Mysore
20
overcast clouds

Social Media

ಗುರುವಾರ, 10 ಅಕ್ಟೋಬರ್ 2024
Light
Dark

‘ಹಾವು ಕಡಿತದಿಂದ ಭಾರತದಲ್ಲೆ ಹೆಚ್ಚು ಸಾವು’

ವಿಶ್ವ ಹಾವು ಕಡಿತ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ನೇಕ್‌ ಶ್ಯಾಂ ಆತಂಕ

ಕೆ. ಆರ್. ನಗರ : ಹಾವಿನ ಕಡಿತದಿಂದ ಸಾಯುವವರ ಸಂಖ್ಯೆ ಭಾರತದಲ್ಲೇ ಅಧಿಕವಾಗಿದ್ದು, ನಿರಂತರ ಜಾಗೃತಿಯ ನಂತರವೂ ಹಾವು ಕಡಿತವನ್ನು ಗಂಭೀರವಾಗಿ ತೆಗೆದುಕೊಳ್ಳುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಉರಗ ತಜ್ಞ ಸ್ನೇಕ್ ಶ್ಯಾಮ್ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಹಾವು ಕಡಿತ ಜಾಗೃತಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾವು ಕಡಿತ ಜಾಗತಿಕ ಸಮಸ್ಯೆಯಾಗಿದೆ. ಜಗತ್ತಿನ ಎಲ್ಲ ದೇಶಗಳಲ್ಲೂ ಬಗೆಬಗೆಯ ಹಾವುಗಳಿವೆ. ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಹಾವುಗಳ ಸಂಖ್ಯೆ ಅಽಕ. ಜಾಗೃತಿ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಹಾವು ಕಡಿತದಿಂದ ಮೃತಪಡುವವರ ಸಂಖ್ಯೆಯೂ ಏರಿಕೆಯಾಗಿದೆ. ಈ ಕಾರಣದಿಂದಲೇ ಸೆ. ೧೯ಅನ್ನು ಅಂತರರಾಷ್ಟ್ರೀಯ ಹಾವು ಕಡಿತದ ಜಾಗೃತಿ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ದಿನ ಹಾವಿನ ಕಡಿತದ ಕುರಿತಾಗಿಯೇ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಯಾವ ಹಾವು ಅಪಾಯಕಾರಿ? : ಭಾರತದಲ್ಲಿ ೩೦೦ ವಿಧದ ಹಾವುಗಳಿದ್ದು, ಅವುಗಳೆಲ್ಲವೂ ಅಪಾಯಕಾರಿಯಲ್ಲ. ದೇಶದಲ್ಲಿ ಹಾವು ಕಡಿತದಿಂದ ಮೃತಪಟ್ಟವರಲ್ಲಿ ಶೇ. ೯೦ಕ್ಕೂ ಅಧಿಕ ಜನರು ನಾಗರಹಾವು, ಕೊಳಕು ಮಂಡಲ, ಕಟ್ಟುಹಾವು, ಉರಿ ಮಂಡಲ ಈ ೪ ಜಾತಿಯ ಹಾವುಗಳ ಕಡಿತದಿಂದ ಮಾತ್ರ ಮೃತಪಟ್ಟಿದ್ದಾರೆ. ಇವು ಹೆಚ್ಚು ಅಪಾಯಕಾರಿ ಹಾವುಗಳೂ ಕೂಡ. ಈ ಹಾವುಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಜನವಸತಿ ಪ್ರದೇಶಗಳಲ್ಲಿ ಹೆಚ್ಚು ಕಂಡುಬರುತ್ತವೆ. ಇವುಗಳ ಕಡಿತದಿಂದಲೇ ಗರಿಷ್ಟ ಸಂಖ್ಯೆಯ ಜನ ಮೃತಪಟ್ಟಿದ್ದಾರೆ. ಆದ್ದರಿಂದ ಹಾವುಗಳ ಬಗ್ಗೆ ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು.

ಮುನ್ನೆಚ್ಚರಿಕೆ ಕ್ರಮಗಳು ಹೀಗಿರಲಿ: ರೈತರು ರಾತ್ರಿ ವೇಳೆ ಜಮೀನಿಗೆ ಹೋದಾಗ ಕಡ್ಡಾಯವಾಗಿ ಟಾರ್ಚ್ ಬಳಸುವುದು, ಸಾಧ್ಯವಾದರೆ ಶೂಗಳನ್ನು ಬಳಸುವುದು ಸೂಕ್ತ. ಕಳೆ, ಹುಲ್ಲುಗಾವಲು, ಅರಣ್ಯ ಪ್ರದೇಶ, ಜಮೀನಿನಲ್ಲಿ ಕೆಲಸ ಮಾಡುವಾಗ ಗಮ್‌ಬೂಟ್ ಬಳಸಬೇಕು. ಹಾವು ಕಚ್ಚಿದಾಗ ಮಂತ್ರ-ತಂತ್ರದ ಮೊರೆ ಹೋಗದೆ, ಹತ್ತಿರದ ಆಸ್ವತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದರೆ ಬದುಕುಳಿಯಬಹುದು ಎಂದು ಸಲಹೆ ನೀಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಡಿ. ನಟರಾಜು ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಹಾವು ಕಡಿತದಿಂದ ಪ್ರತಿ ವರ್ಷ ಪ್ರಪಂಚದಾದ್ಯಂತ ಸುಮಾರು ೧. ೪೦ ಲಕ್ಷ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಭಾರತದಲ್ಲೇ ಪ್ರತಿ ವರ್ಷ ೫೦,೦೦೦ಕ್ಕೂ ಹೆಚ್ಚು ಜನರು ಹಾವು ಕಡಿತದಿಂದ ಸಾಯುತ್ತಿದ್ದಾರೆ, ಭಾರತವು ಹಾವು ಕಡಿತದಿಂದ ಸಾವಿನ ಜಾಗತಿಕ ರಾಜಧಾನಿ ಎಂದೇ ವಿಶ್ವ ಆರೋಗ್ಯ ಸಂಸ್ಥೆ ಹೇಳುತ್ತದೆ ಎಂದರು.

ಕೆ. ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ಆರೋಗ್ಯ ಇಲಾಖೆಯ ಸಹಾಯಕರು, ಆಶಾ ಕಾರ್ಯಕರ್ತೆಯರು ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ ಎಂದರು.

ಕರ್ನಾಟಕ ರಾಜ್ಯ ರೈತ ಪರ್ವ ಸಂಘದ ಗೌರವಾಧ್ಯಕ್ಷ ಜೆ. ಎಂ. ಕುಮಾರ್, ತಾಲ್ಲೂಕು ಯುವ ರೈತ ವೇದಿಕೆ ಅಧ್ಯಕ್ಷ ಅರ್ಜುನಹಳ್ಳಿ ರಾಮ್ ಪ್ರಸಾದ್ ಮಾತನಾಡಿದರು. ತಾಲ್ಲೂಕು ಸರ್ವೋದಯ ಪಕ್ಷದ ಅಧ್ಯಕ್ಷ ಗರುಡಗಂಭ ಸ್ವಾಮಿ, ಹಿರಿಯ ಆರೋಗ್ಯ ನಿರೀಕ್ಷಣಾಽಕಾರಿ ಕೆ. ವಿ. ರಮೇಶ್, ಕ್ಷೇತ್ರ ಆರೋಗ್ಯ ಶಿಕ್ಷಣಾಽ ಕಾರಿ ಸಿ. ಎಂ. ರೇಖಾ, ಆರೋಗ್ಯ ಸಂರಕ್ಷಣಾಽಕಾರಿ ಪಾರ್ವತಿ, ಡಿಸೋಜ, ಹೇಮಲತಾ ಹಾಜರಿದ್ದರು.

 

Tags: