆ.

ಅ.12ರಂದು ಅರಮನೆಯಿಂದ ಬನ್ನಿಮಂಟಪ ಮೈದಾನದ ತನಕ ಸಾಗಲಿರುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಳೆದ ತಿಂಗಳು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಶ್ವದಾಖಲೆಯ ಮಾನವ ಸರಪಳಿ ನಿರ್ಮಾಣ ಕಾರವನ್ನು ಈ ಬಾರಿ ತೆರೆದಿಡಲಾಗುತ್ತದೆ.

ಈಗಾಗಲೇ ಬಂಡೀಪಾಳ್ಯದ ಎಪಿಎಂಸಿ ಯಾರ್ಡ್‌ ಆವರಣದಲ್ಲಿ ಸ್ತಬ್ಧಚಿತ್ರಗಳ ತಯಾರಿ ಆರಂಭವಾಗಿದ್ದು, ಕಾರ್ಮಿಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಭಾರತೀಯ ರೈಲ್ವೆ ಆರಂಭವಾದಾಗ ಮೀಟರ್‌ಗೇಜ್, ಬ್ರಾಡ್‌ ಗೇಜ್ ರೈಲಿನಿಂದ ವಂದೇ ಭಾರತ್ ರೈಲಿನ ತನಕ ಆಗಿರುವ ಪ್ರಗತಿ, ರೈಲ್ವೆಯು ಸಾಧಿಸಿರುವ ಪ್ರಗತಿ ಕುರಿತು ಮೊಟ್ಟ ಮೊದಲ ಬಾರಿಗೆ ರೈಲ್ವೆ ಇಲಾಖೆಯ ಸ್ತಬ್ಧಚಿತ್ರವು ಸಾಗಲಿದೆ.

ಹೊಸ ಸಂಶೋಧನೆಗಳ ಮೂಲಕ ಆಹಾರ, ಪೌಷ್ಟಿಕಾಂಶದ ಆಹಾರ, ತಂತ್ರಜ್ಞಾನಗಳನ್ನು ಪರಿಚಯಿಸುತ್ತಿರುವ ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ(ಸಿಎಫ್‌ಟಿಆರ್ ಐ) ಸಾಧನೆಗಳ ಮಾಹಿತಿಯನು ಅನಾವರಣಗೊಳಿಸಲಿದೆ. ದೇಶ-ವಿದೇಶಗಳ ಜನರನ್ನು ಆಕರ್ಷಿಸುತ್ತಿರುವ ಮೈಸೂರು ರೇಷ್ಮೆ ಸೀರೆಗಳನ್ನು ಉತ್ಪಾದನೆ ಮಾಡುವಂತಹ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ(ಕೆಎಸ್‌ಐಸಿ)ದಿಂದ ಹೊರ ತರುತ್ತಿರುವ ಅಪ್ಪಟ ಜರಿ ಸೀರೆಗಳ ನೋಟವನ್ನು ಸೆರೆದಿಡುವಂತಹ
ಸ್ತಬ್ಧಚಿತ್ರ.

ಶ್ರೀಗಂಧದ ಮೂಲಕವೇ ಸುವಾಸನೆ ಬೀರುವಂತಹ ಮೈಸೂರು ಸಾಮೂನು ಮತ್ತು ಮಾರ್ಜಕ ನಿಗಮ(ಕೆಎಸ್ ಐಡಿಎಲ್ ) ದ ಸ್ಯಾಂಡಲ್ ಸೋಪ್, ಗಂಧದಕಡ್ಡಿ ಕಲಾ ಕೃತಿಗಳನ್ನು ಬಿಂಬಿಸುವಂತಹ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.
ರೈತರ ಪಾಲಿಗೆ ಸಂಜೀವಿನಿಯಾಗಿರುವ ಕರ್ನಾಟಕ ಹಾಲು ಒಕ್ಕೂಟದ ಸಾಧನೆಯ ಜತೆಗೆ ಕರ್ನಾಟಕದಿಂದ ಹೊಸದಿಲ್ಲಿಯ ಹೊರಗಿನ ಸಿಂಗಾಪುರ, ದುಬೈಗೆ ಮೈಸೂರು ಪಾಕ್, ನಂದಿನಿ ಹಾಲು, ಉತ್ಪನ್ನಗಳು ಸರಬರಾಜು ಆಗುತ್ತಿರುವ ಕುರಿತು ನಿರ್ಮಿಸುತ್ತಿರುವ ಈ ಸ್ತಬ್ಧಚಿತ್ರ ನೋಡುಗರ ಮನಮುಟ್ಟುವಂತೆ ಮಾಡಲಿದೆ.

ಇನ್ನು ಪ್ರವಾಸೋದ್ಯಮ ಇಲಾಖೆ ರಾಜ್ಯದಲ್ಲಿರುವ ಪ್ರವಾಸಿ ತಾಣಗಳನ್ನು ಜನರೆದುರು ತೆರೆದಿಡಲಿದೆ. ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಜನಸ್ನೇಹಿ ಪೊಲೀಸ್, ಸೈಬರ್ ಕೈಂ ಮೊದಲಾದ ವಿಚಾರಗಳ ಕುರಿತು ತಯಾರಿಸುತ್ತಿರುವ ಸ್ತಬ್ಧಚಿತ್ರವು ಸಾರ್ವಜನಿಕರಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಲಿದೆ.

ಉಳಿದಂತೆ ರಾಜ್ಯದ 31ಜಿಲ್ಲೆಗಳಿಂದಲೂ ಸ್ತಬ್ಧಚಿತ್ರಗಳು ಜಂಬೂಸವಾರಿ ಮೆರವಣಿಗೆ ಯಲ್ಲಿ ಸಾಸಸಗಲಿದ್ದು, ಕೋಲಾರದ ಕೋಟೆಲಿಂಗೇ ಶ್ವರ ದೇವಸ್ಥಾನ, ಹಾಸನ ಜಿಲ್ಲೆಯ ಬೇಲೂರು ಚೆನ್ನಕೇಶವ ದೇವಾಲಯ, ಹಳೇಬೀಡು ಹೊಯ್ಸಳೇಶ್ವರ ದೇವಾಲಯ, ಕೊಪ್ಪಳದ ಹುಲಿಗೆಮ್ಮ ದೇವಿ ದೇವಸ್ಥಾನ, ಬೀದರ್ ಜಿಲ್ಲೆಯ ಚೆನ್ನಬಸವಪಟ್ಟದೇವರು, ಚಾಮರಾಜನಗರ ಜಿಲ್ಲೆಯ ಸೋಲಿಗರ ಸೊಗಡು, ಕೊಡಗು ಜಿಲ್ಲೆಯ ಹಾರಂಗಿ ಜಲಾಶಯ ಸ್ತಬ್ಧಚಿತ್ರಗಳು ನೋಡುಗರ ಕಣ್ಮನ ಸೆಳೆಯಲಿವೆ.

ಮುಖ್ಯಮಂತ್ರಿ ತವರು ಜಿಲ್ಲೆಯಾದ ಮೈಸೂರಿನಿಂದ ‘ಮನುಷ್ಯ ಜಾತಿ ತಾನೊಂದೆ ವಲಂ ಸಂಸತ್ ಭವನ, ಅನುಭವ ಮಂಟಪ, ಬುದ್ಧ, ಬಸವ, ಅಂಬೇಡ್ಕರ್ ಅವರ ಮಾದರಿಗಳು, ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ದೇವಸ್ಥಾನ ಹಾಗೂ ಶಿವನ ಸ್ತಬ್ದಚಿತ್ರಗಳು ಈ ಬಾರಿಯ ಆಕರ್ಷಣೆಯ ಕೇಂದ್ರವಾಗಲಿವೆ.

ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ ನಾಡು, ನುಡಿಯ ಕಲೆಗಳು, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳನ್ನು ಬಿಂಬಿಸುವಂತಹ ಆಯಾಯ ಜಿಲ್ಲೆಗಳ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಅದೇ ರೀತಿಯಲ್ಲಿ ನಿರ್ಮಿಸುವ ಕೆಲಸ ಮಾಡಿದ್ದೇವೆ. -ಎ.ಎಸ್‌.ರಂಜಿತ್‌ ಕುಮಾರ್, ಕಾರ್ಯಾಧ್ಯಕ್ಷರು, ದಸರಾ ಸ್ತಬ್ಧಚಿತ್ರ ಉಪ ಸಮಿತಿ

ಆಂದೋಲನ ಡೆಸ್ಕ್

Recent Posts

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

3 mins ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

13 mins ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

30 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

43 mins ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

1 hour ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

2 hours ago