Andolana originals

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿ?

ಆರ್.ಟಿ.ವಿಠ್ಠಲಮೂರ್ತಿ

ಸದ್ಯದಲ್ಲೇ ದಿಲ್ಲಿಗೆ ತೆರಳಿ ಆಹ್ವಾನ ನೀಡಲಿರುವ ಸಿಎಂ

 ಸೆ.೨೨ರಂದು ಚಾಮುಂಡಿಬೆಟ್ಟದಲ್ಲಿ ದಸರೆಗೆ ಚಾಲನೆ 

ಬೆಂಗಳೂರು: ಐತಿಹಾಸಿಕ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಈ ಬಾರಿ ಕಾಂಗ್ರೆಸ್ ಪಕ್ಷದ ಸರ್ವೋಚ್ಚ ನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಉನ್ನತ ಮೂಲಗಳು ಈ ವಿಷಯವನ್ನು ತಿಳಿಸಿದ್ದು, ಸೋನಿಯಾ ಗಾಂಧಿ ಅವರಿಂದ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡಿಸಲು ಸಿಎಂ ಸಿದ್ದರಾಮಯ್ಯ ಉತ್ಸುಕರಾಗಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಸೆ.೨೨ ರಂದು ಸೋನಿಯಾ ಗಾಂಧಿ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ನಿಧನದ ನಂತರ ಭಾರತದ ರಾಜಕಾರಣದಲ್ಲಿ ಮಹತ್ವದ ಪಾತ್ರ ವಹಿಸಿರುವ ಸೋನಿಯಾ ಗಾಂಧಿ ಅವರು ೨೦೦೪ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ ಬಹುಮತ ಗಳಿಸಿದಾಗ, ದೇಶದ ಪ್ರಧಾನಿಯಾಗುವ ಅವಕಾಶ ಹೊಂದಿದ್ದರು.

ಈ ಸಂದರ್ಭದಲ್ಲಿ ಯಾರೆಷ್ಟೇ ವಿರೋಧ ಮಾಡಿದ್ದರೂ ಲೆಕ್ಕಿಸದೆ ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ಬಯಸಿದ್ದರೆ ನಿರಾಯಾಸವಾಗಿ ಅವರು ಪ್ರಧಾನ ಮಂತ್ರಿ ಹುದ್ದೆಗೆ ಏರಬಹುದಿತ್ತು.

ಆದರೆ ತಮ್ಮ ವಿದೇಶಿ ಮೂಲದ ಬಗ್ಗೆ ವಿರೋಧ ಪಕ್ಷ ಬಿಜೆಪಿ ತಕರಾರು ಮಾಡಿದ್ದನ್ನು ಗಂಭೀರವಾಗಿ ಪರಿಗಣಿಸಿದ ಸೋನಿಯಾ ಗಾಂಧಿ ಅವರು, ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿದ್ದಲ್ಲದೆ, ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಡಾ.ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಗದ್ದುಗೆಯ ಮೇಲೆ ಕೂರಿಸಿದರು.

ಇದಾದ ನಂತರ ಮನಮೋಹನ್ ಸಿಂಗ್ ಅವರು ಸೋನಿಯಾ ಗಾಂಧಿ ಅವರ ಕೈಗೊಂಬೆ ಎಂದು ದೇಶದ ಪ್ರತಿಪಕ್ಷಗಳು ನಿರಂತರವಾಗಿ ಟೀಕೆ ಮಾಡುತ್ತಾ ಬಂದರೂ ಲೆಕ್ಕಿಸದ ಸೋನಿಯಾ ಗಾಂಧಿ ಅವರು, ೨೦೦೪ರಲ್ಲಿ ಮಾತ್ರವಲ್ಲದೆ ೨೦೦೯ರಲ್ಲೂ ಮರಳಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಗದ್ದುಗೆಯ ಮೇಲೆ ಕೂರಿಸುವಲ್ಲಿ ಯಶಸ್ವಿಯಾಗಿದ್ದರು.

ಹೀಗೆ ತಮ್ಮ ಬದುಕಿನುದ್ದಕ್ಕೂ ಅಽಕಾರದಿಂದ ದೂರವಿದ್ದ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸತತ ಹತ್ತು ವರ್ಷಗಳ ಕಾಲ ದೇಶವನ್ನು ಮುನ್ನಡೆಸುವಂತೆ ನೋಡಿಕೊಂಡಿದ್ದರು. ದಸರೆಯನ್ನು ಉದ್ಘಾಟಿಸಲು ಬರುವಂತೆ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯದಲ್ಲೇ ದಿಲ್ಲಿಗೆ ತೆರಳಲಿದ್ದಾರೆ.

” ಅಧಿಕಾರವನ್ನು ತ್ಯಜಿಸಿ ರಾಜಕಾರಣದಲ್ಲುಳಿದ ಸೋನಿಯಾ ಗಾಂಧಿ ಅವರು ಈ ದೇಶಕ್ಕೆ ನೀಡಿದ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಅವರಿಂದಲೇ ಈ ಬಾರಿಯ ದಸರೆಯನ್ನು ಉದ್ಘಾಟನೆ ಮಾಡಿಸಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯೋಚನೆ ಎಂದು ಮೂಲಗಳು ಹೇಳಿವೆ”

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

7 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

8 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

9 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

11 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

15 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

15 hours ago