Andolana originals

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಶೇ.77.86 ಪ್ರಗತಿ

ನವೀನ್ ಡಿಸೋಜ

ಮಡಿಕೇರಿ: ಜಿಲ್ಲೆಯ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿಸಂಗ್ರಹಿಸುವ ಸಮೀಕ್ಷಾ ಕಾರ್ಯ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶೇ.೭೭.೮೬ ಪ್ರಗತಿ ಸಾಧಿಸಲಾಗಿದೆ.

ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ೧,೧೩೧ ಬ್ಲಾಕ್‌ಗಳಿವೆ. ಒಟ್ಟು ೧,೩೪,೩೯೬ ಕುಟುಂಬಗಳ ಸಮೀಕ್ಷೆಯ ಗುರಿ ಇರಿಸಿಕೊಳ್ಳಲಾಗಿದ್ದು, ಈಗಾಗಲೇ ೧,೦೪,೬೪೪ ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಆ ಮೂಲಕ ಶೇ.೭೭.೮೬ ಸಮೀಕ್ಷೆ ನಡೆದಿದೆ. ಕುಶಾಲನಗರ ತಾಲ್ಲೂಕಿನಲ್ಲಿ ೩೦೪ ಬ್ಲಾಕ್‌ಗಳಲ್ಲಿನ ೩೪,೬೩೭ ಕುಟುಂಬಗಳ ಪೈಕಿ ೨೬,೮೧೯ ಕುಟುಂಬಗಳ ಸಮೀಕ್ಷೆ ಮುಗಿದಿದೆ. ಮಡಿಕೇರಿ ತಾಲ್ಲೂಕಿನಲ್ಲಿ ೨೬೪ ಬ್ಲಾಕ್‌ಗಳಲ್ಲಿನ ೩೫,೧೨೭ ಕುಟುಂಬಗಳ ಪೈಕಿ ೨೫,೬೧೦ ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ.

ಪೊನ್ನಂಪೇಟೆ ತಾಲ್ಲೂಕಿನ ೮೭ ಬ್ಲಾಕ್‌ಗಳಲ್ಲಿ ೧೦,೩೩೭ ಕುಟುಂಬಗಳ ಪೈಕಿ ೮,೭೪೩ ಕುಟುಂಬಗಳ ಸಮೀಕ್ಷೆ ಮುಗಿದಿದೆ. ಸೋಮವಾರಪೇಟೆ ತಾಲ್ಲೂಕಿನ ೨೬೬ ಬ್ಲಾಕ್‌ಗಳಲ್ಲಿ ೨೯,೪೦೨ ಕುಟುಂಬಗಳ ಗುರಿಯಲ್ಲಿ ೨೪,೪೨೮ ಕುಟುಂಬಗಳ ಸಮೀಕ್ಷೆ ಆಗಿದೆ. ಹಾಗೆಯೇ ವಿರಾಜಪೇಟೆ ತಾಲ್ಲೂಕಿನ ೨೧೦ ಬ್ಲಾಕ್‌ಗಳಲ್ಲಿ ೨೪,೮೯೩ ಕುಟುಂಬಗಳ ಗುರಿಯಲ್ಲಿ ೧೯,೦೪೪ ಕುಟುಂಬಗಳ ಸರ್ವೇ ಪೂರ್ಣಗೊಂಡಿದೆ.

ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯ ಸಿದ್ಧಪಡಿಸ ಲಾಗಿದೆ. ಸಾರ್ವಜನಿಕರು  https://kscbcselfdeclaration.karnataka.gov.in ನಲ್ಲಿ ಸ್ವಯಂ  ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವಅವಶ್ಯವಿರುವುದರಿಂದ ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ತೆಗೆದಿರಿಸಿಕೊಂಡು ಸುಲಭವಾಗಿ ಈ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸಬಹುದಾಗಿದೆ.

ಕಾಡಾನೆ ದಾಳಿ ಭೀತಿ..!: 

ವನ್ಯಮೃಗಗಳ ಹಾವಳಿ ಹೆಚ್ಚಿರುವ ಕೊಡಗು ಜಿಲ್ಲೆಯಲ್ಲಿ ಸಮೀಕ್ಷೆ ಸಂದರ್ಭದಲ್ಲಿ ಕಾಡಾನೆ ದಾಳಿ ಭೀತಿ ಎದುರಾಗಿದೆ. ಇತ್ತೀಚೆಗೆ ಗೋಣಿಕೊಪ್ಪದ ಶಿಕ್ಷಕರೊಬ್ಬರು ಸಮೀಕ್ಷೆಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿ ಕಾಡಾನೆ ನಿಂತಿರುವುದನ್ನು ಕಂಡು ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದರು. ಮತ್ತೊಂದೆಡೆ ಅತ್ತೂರು ಶಾಲೆಯ ಶಿಕ್ಷಕಿಯೊಬ್ಬರು ಸಮೀಕ್ಷೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾಫಿ ತೋಟವೊಂದರಲ್ಲಿ ಆನೆ ಪ್ರತ್ಯಕ್ಷವಾಗಿದ್ದು, ಕಾರು ಚಲಾಯಿಸುತ್ತಿದ್ದ ಪತಿಯ ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾರೆ. ಈ ರೀತಿ ಕಾಡಾನೆ ದಾಳಿ ಭೀತಿಯ ನಡುವೆಯೂ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ಚುರುಕುಗೊಳಿಸಿದ್ದು, ಕೆಲವೆಡೆ ಅಧಿಕಾರಿಗಳು ಕೂಡ ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

ಹಲವು ಸವಾಲುಗಳ ನಡುವೆ ಸಮೀಕ್ಷೆ..!: 

ಸಮೀಕ್ಷೆ ಸಂದರ್ಭದಲ್ಲಿ ಕೆಲವೆಡೆ ಸಾರ್ವಜನಿಕರಿಂದ ಅಸಹಕಾರವೂ ಕಂಡುಬಂದಿದೆ. ಈ ಬಗ್ಗೆ ಮಾಹಿತಿ ನೀಡಿದ ಶಿಕ್ಷಕಿಯೊಬ್ಬರು, ಸರ್ವರ್ ಸ್ಲೋ ಇದೆ. ನೀರು ಕುಡಿದು ಬರುತ್ತೇವೆ ಎಂದು ತಿಳಿಸಿದರೆ ನೀವು ಸುಮ್ನೆ ಶೋಕಿ ಮಾಡ್ಕೊಂಡು ತಿರುಗುತ್ತಿದ್ದೀರಾ ಎಂದು ಅಸಹಕಾರ ತೋರಿದ್ದಾರೆ. ಮತ್ತೊಂದು ಮನೆಯವರು ಸಂಘದಲ್ಲಿ ನಾವು ಸಾಲ ತೆಗೆದುಕೊಂಡಿದ್ದೇವೆ. ಈವರೆಗೆ ಕಟ್ಟಿಲ್ಲ; ನೀವು ಸಾಲದ ಹಣವನ್ನು ಕಟ್ಟಿಕೊಟ್ಟರೆ ನಾವು ಸಮೀಕ್ಷೆಗೆ ಬೇಕಾದ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ ಎಂದು ಅನುಭವವನ್ನು ಹಂಚಿಕೊಂಡಿದ್ದಾರೆ. ಈ ನಡುವೆ ಸಮೀಕ್ಷೆಗಾಗಿ ಶಿಕ್ಷಕರಿಗೆ ರಜೆ ವಿಸ್ತರಿಸಿರುವುದರಿಂದ ಮಕ್ಕಳ ಶೈಕ್ಷಣಿಕ ಕಲಿಕೆಯ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.

” ಕೊಡಗು ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ.೭೭.೮೬ರಷ್ಟು ಪ್ರಗತಿ ಸಾಧಿಸಲಾಗಿದೆ. ಗಣತಿದಾರರು ತಮ್ಮ ಮನೆಗೆ ಬರುವವರೆಗೆ ಕಾಯದೇ ಸಾರ್ವಜನಿಕರು ತಮಗೆ ಅನುಕೂಲವಾದ ಅವಧಿಯಲ್ಲಿ ಯಾವುದೇ ಪ್ರದೇಶದಿಂದ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ತಾವೇ ತಮ್ಮ ಮಾಹಿತಿಯನ್ನು ದಾಖಲು ಮಾಡುವುದರಿಂದ, ಗೊಂದಲಗಳಿಲ್ಲದೆ ನಿಖರವಾಗಿ ತಮ್ಮ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಸಮೀಕ್ಷೆಯಲ್ಲಿ ತಿಳಿಸಲು ಸಾಧ್ಯವಾಗಲಿದೆ.”

-ಎ.ಎಸ್. ದೀಪಕ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ

ಆಂದೋಲನ ಡೆಸ್ಕ್

Recent Posts

ಚಾಮುಂಡಿಬೆಟ್ಟ ಉಳಿಸಿ: ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…

20 mins ago

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ: ಎಂಎಲ್‌ಸಿ ರಾಜೇಂದ್ರ ರಾಜಣ್ಣ

ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…

1 hour ago

ಧರ್ಮಸ್ಥಳ ಬುರುಡೆ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರ ಎಫ್‌ಎಸ್‌ಎಲ್‌ಗೆ ರವಾನೆ

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.…

1 hour ago

ಕೇರಳ ವಿಧಾನಸಭೆ ಚುನಾವಣೆ: ಶೋಭಾ ಕರಂದ್ಲಾಜೆಗೆ ಮಹತ್ವದ ಜವಾಬ್ದಾರಿ

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್‌ ನಬಿನ್‌ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…

2 hours ago

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

2 hours ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

2 hours ago