ಓದುಗರ ಪತ್ರ
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.
ತಮಿಳುನಾಡಿನಲ್ಲಿ ಜಲಮೂಲಗಳ ಬಳಕೆಯ ಪ್ರಮಾಣ ಶೇ.೪೦ರಷ್ಟಿದ್ದರೆ, ನಮ್ಮ ರಾಜ್ಯವು ಗಣನೀಯವಾಗಿ ಹಿಂದುಳಿದಿದೆ. ರಾಜ್ಯದ ಶೇ.೯೦ರಷ್ಟು ಜಲಮೂಲಗಳು ಗ್ರಾಮೀಣ ಭಾಗದಲ್ಲಿವೆ. ಬೇಸಿಗೆಯಲ್ಲಿ ಕೆರೆ, ಕಟ್ಟೆ ಮೊದಲಾದ ಜಲ ಮೂಲಗಳ ಹೂಳೆತ್ತಿದರೆ ಮಳೆಗಾಲದಲ್ಲಿ ಸಾಕಷ್ಟು ನೀರು ಸಂಗ್ರಹವಾಗಿ ನೀರಿನ ಸಮಸ್ಯೆ ನಿವಾರಣೆಗಾಗುತ್ತದೆ. ಬರೀ ಅಂಕಿ-ಅಂಶಗಳನ್ನು ಪ್ರಕಟಿಸಿ ಕಾಲಹರಣ ಮಾಡದೆ ಸರ್ಕಾರವು ಕೆರೆ, ಕಲ್ಯಾಣಿ ಹಾಗೂ ಕೊಳಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ತಕ್ಷಣವೇ ವೈಜ್ಞಾನಿಕ ಜಲನಯನ ಪ್ರದೇಶ ನಿರ್ವಹಣೆ ಮತ್ತು ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಸಮಗ್ರವಾಗಿ ಜಾರಿಗೆ ತರದಿದ್ದರೆ ರಾಜ್ಯವು ಭವಿಷ್ಯದಲ್ಲಿ ತೀವ್ರ ಕುಡಿಯುವ ನೀರಿನ ಅಭಾವವನ್ನು ಎದುರಿಸಬೇಕಾಗುತ್ತದೆ.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…
ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕಿನಲ್ಲಿ ಭತ್ತ, ಮುಸುಕಿನ ಜೋಳ ಬೆಳೆಗೆ ರೈತರ ಒತ್ತು ಕುಶಾಲನಗರ: ಮುಂಗಾರು ಮಳೆಯ ಪ್ರಮಾಣದಲ್ಲಿ ಕೊರತೆ ಕಂಡುಬಂದಿರುವುದರ…
ಎಂ.ನಾರಾಯಣ ತಿ.ನರಸೀಪುರ: ನಾಲೆಗಳಿಗೆ ನೀರು ಹರಿಸದ ಕಾರಣ ಒಣಗುತ್ತಿರುವ ದ್ವಿದಳ ಧಾನ್ಯ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿ…