Andolana originals

ಶೀಘ್ರದಲ್ಲಿ ಯುವ ಭವನ ಬಳಕೆಗೆ ಲಭ್ಯ!

ಪುನೀತ್ ಮಡಿಕೇರಿ

ನೂತನ ಕಟ್ಟಡಕ್ಕೆ ಮಹಿಳಾ ಕಾಲೇಜು ಸ್ಥಳಾಂತರ; ೧೨ ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿದ್ದ ಯುವ ಒಕ್ಕೂಟ

ಮಡಿಕೇರಿ: ಯುವಜನತೆಯ ಏಳಿಗೆಗೆ ಕಟ್ಟಲಾಗಿರುವ ಜಿಲ್ಲಾ ಯುವ ಭವನ ೧೨ ವರ್ಷಗಳಿಂದ ಬಳಕೆಗೆ ಲಭ್ಯವಾಗದೆ ಪರಿತಪಿಸುತ್ತಿದ್ದ ಜಿಲ್ಲಾ ಯುವ ಒಕ್ಕೂಟಕ್ಕೆ ಕಟ್ಟಡ ಭಾಗ್ಯ ಶೀಘ್ರದಲ್ಲೇ ಸಿಗಲಿದೆ.

೨೦೦೪ರಲ್ಲಿ ಜಿಲ್ಲಾ ಯುವ ಭವನ ಕಟ್ಟಡ ನಿರ್ಮಾಣಕ್ಕಾಗಿ ಆಗಿನ ಜಿಲ್ಲಾಧಿಕಾರಿ ನಗರದ ಕರ್ಣಂಗೇರಿ ಗ್ರಾಮದಲ್ಲಿ ಜಾಗ ಗುರುತು ಮಾಡಿದ್ದರು. ೨೦೦೫ರಲ್ಲಿ ಆಗಿನ ಸಂಸದ ಡಿ. ವಿ. ಸದಾನಂದ ಗೌಡ ೧ ಲಕ್ಷ ರೂ. ಅನುದಾನ ನೀಡಿ ಭೂಮಿ ಪೂಜೆ ನೆರವೇರಿಸಿದ್ದರು. ಆ ನಂತರದಲ್ಲಿ ೨೦೧೩ರಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡು ಹಸ್ತಾಂತರ ಮಾಡುವ ಸಂದರ್ಭದಲ್ಲಿ ಕೊಡಗಿಗೆ ಮಹಿಳಾ ಕಾಲೇಜು ಮಂಜೂರಾದ ಹಿನ್ನೆಲೆಯಲ್ಲಿ ಈ ಕಟ್ಟಡವನ್ನು ತಾತ್ಕಾಲಿಕವಾಗಿ ಕಾಲೇಜಿಗೆ ಬಿಟ್ಟುಕೊಡಲಾಯಿತು. ಈಗ ಇದು ೧೨ ವರ್ಷಗಳನ್ನು ಪೂರೈಸಿದರೂ ಜಿಲ್ಲಾ ಯುವ ಭವನ ಯುವ ಒಕ್ಕೂಟದ ಕೈ ಸೇರದೆ ಮಾಸಿಕ ಸಭೆ, ವಿವಿಧ ಚಟುವಟಿಕೆಗಳನ್ನು ನಡೆಸಲು ಸೂಕ್ತ ಸ್ಥಳವಿಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ನಡೆಸುವಂತಾಗಿತ್ತು. ಆದರೆ, ಮುಂದಿನ ದಿನಗಳಲ್ಲಿ ಮಹಿಳಾ ಕಾಲೇಜು ಕಟ್ಟಡ ಶೀಘ್ರದಲ್ಲೇ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಯುವ ಭವನ ಕಟ್ಟಡ ಲಭ್ಯವಾಗುವ ಲಕ್ಷಣಗಳು ಕಂಡುಬರುತ್ತಿದೆ.

ಹಸ್ತಾಂತರಕ್ಕೆ ಮನವಿ: ಕಟ್ಟಡವನ್ನು ಹಸ್ತಾಂತರಿಸುವಂತೆ ಹಲವು ಬಾರಿ ಜಿಲ್ಲಾಧಿಕಾರಿ, ಶಾಸಕರಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಪ್ರಸ್ತುತ ಮಹಿಳಾ ಕಾಲೇಜಿನ ಕಟ್ಟಡ ಕಾಮಗಾರಿಗಳು ಶೇ. ೮೦ರಷ್ಟು ಪೂರ್ಣಗೊಂಡಿದ್ದು ಶೀಘ್ರದಲ್ಲಿ ಯುವಭವನ ಕಟ್ಟಡವನ್ನು ಹಸ್ತಾಂತರ ಮಾಡಿಕೊಡಬೇಕು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ. ಪಿ. ಸುಕುಮಾರ್ ಮನವಿ ಮಾಡಿದ್ದಾರೆ.

೧೨ ವರ್ಷಗಳಿಂದ ಮಹಿಳಾ ಕಾಲೇಜು: ೨೦೧೪-೧೫ನೇ ಸಾಲಿನಲ್ಲಿ ನಗರದಲ್ಲಿ ಹೊಸದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿತ್ತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಕಾಲೇಜು ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸಿದ್ದರು. ೨೦೧೪-೧೫ನೇ ಸಾಲಿನಲ್ಲಿ ಕಾಲೇಜು ಆರಂಭವಾದರೂ ಜಿಲ್ಲಾ ಯುವ ಒಕ್ಕೂಟಕ್ಕೆ ಸೇರಿದ ಯುವ ಭವನ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಯುವ ಭವನದಲ್ಲಿ ಕಾಲೇಜು ನಡೆಯುತ್ತಿರುವುದರಿಂದ ಯುವ ಒಕ್ಕೂಟದ ಚಟುವಟಿಕೆಗೆ ಸಮಸ್ಯೆ ಉಂಟಾಗಿದೆ. ಯುವ ಒಕ್ಕೂಟವೇ ಬಾಡಿಗೆ ನೀಡಿ ಬೇರೆಡೆ ಸಭೆ, ಸಮಾರಂಭ ನಡೆಸುವ ಇಕ್ಕಟ್ಟಿಗೆ ಸಿಲುಕಿತ್ತು.

ಒಟ್ಟಿನಲ್ಲಿ ಯುವಜನರಿಗಾಗಿ ನಿರ್ಮಾಣ ಮಾಡಲಾದ ಕಟ್ಟಡವನ್ನು ಇನ್ನಾದರೂ ಯುವಜನತೆಗೆ ಮೀಸಲಿಡಬೇಕು ಎಂದು ಯುವಜನತೆ ಒತ್ತಾಯಿಸಿದೆ.

ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಸುಮಾರು ೨ ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡದ ಕಾಮಗಾರಿಗಳು ಮುಗಿಯುವ ಹಂತಕ್ಕೆ ತಲುಪಿದೆ. ಮುಂದಿನ ತಿಂಗಳಲ್ಲಿ ಕಾಲೇಜಿನ ಕಾಮಗಾರಿ ಪೂರ್ಣಗೊಳ್ಳಲಿದೆ. ಆ ನಂತರ ಯುವ ಭವನವನ್ನು ಬಿಟ್ಟುಕೊಡಲಾಗುವುದು. -ಡಿ. ಜೆ. ಜವರಪ್ಪ, ನಿವೃತ್ತ ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು

ಮೊದಲ ಏಕೈಕ ಭವನ
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಯುವ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ, ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯುವ ಭವನ ನಿರ್ಮಾಣವಾಗಿ ಕಾರ್ಯನಿರ್ವ ಹಿಸುತ್ತಿದೆ. ನಮಗೆ ಮಾತ್ರ ಇನ್ನು ಬಳಕೆಗೆ ಮೊದಲ ಭವನವೇ ಸಿಗದಿರುವುದು ವಿರ್ಪಯಾಸ. ಸಂಬಂಧಪಟ್ಟವರು ಶೀಘ್ರವಾಗಿ ಯುವ ಭವನವನ್ನು ಬಿಟ್ಟುಕೊಡಬೇಕು ಎಂದು ಸುಕುಮಾರ್ ಮನವಿ ಮಾಡಿದ್ದಾರೆ.

ಮಹಿಳಾ ಕಾಲೇಜಿಗೆ ಯುವ ಭವನ ಬಿಟ್ಟುಕೊಟ್ಟು ೧೨ ವರ್ಷಗಳು ಕಳೆದಿವೆ. ಅಲ್ಲದೆ ಕಟ್ಟಡವನ್ನು ಹಸ್ತಾಂತರಿಸುವಂತೆ ಆಡಳಿತ ಮಂಡಳಿಯೊಂದಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಇದುವರೆಗೂ ಸೂಕ್ತ ಸ್ಪಂದನೆ ದೊರೆತ್ತಿಲ್ಲ. ಬಾಡಿಗೆ ಪಾವತಿಸಿಕೊಂಡು ಮಾಸಿಕ ಸಭೆ, ವಾರ್ಷಿಕ ಸಭೆಗಳನ್ನು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಯುವ ಭವನ ಕಟ್ಟಡ ಜಿಲ್ಲಾ ಯುವ ಒಕ್ಕೂಟಕ್ಕೆ ಲಭ್ಯವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ. -ಪಿ. ಪಿ. ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

8 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

9 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

11 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

11 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

12 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

12 hours ago