Andolana originals

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ

ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ

ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಶೇ.೬೪.೦೯ರಷ್ಟು ನಮೂನೆಗಳನ್ನು ವಿತರಿಸಲಾಗಿದೆ.

ಮತದಾರರ ಪಟ್ಟಿಯನ್ನು ಹೆಚ್ಚು ನಿಖರ ಹಾಗೂ ದೋಷರಹಿತಗೊಳಿಸುವ ಉದ್ದೇಶದಿಂದ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಇದುವರೆಗೆ ಜಿಲ್ಲೆಯಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆಗಳನ್ನು ವಿತರಿಸಲಾಗಿದೆ.

ಜೊತೆಗೆ ೯,೧೨೫ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದ್ದು, ಇದು ಒಟ್ಟು ಮತದಾರರ ಶೇ.೧.೯೫ ರಷ್ಟಾಗಿದೆ. ಜೂ.೩೦ರಿಂದ ಆರಂಭಗೊಂಡಿರುವ ಈ ವಿಶೇಷ ಅಭಿಯಾನ ಜು.೨೯ರವರೆಗೆ ಮುಂದುವರಿಯಲಿದೆ. ಜಿಲ್ಲೆಯ ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ೫೫೨ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸುವುದರೊಂದಿಗೆ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ.

ಮತದಾರರು ನಮೂನೆಗಳನ್ನು ಭರ್ತಿಮಾಡಿ ಸಲ್ಲಿಸಲು ಹಾಗೂ ಆನ್‌ಲೈನ್ ನಲ್ಲಿಯೂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ಮಡಿಕೇರಿ ಕ್ಷೇತ್ರದಲ್ಲಿ ೨,೩೮,೪೪೭ ಮತದಾರರಿದ್ದು, ೧,೫೯,೨೨೦ ಮಂದಿಗೆ (ಶೇ.೬೬.೭೭) ನಮೂನೆ ವಿತರಿಸಲಾಗಿದೆ. ಈ ಕ್ಷೇತ್ರದಲ್ಲಿ ಈಗಾಗಲೇ ೬,೬೬೨ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ೨,೩೦,೨೧೦ ಮತದಾರರಿದ್ದು, ೧,೪೧,೧೪೯ ಮಂದಿಗೆ (ಶೇ.೬೧.೩೧) ನಮೂನೆ ವಿತರಿಸಲಾಗಿದ್ದು, ೨,೪೬೩ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಎರಡು ಕ್ಷೇತ್ರಗಳಲ್ಲೂ ಸಮಾನ ಪ್ರಮಾಣದಲ್ಲಿ ಕಾರ್ಯ ಪ್ರಗತಿಯಲ್ಲಿದೆ.

ತಾಲ್ಲೂಕುವಾರು ಪ್ರಗತಿಯನ್ನು ಗಮನಿಸಿದರೆ, ಸೋಮವಾರಪೇಟೆ ತಾಲ್ಲೂಕಿನಲ್ಲಿ ಶೇ.೬೯.೫೬ ರಷ್ಟು ನಮೂನೆ ವಿತರಣೆಯೊಂದಿಗೆ ಮೊದಲ ಸ್ಥಾನದಲ್ಲಿದೆ. ಉಳಿದಂತೆ ಕುಶಾಲನಗರ ತಾಲ್ಲೂಕಿನಲ್ಲಿ ಶೇ.೬೮.೯೭, ಮಡಿಕೇರಿ ತಾಲ್ಲೂಕಿನಲ್ಲಿ ಶೇ.೫೮.೭೨ರಷ್ಟು ನಮೂನೆ ವಿತರಿಸಲಾಗಿದೆ.

ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಶೇ.೬೫.೨೨, ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಶೇ.೬೬.೦೬, ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಶೇ. ೫೩.೬೬ರಷ್ಟು ನಮೂನೆ ವಿತರಿಸಲಾಗಿದೆ. ಕೆಲವು ಗ್ರಾಮೀಣ ಹಾಗೂ ದುರ್ಗಮ ಪ್ರದೇಶಗಳಲ್ಲಿಯೂ ಅಧಿಕಾರಿಗಳು ಮನೆ ಮನೆಗೆ ತೆರಳಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದುವರೆಗೆ ನಡೆದ ಪರಿಶೀಲನೆಯಲ್ಲಿ ೪೯ ಮಂದಿ ಮತದಾರರು ಸ್ಥಳಾಂತರಗೊಂಡಿರುವುದು, ೧೭೯ ಮಂದಿ ಮೃತಪಟ್ಟಿರುವುದು, ೧೮ ನಕಲಿ ಮತದಾರರ ನೋಂದಣಿಗಳು ಹಾಗೂ ೨ ಇತರೆ ಪ್ರಕರಣ ಪತ್ತೆಯಾಗಿದೆ. ಈ ಮಾಹಿತಿಗಳನ್ನು ದಾಖಲಿಸಿ ಮುಂದಿನ ಪರಿಶೀಲನೆಗೆ ಕಳುಹಿಸಲಾಗಿದೆ. ಪರಿಷ್ಕರಣೆ ಪೂರ್ಣಗೊಂಡ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಪ್ರಕ್ರಿಯೆ ನಡೆಯಲಿದೆ.

” ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲಾಗಿದೆ. ಮೊದಲೆರಡು ದಿನಗಳು ಸ್ವಲ್ಪ ನಿಧಾನವಾಗಿ ಸಾಗಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಚುರುಕುಗೊಂಡಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಶೇ.೬೪.೦೯ರಷ್ಟು ನಮೂನೆಗಳನ್ನು ವಿತರಿಸಲಾಗಿದೆ. ಬಿಎಲ್‌ಒಗಳು ಮನೆ ಮನೆಗೆ ತೆರಳಿ ನಮೂನೆ ವಿತರಣೆಯಲ್ಲಿ ತೊಡಗಿದ್ದಾರೆ. ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು.”

ಕೆ.-ಎಸ್.ಜೆ.ಸೋಮಶೇಖರ್, ಜಿಲ್ಲಾಧಿಕಾರಿ, ಕೊಡಗು

 

 

ಆಂದೋಲನ ಡೆಸ್ಕ್

Recent Posts

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

50 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

58 mins ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

16 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

19 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

19 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

20 hours ago