Andolana originals

ವೈಜ್ಞಾನಿಕ ಕಸ ವಿಲೇವಾರಿಗೆ ಜಾಗದ ಸಮಸ್ಯೆ

ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ

ಕೃಷ್ಣ ಸಿದ್ದಾಪುರ
ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ ಸಮಸ್ಯೆ ತಲೆ ದೋರಿದ್ದು, ವಿಲೇವಾರಿಗೆ ಜಾಗವಿಲ್ಲದೆ ವಾಹನದಲ್ಲೆ ತುಂಬಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ಸಮಸ್ಯೆ ಉಂಟಾಗುತ್ತಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ ನಾಲ್ವರು ಸದಸ್ಯರನ್ನು ಅನುಭವಿ ಹೊಂದಿರುವ ಸಿದ್ದಾಪುರದ ಒಂದನೇ ವಾರ್ಡ್‌ನ ಮೈಸೂರು ರಸ್ತೆಯ ಸ್ವರ್ಣಮಾಲ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಪ್ರತಿ ನಿತ್ಯ ಸಂಜೆ ಪಂಚಾಯಿತಿಯ ಕಸ ತುಂಬಿದ ಟ್ರಾಕ್ಟರ್‌ಅನ್ನು ತಂದು ನಿಲ್ಲಿಸಲಾಗುತ್ತದೆ. ಪಟ್ಟಣದಲ್ಲಿ ಸಂಚರಿಸಿ ಸಂಗ್ರಹಿಸಿದ ಕಸವನ್ನು ವಿಲೇವಾರಿ ಮಾಡಲು ಜಾಗವಿಲ್ಲದೆ ಈ ಪ್ರದೇಶದಲ್ಲಿ ತಂದು ನಿಲ್ಲಿಸಲಾಗುತ್ತಿದೆ.

ಈ ರೀತಿ ಕಸದ ವಾಹನ ನಿಲ್ಲಿಸುತ್ತಿರುವುದರಿಂದ ಈ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು ಭಯದಲ್ಲಿ ಸಂಚರಿಸ ಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇತ್ತೀಚೆಗೆ ಗ್ರಾಮ ಪಂಚಾಯಿತಿ ಸದಸ್ಯನ ಮಗನ ಮೇಲೆಯೇ ಬೀದಿ ನಾಯಿ ದಾಳಿ ನಡೆಸಿದ್ದರೂ ಪಂಚಾಯಿತಿ ಯಾವುದೇ ಕ್ರಮ ಕೈಗೊಂಡಿಲ್ಲ ವೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಾಹನದಲ್ಲಿನ ಕೊಳೆತ ಕಸದಿಂದ ಇಡೀ ವಾತಾವರಣವೇ ದುರ್ನಾತ ಬೀರುತ್ತಿದ್ದು, ಜನ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಕ್ಕಪಕ್ಕದ ಮನೆಯವರೂ ಇದರಿಂದ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಇನ್ನು ಕಸ ತುಂಬಿದ ವಾಹನ ನಿಲ್ಲಿಸುವ ಸ್ಥಳದಲ್ಲಿದ್ದ ಸೋಲಾರ್ ಬೀದಿ ದೀಪ ಆಕಾಶ ನೋಡುತ್ತಿದೆ. ಇದರಿಂದ ಸ್ಥಳೀಯರು ಬೀದಿನಾಯಿ ಕಾಟದ ನಡುವೆಯೂ ಕತ್ತಲಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಸ ತುಂಬಿದ ವಾಹನವನ್ನೂ ತೆರವುಗೊಳಿಸುತ್ತಿಲ್ಲ. ಮತ್ತೊಂದೆಡೆ ಬೀದಿ ದೀಪವನ್ನು ಅಳವಡಿಸುತ್ತಿಲ್ಲ. ಕಸ ತುಂಬಿರುವ ವಾಹನ ಸಾರ್ವಜನಿಕರಿಗೆ ತಿಳಿಯಬಾರದೆಂದು ಗ್ರಾಮ ಪಂಚಾಯಿತಿಯೇ ಬೀದಿ ದೀಪವನ್ನು ಆಕಾಶಕ್ಕೆ ಮುಖ ಮಾಡಿದೆ ಎಂದು ಸ್ಥಳೀಯ ನಿವಾಸಿಗಳು ಟೀಕಿಸಿದ್ದಾರೆ. ಕಸ ತುಂಬಿದ ವಾಹನವನ್ನು ಈ ಪ್ರದೇಶದಲ್ಲಿ ನಿಲುಗಡೆಗೊಳಿಸಬಾರದು, ಬೀದಿದೀಪದ ದುರಸ್ತಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಬೀದಿ ನಾಯಿಗಳ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಕಾನೂನನ್ನು ಅರಿತರೆ ಅಷ್ಟೇ, ದೌರ್ಜನ್ಯ ಎದುರಿಸಲು ಸಾಧ್ಯ: ನಾಗಲಕ್ಷ್ಮೀ ಚೌಧರಿ

ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…

38 mins ago

ಮೈಸೂರು:  ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…

56 mins ago

ಡಿ.ಕೆ.ಸಹೋದರರಿಗೆ ಮದುವೆ ಕರೆಯೋಲೆ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರಿಗೆ ನೀಡಿ…

1 hour ago

ಶುಚಿತ್ವ, ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡ ಜಯದೇವ :ಸಿ.ಎಂ ಪ್ರಶಂಸೆ

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…

2 hours ago

ಪ್ರಹ್ಲಾದ್‌ ಜೋಶಿರವರ ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಕೇಂದ್ರ ಸಚಿವ ಸ್ಥಾನಕ್ಕೆ ಶೋಭೆ ತರಲ್ಲ-ಎಚ್‌.ಕೆ.ಪಾಟೀಲ

ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್‌ ಎನ್‌ಕೌಂಟರ್‌ ಹೇಳಿಕೆ…

2 hours ago

ನ್ಯೂ ಇಯರ್‌ ಸೆಲಬ್ರೇಷನ್ | ಬೆಂಗಳೂರು ಪೊಲೀಸರಿಂದ ಹೊಸ ನಿಯಮ

ನ್ಯೂ ಇಯರ್ ಸೆಲಬ್ರೇಷನ್‌ಗೆ ದಿನಗಣನೆ ಬೆಂಗಳೂರು: 2024ನ್ನು ಮುಗಿಸಿ 2025ನ್ನು ಬರಮಾಡಿಕೊಳ್ಳಲು ಸಿಲಿಕಾನ್‌ ಸಿಟಿಯೇ ತುದಿಗಾಲಲ್ಲಿ ಕಾತರದಿಂದ ಕಾಯುತ್ತಿದೆ. ಸದ್ಯ…

2 hours ago