Andolana originals

ಏಕಕಾಲದಲ್ಲಿ ಏರ್‌ಪೋರ್ಟ್ ರನ್‌ವೇ, ಬೈಪಾಸ್ ರಸ್ತೆ

ಕೆ.ಬಿ.ರಮೇಶನಾಯಕ

ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣ; ಕಾಮಗಾರಿಗೆ ಸಿದ್ಧತೆ

ಕಾಮಗಾರಿ ವಿಳಂಬ, ಹೆಚ್ಚುವರಿ ವೆಚ್ಚ ತಗ್ಗಿಸಲು ಚಿಂತನೆ

ಆರು ಪಥದ ರಸ್ತೆ ನಿರ್ಮಾಣಕ್ಕೆ ರೀ ಅಲೈನ್‌ಮೆಂಟ್

ಮೈಸೂರು: ದೇಶ-ವಿದೇಶಗಳ ಪ್ರವಾಸಿಗರು, ಉದ್ಯಮಿಗಳು ಮತ್ತು ಅಂತಾರಾಜ್ಯಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸಲು ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಿಸಬೇಕೆಂಬ ದಶಕಗಳ ಕನಸು ಕೊನೆಗೂ ನನಸಾಗುವ ಹಂತಕ್ಕೆ ಬಂದಿದ್ದು, ಏಕಕಾಲದಲ್ಲಿ ರನ್‌ವೇ ವಿಸ್ತರಣೆ, ಮೈಸೂರು-ನಂಜನಗೂಡು ನಡುವಿನ ಮಾರ್ಗದಲ್ಲಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ರೂಪಿಸಿರುವ ಮಾಸ್ಟರ್‌ಪ್ಲಾನ್‌ನಂತೆ ಕಾಮಗಾರಿ ಆರಂಭಕ್ಕೆ ತಯಾರಿ ನಡೆದಿದೆ.

ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳ ಉದ್ಯಮಿಗಳು ಹಾಗೂ ಪ್ರವಾಸಿಗರನ್ನು ಮೈಸೂರಿನತ್ತ ಆಕರ್ಷಿಸಲು ಮತ್ತು ನಂಜನಗೂಡು, ಅಡಕನಹಳ್ಳಿ, ತಾಂಡವಪುರ ಕೈಗಾರಿಕಾ ಪ್ರದೇಶಕ್ಕೆ ಬರುವ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲು ದೊಡ್ಡ ದೊಡ್ಡ ವಿಮಾನಗಳ ಹಾರಾಟದ ವ್ಯವಸ್ಥೆ ಮಾಡಬೇಕು ಎಂಬ ಕೂಗು ಮೇಲಿಂದ ಮೇಲೆ ಕೇಳಿಬಂದಿತ್ತು. ಆದರೆ, ನಾನಾ ಕಾರಣಗಳಿಂದಾಗಿ ಈ ವ್ಯವಸ್ಥೆ ವಿಳಂಬವಾಗುತ್ತಲೇ ಇತ್ತು. ಕಳೆದ ಬಿಜೆಪಿ ಸರ್ಕಾರ ಭೂಸ್ವಾಧಿನ ಪ್ರಕ್ರಿಯೆಗೆ ೧೭೫ ಕೋಟಿ ರೂ. ನೀಡಿದ್ದರೆ, ಈಗಿನ ಸಿದ್ದರಾಮಯ್ಯ ಸರ್ಕಾರ ಉಳಿದ ಅನುದಾನವನ್ನು ನೀಡಿದ್ದರಿಂದಾಗಿ ೨೪೦ ಎಕರೆ ಭೂ ಸ್ವಾಧಿನ ಪ್ರಕ್ರಿಯೆ ಮುಗಿದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಭೂಮಿ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆದಿದೆ. ಇದರ ನಡುವೆ ಸ್ವಾಧಿನಪಡಿಸಿಕೊಂಡ ಭೂಮಿಯು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ)ದ ಸುಪರ್ದಿಗೆ ಸೇರುತ್ತಿದ್ದಂತೆಯೇ ಕಾಮಗಾರಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

೨೦೪೭ರ ಅಂದಾಜಿನಂತೆ ೩,೨೦೦ ಮೀಟರ್ ರನ್‌ವೇ ಪ್ಲಾನ್: ಮೈಸೂರು ವಿಮಾನ ನಿಲ್ದಾಣದಲ್ಲಿ ಸದ್ಯ ೧,೭೪೦೩೦ ಮೀಟರ್ ರನ್‌ವೇ ಇದ್ದು, ಎಟಿಆರ್-೭೨ ಮಾದರಿಯ ವಿಮಾನಗಳು ಮಾತ್ರ ಹಾರಾಡುತ್ತಿವೆ. ಈಗ ರೂಪಿಸಿರುವ ಪ್ಲಾನ್‌ನಲ್ಲಿ ರನ್‌ವೇ ೨,೭೫೦೪೫ ಮೀಟರ್ ವಿಸ್ತರಣೆಯಾಗಲಿದೆ. ಈ ರನ್‌ವೇನಿಂದ ೩೨೦ ಆಸನಗಳ ಏರ್‌ಬಸ್, ೭೩೭ ಆಸನದ ಬೋಯಿಂಗ್ ವಿಮಾನಗಳೂ ಸೇರಿದಂತೆ ವಿವಿಧ ಮಾದರಿಯ ವಿಮಾನಗಳ ಹಾರಾಟಕ್ಕೆ ಅನುಕೂಲವಾಗಲಿದೆ.

ಎರಡನೇ ಹಂತದಲ್ಲಿ ಅಂದರೆ ೨೦೪೭ಕ್ಕೆ ೩,೨೦೦ ಮೀಟರ್ ರನ್‌ವೇ ವಿಸ್ತರಿಸುವುದಕ್ಕೂ ಭೂಮಿಯನ್ನು ಕಾಯ್ದಿರಿಸಲಾಗಿದೆ. ರನ್‌ವೇ ವಿಸ್ತರಣೆ ಕಾಮಗಾರಿ ಮುಗಿದರೆ ಮೈಸೂರು ನಗರದಿಂದ ಬೆಂಗಳೂರು, ಚೆನ್ನೈ, ಕೊಲ್ಕತ್ತಾ, ಹೈದರಾಬಾದ್, ಹೊಸದಿಲ್ಲಿ ಮೊದಲಾದ ನಗರಗಳಿಗೆ ನೇರವಾಗಿ ವಿಮಾನಯಾನ ಸೇವೆ ಒದಗಿಸಲಾಗುತ್ತದೆ. ಅಂತಾರಾಷ್ಟ್ರೀಯ ವಿಮಾನಗಳೂ ಮೈಸೂರು ವಿಮಾನ ನಿಲ್ದಾಣದಲ್ಲಿ ನಿಲುಗಡೆ ಮಾಡಿ ಹೋಗುವುದಕ್ಕೂ ಅವಕಾಶವಿರುವಂತೆ ಯೋಜನೆ ರೂಪಿಸಿರುವುದು ಕೈಗಾರಿಕಾ ವಲಯದಲ್ಲಿ ಸಂತಸ ಮೂಡಿಸಿದೆ.

ಮೈಸೂರು-ನಂಜನಗೂಡು ಮಾರ್ಗದಲ್ಲಿರುವ ಎಚ್‌ಟಿ ಮತ್ತು ಎಲ್‌ಟಿ ಮಾರ್ಗ(ವಿದ್ಯುತ್ ಮಾರ್ಗ)ವನ್ನು ಸ್ಥಳಾಂತರಿಸುವುದು, ಈಗಿರುವ ನೀರಾವರಿ ನಾಲೆಗಳನ್ನು ಬದಲಿ ಮಾರ್ಗದಲ್ಲಿ ಮರು ನಿರ್ಮಾಣ ಮಾಡುವುದು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಗ್ರಾಮೀಣ ರಸ್ತೆಗಳನ್ನು ಬದಲಿಸಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಬೇಕಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಽಕಾರವು ಈಗಿರುವ ಮೈಸೂರು ನಂಜನಗೂಡು ರಸ್ತೆಯಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಅಂಟಿಕೊಂಡಂತೆ ಇರುವ ಮಾರ್ಗವನ್ನು ಮುಚ್ಚಿ ಬೈಪಾಸ್ ರಸ್ತೆಯನ್ನು ಮಾಡಲು ರೀ ಅಲೈನ್‌ಮೆಂಟ್ ಪ್ಲಾನ್ ಮಾಡಿ ಅನುಮೋದನೆ ಪಡೆದುಕೊಂಡಿದೆ. ಅದರಂತೆ ಮೈಸೂರು ರಸ್ತೆಯಿಂದ ಹೊರಟು ಮರಸೆ, ಮಾಕನಹುಂಡಿ, ಚಿಕ್ಕೇಗೌಡನಹುಂಡಿ ಮಾರ್ಗವಾಗಿ ಆರು ಪಥದ ರಸ್ತೆಯನ್ನು ನಿರ್ಮಾಣ ಮಾಡಲಿದ್ದು, ಇದಕ್ಕಾಗಿ ಅಂದಾಜು ವೆಚ್ಚ ೮೦೦ ಕೋಟಿ ರೂ. ಅನುದಾನವನ್ನು ಎಚ್‌ಎಚ್‌ಎಐಗೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಭೂಮಿಗೆ ಬೆಲೆ ಹೆಚ್ಚಳ ಸಾಧ್ಯತೆ: 

ವಿಮಾನ ನಿಲ್ದಾಣದ ರನ್‌ವೇಗಾಗಿ ಬೈಪಾಸ್ ರಸ್ತೆಯ ವಿಚಾರದಲ್ಲಿ ಉಂಟಾಗಿದ್ದ ಗೊಂದಲ ಕೊನೆಗೂ ಅಂತ್ಯವಾಗಿದ್ದು, ಮರಸೆ ಭಾಗದಿಂದ ಚಿಕ್ಕೇಗೌಡನಹುಂಡಿ ತನಕ ಮತ್ತೊಂದು ಬೈಪಾಸ್ ಹೈವೇ ನಿರ್ಮಾಣವಾದರೆ ಅಕ್ಕಪಕ್ಕದ ಭೂಮಿಗೆ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಎನ್‌ಎಚ್ ಹಾದು ಹೋಗುವ ಕಡೆಗಳಲ್ಲಿ ಈಗಾಗಲೇ ರಸ್ತೆಗೆ ಭೂ ಸ್ವಾಧಿನ ಕಾರ್ಯ ಮುಗಿದಿದೆ. ಮುಂದೆ ರಸ್ತೆಯ ಎಡ-ಬಲಭಾಗದಲ್ಲಿ ಹೋಟೆಲ್, ಪೆಟ್ರೋಲ್ ಬಂಕ್ ಮತ್ತಿತರ ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗುವ ಕಾರಣ ಒಂದಿಷ್ಟು ಬೆಲೆ ಹೆಚ್ಚಳವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

” ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆಗೆ ಅಗತ್ಯವಿರುವ ಭೂ ಸ್ವಾಧಿನ ಕಾರ್ಯ ಮುಗಿ ದಿದ್ದು, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರವಾಗಲಿದೆ. ಬೈಪಾಸ್ ರಸ್ತೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಂದಾಜು ವೆಚ್ಚದಂತೆ ಅನುದಾನ ನೀಡಲು ಒಪ್ಪಿಗೆಯಾಗಿದೆ. ಶೀಘ್ರದಲ್ಲೇ ಎಲ್ಲ ಪ್ರಕ್ರಿಯೆಗಳು ಮುಗಿಯುವ ವಿಶ್ವಾಸವಿದೆ.”

-ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾಧಿಕಾರಿ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

12 hours ago