Andolana originals

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ ಚುನಾಯಿತ ಸರ್ಕಾರವನ್ನು ಸ್ಥಾಪಿಸುವ ಗುರುತರ ಜವಾಬ್ದಾರಿ ಹೊಂದಿರುವ ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-೨೦೨೫ ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿ, ಹೋರಾಟಕ್ಕೆ ಎಡೆಮಾಡಿಕೊಟ್ಟಿದೆ.

ಭಾರತ ಸಂವಿಧಾನದ ಅನುಚ್ಛೇದ ೩೨೪ ಮತ್ತು ಜನತಾ ಪ್ರಾತಿನಿಧ್ಯ ಅಧಿನಿಯಮ ೧೯೫೦ರ ಅನುಸಾರ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸುವ ಹೊಣೆಗಾರಿಕೆ ಚುನಾವಣಾ ಆಯೋಗಕ್ಕಿದೆ. ಮುಕ್ತ,ನ್ಯಾಯ ಸಮ್ಮತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ನಡೆಸಲು ಮತದಾರರ ಪಟ್ಟಿಗಳ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಮೂಲಭೂತ ಕರ್ತವ್ಯ. ಆದರೆ, ಇಂದಿನ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳು ಇತ್ತೀಚಿನ ವರ್ಷಗಳಲ್ಲಿ ನಡೆಯುತ್ತಿರುವ ಚುನಾವಣೆಗಳಲ್ಲಿ ಬಿಜೆಪಿಯು ಆಧಿಪತ್ಯ ಸ್ಥಾಪಿಸಲು ವರದಾನವಾಗಿದೆ ಎಂಬುದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿ ಕೂಟದ ಪ್ರಮುಖ ಆರೋಪಗಳಲ್ಲಿ ಒಂದು.

ಇದಕ್ಕೆ ಪೂರಕವಾಗಿ ಆಂಗ್ಲ ದಿನಪತ್ರಿಕೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ಇತ್ತೀಚೆಗೆ ಪ್ರಕಟಿಸಿದ ತನಿಖಾ ವರದಿಯೊಂದರಲ್ಲಿ ಚುನಾವಣಾ ಆಯೋಗದ ಇನ್ನಿಬ್ಬರು ಆಯುಕ್ತರುಗಳು ಎಸ್‌ಐಆರ್ ವಿಷಯದಲ್ಲಿ ಮುಖ್ಯ ಚುನಾವಣಾ ಆಯುಕ್ತರ ನಿರ್ಧಾರಗಳನ್ನು ಪ್ರಶ್ನಿಸಿ ೧೪ ಬಾರಿ ಪತ್ರ ಬರೆದಿದ್ದರೂ ಪರಿಗಣನೆಗೆ ತೆಗೆದು ಕೊಂಡಿಲ್ಲ ಎಂಬುದು ಟೀಕಾಕಾರರಿಗೆ ಹೊಸ ಅಸವನ್ನು ಒದಗಿಸಿದೆ. ಅದರ ಬೆನ್ನಲ್ಲೇ ಆಯೋಗವು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖ್ ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರ ಉಪಸ್ಥಿತಿಯಲ್ಲಿ ಹೊಸದಿಲ್ಲಿಯಲ್ಲಿ ಸಭೆ ನಡೆಸಿ ನಮ್ಮಲ್ಲಿ ಆಂತರಿಕ ಭಿನ್ನಾಭಿಪ್ರಾಯವಿಲ್ಲ ಎಂದು ತೋರ್ಪಡಿಸುವ ಯತ್ನ ನಡೆಸಿದೆ. ಈ ಸಭೆಯ ಬಳಿಕ ಚುನಾವಣಾ ಆಯೋಗವು ಎಸ್‌ಐಆರ್ ಪ್ರಕ್ರಿಯೆ, ಕೇಂದ್ರ ಸಂಪುಟ ಕಾರ್ಯ ದರ್ಶಿಯವರ ಪತ್ರ ಹಾಗೂ ಹೊಸ ಮತದಾರರ ನೋಂದಣಿಯ ನಮೂನೆ-೬ ಕುರಿತು ಸ್ಪಷ್ಟನೆಗಳನ್ನು ನೀಡಿದೆ. ಆದರೆ, ಇದರಿಂದ ಚುನಾವಣಾ ಆಯೋಗ ದೇಶದ ಜನರ ವಿಶ್ವಾಸಾರ್ಹತೆ ಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ಅಷ್ಟಕ್ಕೂ ಎಸ್‌ಐಆರ್ ಪ್ರಕ್ರಿಯೆ ಹೊಸದೇನೂ ಅಲ್ಲ. ಸ್ವಾತಂತ್ರ್ಯಾನಂತರ ದೇಶದಲ್ಲಿ ಈವರೆಗೆ ಹಲವು ಬಾರಿ ಎಸ್‌ಐಆರ್ ನಡೆದಿದೆ. ೨೦೦೩ರಲ್ಲಿ ಬಿಹಾರದಲ್ಲಿ ಕೊನೆಯದಾಗಿ ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ನಡೆದಿದೆ. ಆದರೆ, ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ಸಂವಿಧಾನಬದ್ಧ ಕರ್ತವ್ಯಗಳ ಕುರಿತು ಗಂಭೀರ ಪ್ರಶ್ನೆಗಳು ಎದ್ದಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿಯವರು ಮಧ್ಯಪ್ರವೇಶಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮಗೊಳ್ಳಬೇಕು. ಜೊತೆಗೆ ಸಂಸತ್ತಿಗೆ ಅವರನ್ನು ಕರೆಸಿ ವಾಗ್ದಂಡನೆ ವಿಽಸಬೇಕು ಎಂಬ ಜನಾಗ್ರಹ ಕೇಳಿಬಂದಿದೆ. ಆದರೆ, ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗದ ಮುಖ್ಯ ಆಯುಕ್ತರನ್ನು ಹುದ್ದೆಯಿಂದ ವಜಾಗೊಳಿಸುವುದು ಅಥವಾ ವಾಗ್ದಂಡನೆ ವಿಧಿಸುವುದು ಸುಲಭದ ಮಾತಲ್ಲ. ಇದಕ್ಕಾಗಿ ಕಾನೂನಿನ ಸುದೀರ್ಘ ಪ್ರಕ್ರಿಯೆಗಳನ್ನು ಅನುಸರಿಸಬೇಕಾಗುತ್ತದೆ. ಈ ಬಗ್ಗೆ ೨೦೨೩ರಲ್ಲೇ ಸಂಸತ್ತಿನಲ್ಲಿ ಮಸೂದೆ ಅಂಗೀಕಾರವಾಗಿ ಕಾಯ್ದೆಯಾಗಿದೆ.

ಮುಖ್ಯ ಚುನಾವಣಾ ಆಯುಕ್ತರು ತಮ್ಮಿಚ್ಛೆಯಿಂತೆ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ಆಯೋಗದ ವಿಚಾರಗಳಲ್ಲಿ ಆಯುಕ್ತರ ನಡುವೆ ಭಿನ್ನಾಭಿಪ್ರಾಯಗಳು ತಲೆದೋರಿದರೆ ಬಹುಮತಕ್ಕೆ ತಲೆಬಾಗಬೇಕಾಗುತ್ತದೆ ಎಂದು ೨೦೨೩ರ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಚುನಾವಣಾ ಆಯುಕ್ತರ ಕಾಯ್ದೆ ಹೇಳುತ್ತದೆ. ಸರ್ವಾನುಮತದ ನಿರ್ಣಯ ಸಾಧ್ಯವಾಗದಿದ್ದರೆ ಬಹುಮತದ ನಿರ್ಣಯವೇ ಅಂತಿಮ. ಹೀಗಿದ್ದರೂ ಆಯೋಗದ ಕೆಲವು ನಿರ್ಧಾರಗಳನ್ನು ಜ್ಞಾನೇಶ್ ಕುಮಾರ್ ಹೇಗೆ ಏಕಪಕ್ಷೀಯವಾಗಿ ಕೈಗೊಂಡರು? ಇದನ್ನು ಆಗಲೇ ಏಕೆ ಇಬ್ಬರು ಆಯುಕ್ತರು ಬಹಿರಂಗಪಡಿಸಲಿಲ್ಲ? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಬೇಕಿದೆ.

” ೨೦೨೫ರಲ್ಲಿ ಕೈಗೊಳ್ಳಲಾಗಿರುವ ಎಸ್‌ಐಆರ್ ಪ್ರಕ್ರಿಯೆ ಮೂಲಕ ದೇಶಾದ್ಯಂತ ೧೩ ಕೋಟಿಗೂ ಹೆಚ್ಚು , ಕರ್ನಾಟಕ ರಾಜ್ಯವೊಂದಲೇ ೧ ಕೋಟಿಗೂ ಹೆಚ್ಚುಮತದಾರರನ್ನು ಪಟ್ಟಿಯಿಂದ ಕೈಬಿಟ್ಟು, ಸಂವಿಧಾನ ಬದ್ಧ ಮತದಾನದ ಹಕ್ಕು ಕಸಿದುಕೊಳ್ಳಲು ಯತ್ನಿಸಿರುವುದು ಅಕ್ಷಮ್ಯ.”

 

 

ಆಂದೋಲನ ಡೆಸ್ಕ್

Recent Posts

ಪೋಕ್ಸೋ ಕಾಯಿದೆ ದುರ್ಬಳಕೆ, ಚಿತಾವಣೆ ಪೋಕ್ಸೋ ಅಪರಾಧಕ್ಕೆ ಸಮ!

ಸ್ಟ್ಯಾನ್ಲಿ, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಮಕ್ಕಳಿಗೆ ನೈತಿಕ ಪಾಠ ಮಾಡಬೇಕಾದ ಶಿಕ್ಷಕರು ಸೇರಿಕೊಂಡು ಮಕ್ಕಳಿಗೆ ಪ್ರಚೋದನೆ ನೀಡಿ ತಮ್ಮ…

10 mins ago

ರಾಜಕೀಯ ಧ್ರುವೀಕರಣಕ್ಕೆ ಈಗ ಸಿಗುತ್ತಿದೆ ವೇಗ

ರಾಜ್ಯ ರಾಜಕಾರಣ ಕುತೂಹಲಕಾರಿ ತಿರುವು ಪಡೆಯುತ್ತಿದೆ. ನಾಲ್ಕು ತಿಂಗಳ ಹಿಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯಿಂದ ಕೆಳಗಿಳಿದಿದ್ದೇ ಇದಕ್ಕೆ ಕಾರಣ. ಅಂದ…

17 mins ago

ಮಳೆಯಿಲ್ಲದೇ ಒಣಗುತ್ತಿದೆ ನಾಟಿ ಮಾಡಿದ ಪೈರು

ಲಕ್ಷ್ಮೀಕಾಂತ್ ಕೊಮಾರಪ್ಪ ವಾಡಿಕೆಯಂತೆ ಸುರಿಯದ ಮಳೆ; ಆತಂಕಗೊಂಡಿರುವ ರೈತರು ಸೋಮವಾರಪೇಟೆ: ಮಳೆ ಕೈಕೊಟ್ಟ ಪರಿಣಾಮ ಭತ್ತದ ಬೆಳೆಗೆ ನೀರಿನ ಕೊರತೆ…

24 mins ago

ಹೆದ್ದಾರಿ ಅಗಲೀಕರಣ ಕಾಮಗಾರಿ; ಸವಾರರಿಗೆ ದೂಳಿನ ಕಿರಿಕಿರಿ

ಮಹೇಂದ್ರ ಹಸಗೂಲಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಮೈಸೂರು- ಗುಂಡ್ಲುಪೇಟೆ-ಊಟಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ…

29 mins ago

ಪಾಳು ಕೊಂಪೆಯಂತಾದ ಕರ್ಜನ್ ಪಾರ್ಕ್!

ದಿನೇಶ್ ಕುಮಾರ್ ಎಚ್.ಎಸ್. ಅಶುಚಿತ್ವ ಮರೆಮಾಚಲು ಹಗಲು ಹೊತ್ತಿನಲ್ಲಿಯೇ ಪಾರ್ಕ್ ಬಂದ್; ಸಾರ್ವಜನಿಕರ ಆಕ್ರೋಶ ಮತ್ತೊಂದೆಡೆ ನಳನಳಿಸುತ್ತಿದೆ ಜಿಲ್ಲಾ ಪಂಚಾಯಿತಿ…

34 mins ago

ಹನೂರು | ಅರಣ್ಯದಲ್ಲಿ 292 ಗಾಂಜಾ ಗಿಡಗಳು ಪತ್ತೆ ; 213 ಕೆಜಿ ಗಾಂಜಾ ವಶ

ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…

12 hours ago