Andolana originals

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು ಒತ್ತುವರಿ ಮಾಡಿಕೊಂಡಿರುವ ಘಟನೆ ಕಾಂಚಳ್ಳಿ ಸಮೀಪದ ಜಮೀನುಗಳಲ್ಲಿ ನಡೆದಿದೆ.

ತಾಲ್ಲೂಕಿನ ಕಾಂಚಳ್ಳಿ, ಬಸಪ್ಪನದೊಡ್ಡಿ, ಗುಂಡಾಪುರ, ಅಜ್ಜೀಪುರ ಗ್ರಾಮಗಳ ವಿವಿಧೆಡೆ ಕಾಲುವೆಗಳನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡಿಕೊಂಡಿರುವ ವಿಚಾರ ತಿಳಿದಿದ್ದರೂ ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಸರಾಗವಾಗಿ ಹರಿದು ಕೊನೆಯ ಭಾಗದ ರೈತರ ಜಮೀನುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಲುವೆಗಳನ್ನು ನಿರ್ಮಾಣಮಾಡಲಾಗಿದೆ. ಆದರೆ ಜಮೀನು ಒತ್ತುವರಿ ಮಾಡಿಕೊಳ್ಳುವ ಉದ್ದೇಶದಿಂದ ನೀರು ಕಾಲುವೆಗಳನ್ನೇ ಮುಚ್ಚಿ ನೀರು ಹೋಗದಂತೆ ತಡೆಗಟ್ಟಿ ಮುಂದಿನ ಜಮೀನುಗಳ ರೈತರಿಗೆ ತೊಂದರೆ ಉಂಟು ಮಾಡಿದ್ದಾರೆ. ಅಲ್ಲದೆ, ಸಿಮೆಂಟ್ ಕಾಲುವೆಗಳನ್ನು ಮುಚ್ಚಿರುವ ಪರಿಣಾಮ ನೀರು ಬಂದರೆ ನೇರವಾಗಿ ರಸ್ತೆಗೆ ಬರುತ್ತದೆ. ನೀರು ಪೋಲಾಗುತ್ತದೆ ಹಾಗಾಗಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಚಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನೀರಾವರಿ ಇಲಾಖೆಯಿಂದ ನಿರ್ಮಿಸಿರುವ ಕಾಲುವೆಯನ್ನು ರೈತರೊಬ್ಬರು ತಮಗೆ ಬೇಕಾದಂತೆ ಮಾರ್ಪಡಿಸಿ ಮಣ್ಣಿನ ಕಾಲುವೆಗಳನ್ನು ರಚನೆ ಮಾಡಿ ನೀರನ್ನು ದಾರಿಗೆ ಬಿಟ್ಟಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಕಾಲುವೆಗಳನ್ನು ಮುಚ್ಚಿದ್ದರೂ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

” ಕಾಲುವೆಗಳನ್ನು ನಮ್ಮ ಅನುಮತಿ ಇಲ್ಲದೆ ಮುಚ್ಚಿರುವ ವಿಷಯ ಗಮನಕ್ಕೆ ಬಂದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಗೆ ಬುದ್ಧಿವಾದ ಹೇಳಿ ತೆರವು ಮಾಡಲು ಸೂಚನೆ ನೀಡಲಾಗಿದೆ.”

-ಕರುಣಾಮಯಿ, ಎಇಇ, ಕಬಿನಿ ಇಲಾಖೆ, ಕೊಳ್ಳೇಗಾಲ

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago