ಲಕ್ಷ್ಮೀಕಾಂತ್ ಕೊಮಾರಪ್ಪ
ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್; ಇಲಾಖೆಯ ವಿರುದ್ಧ ಸ್ಥಳೀಯರ ಅಸಮಾಧಾನ, ಕ್ರಮಕ್ಕೆ ಆಗ್ರಹ
ಸೋಮವಾರಪೇಟೆ: ಪಟ್ಟಣದಿಂದ ಆಲೇಕಟ್ಟೆ-ಕೂಡುರಸ್ತೆ-ಕಲ್ಕಂದೂರು-ಹೊಸಬೀಡು-ತೋಳೂರುಶೆಟ್ಟಳ್ಳಿಮಾರ್ಗವಾಗಿ ಇನಕನಳ್ಳಿಯವರೆಗಿನ ರಸ್ತೆಯಲ್ಲಿ ಸಾಗುವ ಬಹುತೇಕ ಮಂದಿ ಸರ್ಕಾರ ಹಾಗೂ ಲೋಕೋಪಯೋಗಿ ಇಲಾಖೆ, ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಈ ಈ ರಸ್ತೆಯಲ್ಲಿ ನೂರಾರು ಗುಂಡಿಗಳು ನಿರ್ಮಾಣವಾಗಿ ಡಾಂಬರು ರಸ್ತೆಯನ್ನು ಹುಡುಕುವಂತಹ ಸ್ಥಿತಿ ನಿರ್ಮಾಣವಾಗಿದೆ.
ಆಲೇಕಟ್ಟೆಯ ಸಿದ್ದೇಶ್ವರ ಟಯರ್ ವಕ್ಸ್‌ರ್ನಿಂದ ಕೂಡುರಸ್ತೆ ಜಂಕ್ಷನ್‌ವರೆಗೆ ರಸ್ತೆಯ ದುಸ್ಥಿತಿ ಹೇಳತೀರದ್ದಾಗಿದೆ. ಪ್ರಸಕ್ತ ಸಾಲಿನ ಮಳೆಗಾಲ ಇನ್ನೂ ನಿಂತಿಲ್ಲ, ರಸ್ತೆಯ ಗುಂಡಿಗಳೂ ಮುಚ್ಚುತ್ತಿಲ್ಲ ಎಂಬಂತಹ ಸ್ಥಿತಿಯಿದೆ. ಲೋಕೋಪಯೋಗಿ ಇಲಾಖೆ ಸಚಿವರು ಜ.೧೧ರಂದು ರಸ್ತೆ ಕಾಮಗಾರಿಗೆ ತೋಳೂರು ಶೆಟ್ಟಳ್ಳಿಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದರು. ತಕ್ಷಣದಿಂದಲೇ ಕಾಮಗಾರಿ ಆರಂಭಿಸಿದ್ದರೆ ಇಷ್ಟರಲ್ಲಾಗಲೇ ಬಹುಪಾಲು ಕೆಲಸ ಪೂರ್ಣಗೊಳ್ಳುತ್ತಿತ್ತು. ಆದರೆ, ಕಾಮಗಾರಿ ಪೂರ್ಣಗೊಳ್ಳದೆ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ.
ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ವತಿಯಿಂದ ಸೋಮವಾರಪೇಟೆ ಪಟ್ಟಣದಿಂದ ತೋಳೂರುಶೆಟ್ಟಳ್ಳಿ ಮಾರ್ಗವಾಗಿಕೂತಿ ಮೂಲಕ ಹಾಸನ ಜಿಲ್ಲೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ೨೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು,ಕಾಮಗಾರಿ ಸೂಕ್ತವಲ್ಲದ ಸಮಯದಲ್ಲಿ ಆರಂಭಿಸಿದ್ದಕ್ಕೆ ಈ ಭಾಗದ ಜನರು ಸಂಚಾರದ ಸಮಸ್ಯೆ ಎದುರಿಸುವಂತಾಗಿದೆ.
ಹೆಚ್‌ಎಸ್‌ಡಿಪಿ ಯೋಜನೆಯಡಿ ಬೆಂಗಳೂರು-ಜಾಲ್ಸೂರು ರಾಜ್ಯ ಹೆದ್ದಾರಿ ೮೫ಕ್ಕೆ ಒಳಪಡುವ ಸೋಮವಾರಪೇಟೆ-ತೋಳೂರು ಶೆಟ್ಟಳ್ಳಿ-ಕೂತಿ ರಸ್ತೆಯನ್ನು ಈಗಾಗಲೇ ಕೆಲ ಭಾಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಪಟ್ಟಣದ ವಿವೇಕಾನಂದ ವೃತ್ತದಿಂದ ಆಲೇಕಟ್ಟೆವರೆಗೆ ೪ ವರ್ಷಗಳ ಹಿಂದೆ ಸಿಮೆಂಟ್ ರಸ್ತೆ ನಿರ್ಮಿಸಿದ್ದು, ಮುಂದುವರಿದ ೭.೨೪ ಕಿ.ಮೀ. ರಸ್ತೆಯನ್ನು ಮೇಲ್ದರ್ಜೆಗೇರಿಸಲು ೨೦ ಕೋಟಿ ರೂ. ಅನುದಾನ ಒದಗಿಸಲಾಗಿದ್ದರೂ ಕಾಮಗಾರಿ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹೊಸಬೀಡು ಗ್ರಾಮದ ಬಳಿ ಕೆಲಭಾಗ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಮೋರಿಗಳಿಗೆ ಪೈಪ್‌ಗಳನ್ನು ಅಳವಡಿಸಿದ್ದು, ಅಲ್ಲಲ್ಲಿ ವೆಟ್‌ಮಿಕ್ಸ್ ದಾಸ್ತಾನಿರಿಸಲಾಗಿದೆ. ಜನವರಿ ಎಡರನೇ ವಾರದಿಂದಲೇ ಕಾಮಗಾರಿ ಆರಂಭಗೊಂಡಿದ್ದರೆ, ಮಳೆಗಾಲದೊಳಗೆ ಪೂರ್ಣಗೊಳ್ಳುತ್ತಿತ್ತು. ಆದರೆ ಗುತ್ತಿಗೆದಾರರ ನಿರ್ಲಕ್ಷ್ಯ, ಲೋಕೋಪಯೋಗಿ ಇಲಾಖಾ ಅಭಿ ಯಂತರರ ಬೇಜವಾಬ್ದಾರಿಯಿಂದ ತಡವಾಗಿ ಕಾಮಗಾರಿ ಆರಂಭಗೊಂಡಿದೆ. ಇದೀಗ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ. ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಕ್ರಮ ಕೈಗೊಳ್ಲಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
” ರಸ್ತೆಯ ಗುಂಡಿಗಳಿಗೆ ತಾತ್ಕಾಲಿಕವಾಗಿ ಮುಕ್ತಿ ನೀಡುವ ಕಾರ್ಯಲೋಕೋಪಯೋಗಿ ಇಲಾಖೆಯಿಂದ ಆಗಿಲ್ಲ. ಸಂಬಂಧಿಸಿದ ಗುತ್ತಿಗೆದಾರರೂ ಯಾವುದೇ ಕ್ರಮ ಕೈಗೊಂಡಿಲ್ಲ.ರಸ್ತೆಯಲ್ಲಿನ ಗುಂಡಿ ಗಳಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದರೂ ಅಭಿಯಂತರರು ಕುರುಡುತನ ಪ್ರದರ್ಶಿಸುತ್ತಿದ್ದಾರೆ. ತಕ್ಷಣ ರಸ್ತೆಯ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಿಸಲು ಇಂಜಿನಿಯರ್ ಕ್ರಮ ಕೈಗೊಳ್ಳಬೇಕು.”
-ದಿವಾಕರ್, ಕೃಷಿಕ, ಕೂತಿ ಗ್ರಾಮ
” ಪ್ರತಿದಿನ ಈ ರಸ್ತೆಯಲ್ಲಿ ಶಾಲಾ ವಾಹನಗಳು, ಖಾಸಗಿ ಹಾಗೂ ಸರ್ಕಾರಿ ಬಸ್‌ಗಳು, ಖಾಸಗಿ ವಾಹನಗಳು ಸಾವಿರಾರು ಸಂಖ್ಯೆಯಲ್ಲಿ ಸಂಚರಿಸುತ್ತಿರುತ್ತವೆ. ರಸ್ತೆಯಲ್ಲಿನ ಗುಂಡಿಗಳನ್ನು ತಪ್ಪಿಸಲು ಹೋಗಿ ಅವಘಡಗಳೂ ಸಂಭವಿಸಿವೆ. ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು.”
-ಗೌಶಿತ್ ಗೌಡ, ಯಡದಂಟೆ ಗ್ರಾಮ
” ಈ ಹಿಂದೆ ಇದ್ದ ರಸ್ತೆಯನ್ನು ಕೆಲವೆಡೆ ಅಗೆದು ವೆಟ್‌ಮಿಕ್ಸ್ ಹಾಕಿದ್ದು, ಮಳೆಗೆಭಾರೀ ಪ್ರಮಾಣದ ಗುಂಡಿಗಳು ನಿರ್ಮಾಣವಾಗಿವೆ. ಚರಂಡಿಗಳು ಮುಚ್ಚಿರುವುದರಿಂದ ಮಳೆ ನೀರು ರಸ್ತೆಯ ಮೇಲೆಯೇ ನಿಲುಗಡೆಯಾಗುತ್ತಿದೆ. ಈ ಹಿಂದೆ ಇದ್ದ ಸಣ್ಣಪುಟ್ಟ ಗುಂಡಿಗಳು ಇದೀಗ ದೊಡ್ಡ ಹೊಂಡಗಳಾಗಿ ಪರಿವರ್ತನೆಯಾಗಿವೆ. ಕೂಡಲೇ ಪೂರ್ಣ ಪ್ರಮಾಣದಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಸಬೇಕು.”
-ವಿನೋದ್ ಕುಮಾರ್, ಕೂತಿ ಗ್ರಾಮ
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…