ನವೀನ್ ಡಿಸೋಜ
ಜಿಲ್ಲೆಯಲ್ಲಿ ೧,೧೩೨ ಸಮೀಕ್ಷಾದಾರರು, ೭೧ ಮಂದಿ ಮೇಲ್ವಿಚಾರಕರ ನಿಯೋಜನೆ; ಪ್ರತಿ ಕುಟುಂಬದ ಮಾಹಿತಿ ಸಂಗ್ರಹಕ್ಕೆ ಸಿದ್ಧತೆ
ಮಡಿಕೇರಿ: ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯನ್ನು ನಿಖರವಾಗಿ ದಾಖಲಿಸುವ ಸಲುವಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು ಮುಂದಾಗಿದ್ದು, ಇಂದಿನಿಂದ ಅ.೭ರವರೆಗೆ ನಡೆಯಲಿದೆ. ಕೊಡಗು ಜಿಲ್ಲೆಯಲ್ಲಿಯೂ ಸಮೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಬೆಳವಣಿಗೆಯ ವಾಸ್ತವಿಕ ಸ್ಥಿತಿಗತಿ ಅರಿಯುವುದು, ಜನಸಮುದಾಯಗಳ ಅಂಕಿ-ಅಂಶಗಳ ಸಂಗ್ರಹ, ಆರ್ಥಿಕ ಬೆಳವಣಿಗೆಯ ಸ್ಥಿತಿಗತಿಯನ್ನು ಅರಿಯುವುದು ಈ ಸಮೀಕ್ಷೆಯ ಉದ್ದೇಶವಾಗಿದೆ. ಜೊತೆಗೆ ಈ ಹಿಂದಿನ ಸರ್ಕಾರಿ ಯೋಜನೆಗಳ ಪರಿಣಾಮ ಮತ್ತು ಫಲಿತಾಂಶಗಳ ಸಂಗ್ರಹ, ವಿವಿಧ ಜನಸಮುದಾಯಗಳ ಕುಲಕಸುಬು, ಕಸುಬು, ಕಸುಬಿನ ರೂಪಾಂತರ, ಸಾಮಾಜಿಕ ಪರಿವರ್ತನೆಗಳ ಅಧ್ಯಯನ, ಮೂಲಸೌಕರ್ಯಗಳಾದ ನೀರು, ವಸತಿ, ಶೌಚಾಲಯ, ಬೆಳಕು, ಇಂಧನ, ಶಿಕ್ಷಣ, ಆರೋಗ್ಯ ಇವುಗಳ ಸಂಕ್ಷಿಪ್ತ ಮಾಹಿತಿ ಸಂಗ್ರಹ ಮತ್ತಿತರ ಉದ್ದೇಶದೊಂದಿಗೆ ಸಮೀಕ್ಷೆ ನಡೆಸಲಾಗುತ್ತಿದೆ.
ಸಮೀಕ್ಷೆಗಾಗಿ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯುಕ್ತಿಗೊಳಿಸಲಾಗಿದೆ. ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿ ಆಪ್ ಮೂಲಕ ಆನ್‌ಲೈನ್‌ನಲ್ಲಿ ಈ ಸಮೀಕ್ಷೆ ನಡೆಯಲಿದೆ. ಸಮೀಕ್ಷೆಯ ದತ್ತಾಂಶ ಸಂಗ್ರಹವು ಶೀಘ್ರವಾಗಿ ನಡೆಯಲಿದೆ. ಪ್ರತಿ ಮನೆಯನ್ನು ಗುರುತಿಸಲು ಈಗಾಗಲೇ ವಿದ್ಯುತ್ ಸಂಪರ್ಕದ ಯುಹೆಚ್‌ಐಡಿ ಸಂಖ್ಯೆಯನ್ನು ನೀಡಲಾಗಿದೆ. ಇದರಿಂದಾಗಿ ಯಾವುದೇ ಮನೆಗಳು ಬಿಟ್ಟು ಹೋಗುವ ಸಾಧ್ಯತೆಗಳು ಬಲುವಿರಳ. ಓರ್ವ ಸಮೀಕ್ಷಕ ಅಂದಾಜು ೧೫೦ ಮನೆಗಳನ್ನು ಸಮೀಕ್ಷೆಗೆ ಒಳಪಡಿಸಲಿದ್ದಾನೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆ ಸಂಬಂಧ ಜಿಲ್ಲೆಯಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಈ ಸಂಬಂಧ ತರಬೇತಿ ಕಾರ್ಯಾಗಾರಗಳ ಮೂಲಕ ಶಿಕ್ಷಕರಿಗೆ ಮಾಹಿತಿ ಒದಗಿಸುವ ಕೆಲಸ ಮಾಡಲಾಗಿದೆ.
ಜಿಲ್ಲೆಯಲ್ಲಿ ೧,೧೩೨ ಸಮೀಕ್ಷಾದಾರರು ಮತ್ತು ೭೧ ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಸಮೀಕ್ಷಾದಾರರ ಮ್ಯಾಪಿಂಗ್ ಕಾರ್ಯ ನಡೆಸಲಾಗಿದ್ದು, ಮೊಬೈಲ್ ಆಪ್ ಮೂಲಕ ಸಮೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶವನ್ನು ಈಡೇರಿಸಲು, ಅರ್ಹ ಹಿಂದುಳಿದ ವರ್ಗಗಳನ್ನು ನಿಖರವಾಗಿ ಗುರುತಿಸಿ, ಸರ್ಕಾರದ ಸೌಲಭ್ಯವನ್ನು ಸಮಪರ್ಕವಾಗಿ ತಲುಪಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷಕರು ನಿಗದಿಪಡಿಸಿದ ಪ್ರಶ್ನೆಗಳನ್ನು ಕೇಳಿ ಮಾಹಿತಿ ತುಂಬಿಸಬೇಕಾದ ಮತ್ತು ನಿಗದಿತ ಸಮಯದಲ್ಲಿ ಈ ಸಮೀಕ್ಷೆ ಮುಗಿಸಬೇಕಾದ ಅನಿವಾರ್ಯತೆ ಇರುವ ಕಾರಣ ಅಗತ್ಯ ದಾಖಲೆಗಳನ್ನು ಮೊದಲೇ ಸಂಗ್ರಹಿಸಿಟ್ಟುಕೊಳ್ಳಬೇಕಾದ ಅಗತ್ಯವಿದೆ.
ಜನರು ಮಾಡಬೇಕಾಗಿರುವುದು ಏನು?: ಸಮೀಕ್ಷಕರು ಮನೆಗೆ ಬಂದಾಗ ಅವರನ್ನು ಸ್ವಾಗತಿಸಿ ತಾಳ್ಮೆಯಿಂದ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಬೇಕು. ನಿಮ್ಮ ಮನೆಯ ಸಮೀಕ್ಷೆ ಮುಗಿಯದ ಹೊರತು ಮನೆಗೆ ಬೀಗ ಹಾಕಿ ತೆರಳಬೇಡಿ. ಮನೆಯಲ್ಲಿ ಮುಖ್ಯಸ್ಥರು ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿರುವ ಸದಸ್ಯರಿಗೆ ಸಮೀಕ್ಷೆಗೆ ಉತ್ತರಿಸುವ ಜವಾಬ್ದಾರಿ ನೀಡಬೇಕು. ಒಂದು ವೇಳೆ ಸಮೀಕ್ಷೆ ಸಂದರ್ಭದಲ್ಲಿ ಸಮೀಕ್ಷಕರು ನಿಮ್ಮ ಮೊಬೈಲ್‌ಗೆ ಬಂದ ಒಟಿಪಿ ಕೇಳಿದ ಸಂದರ್ಭದಲ್ಲಿ ಒಟಿಪಿ ನೀಡಬೇಕು.
” ಮೊಬೈಲ್ ಆಪ್ ಮೂಲಕ ಸಮೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ೧,೧೩೨ ಸಮೀಕ್ಷಾದಾರರು ಮತ್ತು ೭೧ ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಸಮೀಕ್ಷಾದಾರರಮ್ಯಾಪಿಂಗ್ ಕಾರ್ಯವು ಶೇ.೯೦ರಷ್ಟು ಪೂರ್ಣಗೊಂಡಿದೆ. ಈಗಾಗಲೇ ಪ್ರತಿ ಕುಟುಂಬಕ್ಕೂ ಸ್ಟಿಕ್ಕರ್‌ಗಳನ್ನು ಅಂಟಿಸಲಾಗಿದೆ. ಆ ನಿಟ್ಟಿನಲ್ಲಿ ಪ್ರತಿ ಕುಟುಂಬದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ.”
ದೀಪಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ
ಮಾಹಿತಿಗೆ ಯಾವ ದಾಖಲೆ ಬೇಕು?: ನಿಮ್ಮ ಕುಟುಂಬದ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ, ಇನ್ನಿತರೆ ಅಗತ್ಯ ದಾಖಲೆಗಳನ್ನು ಸಮೀಕ್ಷೆ ಸಂದರ್ಭದಲ್ಲಿ ಸುಲಭದಲ್ಲಿ ಲಭ್ಯವಾಗುವಂತೆ ಇಟ್ಟುಕೊಳ್ಳಬೇಕು. ಮನೆಯಲ್ಲಿ ವಿಶೇಷಚೇತನರಿದ್ದಲ್ಲಿ ಅವರಿಗೆ ಇಲಾಖೆ ನೀಡಿರುವ ವಿಶಿಷ್ಟ ಗುರುತಿನ ಚೀಟಿಯನ್ನು ಸಮೀಕ್ಷೆ ಸಂದರ್ಭದಲ್ಲಿ ತೋರಿಸಬೇಕಿದೆ. ಒಂದು ವೇಳೆ ರೇಷನ್ ಕಾರ್ಡ್‌ನಲ್ಲಿ ಕುಟುಂಬದ ಸದಸ್ಯನ ಹೆಸರಿಲ್ಲದ ಪಕ್ಷದಲ್ಲಿ ಆ ವ್ಯಕ್ತಿಯ ಆಧಾರ್ ನಂಬರ್ ಮೂಲಕ ಸಮೀಕ್ಷೆಗೆ ಒಳಪಡಿಸಲಾಗುತ್ತದೆ.
ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ…
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…
ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…