Andolana originals

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ

ಮೈಸೂರಿನ ಕುವೆಂಪುನಗರದ ಕೆ.ಎಚ್.ಬಿ.ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರುಗಂಟಿಗಳು ತಮಗಿಷ್ಟ ಬಂದ ಸಮಯಕ್ಕೆ ನೀರು ಬಿಡುತ್ತಿರುವುದರಿಂದ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉದ್ಭವಿಸಿದೆ.
ಇಲ್ಲಿನ ನಿವಾಸಿಗಳು ಬೆಳಿಗ್ಗೆ 10 ಗಂಟೆಯ ನಂತರ ಕೆಲಸಕ್ಕೆಂದು ತೆರಳಿ ಬಿಡುತ್ತಾರೆ. ಅಷ್ಟರಲ್ಲಿಯೇ ಮನೆಗೆಲಸಗಳನ್ನು ಮಾಡಿ ಮುಗಿಸಬೇಕು. ಇಲ್ಲವೇ ಸಂಜೆ ಬಂದು ಮಾಡಬೇಕು. ಆದರೆ ನೀರುಗಂಟಿಗಳ ತಮಗಿಷ್ಟ ಬಂದಸಮಯದಲ್ಲಿ ನೀರುಬಿಡುವುದರಿಂದಸಮಯಹೊಂದಿಸಿಕೊಂಡು ನೀರು ತುಂಬಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಯಾವ ಸಮಯಕ್ಕೆ ನೀರು ಬರಬಹುದು ಎಂಬ ಗೊಂದಲ ಜನರಲ್ಲಿ ಉಂಟಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬಳಿಕ ಒಂದೆರಡು ದಿನಗಳು ಸರಿಯಾದ ಸಮಯಕ್ಕೆ ನೀರು ಬಿಡುತ್ತಾರೆ ಅಷ್ಟೇ. ಇನ್ನು ಈ ಬಡಾವಣೆಯಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಇಲ್ಲಿನ ಪಾರ್ಕ್‌ಗಳ ವಾತಾವರಣವೇ ಹಾಳಾಗಿದೆ. ಅಲ್ಲದೆ ಸರಿಯಾದ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಸಂಜೆಯಾಗುತ್ತಲೇ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ಆದ್ದರಿಂದ ಸಂಬಂಧಪಟ್ಟವರು ನಮ್ಮ ಬಡಾವಣೆಯತ್ತ ಗಮನಹರಿಸಿ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕಿದೆ.
-ಶಶಿಕುಮಾರ್‌, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

4 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

4 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

6 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

6 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

8 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

9 hours ago