Andolana originals

ಅ.೧೭ಕ್ಕೆ ಶ್ರೀ ಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ

ಹೆಚ್ಚಿನ ಸಂಖ್ಯೆಯ ಭಕ್ತರ ಭೇಟಿ ಸಾಧ್ಯತೆ; ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಮಡಿಕೇರಿ: ಈ ಬಾರಿ ಅ.೧೭ರಂದು ತಲಕಾವೇರಿ ಸನ್ನಿಧಿಯಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.೧೭ ರಂದು ನಡೆಯಲಿದೆ. ಮಧ್ಯಾಹ್ನ ೧ ಗಂಟೆ ೪೪ ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ.

ಈ ವರ್ಷ ಮಧ್ಯಾಹ್ನದ ಸಮಯದಲ್ಲಿ ತೀರ್ಥೋದ್ಭವ ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿಕಾವೇರಿ ಮಾತೆಯ ದರ್ಶನ ಪಡೆಯಲು ಆಗಮಿಸುವ ನಿರೀಕ್ಷೆ ಇರುವುದರಿಂದ, ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ, ಸುತ್ತಲೂ ಬ್ಯಾರಿಕೇಡ್ ಅಳವಡಿಕೆ, ವೇದಿಕೆ ನಿರ್ಮಾಣ, ಮಳೆಯಿಂದ ರಕ್ಷಣೆಗಾಗಿ ಮೆಟಲ್ ಶೀಟ್, ಪೆಂಡಾಲ್‌ಗಳು, ಹೂವಿನ ಅಲಂಕಾರ ಮತ್ತಿತರ ಕೆಲಸ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್ ಇಡಿ ಪರದೆಗಳು, ಫೋಟೋಗ್ರಫಿ ಮತ್ತು ಭಕ್ತಾದಿಗಳ ಭದ್ರತೆಯ ದೃಷ್ಟಿಯಿಂದ ಅವಶ್ಯವಿರುವ ಕಡೆಗಳಲ್ಲಿ ಸಿ.ಸಿ. ಕ್ಯಾಮೆರಾಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ವ್ಯವಸ್ಥೆಗೆ ಸಂಬಂಧಿಸಿದಂತೆ ಈಗಾಗಲೇ ಕೆಟಿಪಿಪಿರಂತೆ ಇ-ಟೆಂಡರ್ ಅನ್ನು ಆಹ್ವಾನಿಸಿ ಸೂಕ್ತ ಗುತ್ತಿಗೆದಾರರನ್ನು ಗುರುತಿಸಿಕೊಂಡು ಕಾರ್ಯಾದೇಶ ನೀಡಲಾಗಿದೆ.

ಇದನ್ನು ಓದಿ : ಆತ ಸಾಯುವಂತೆ ಗುಂಡು ಹೊಡೆಯಬೇಕಿತ್ತು..

ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಅತೀ ಹೆಚ್ಚು ಮಳೆಯಿಂದಾಗಿ ಕೆಲವೆಡೆ ಪಾಚಿಕಟ್ಟಿದ್ದು, ದೇವಾಲಯಗಳಗೋಪುರ, ನೆಲಹಾಸು ಅಲಂಕಾರಿಕ ಕಲ್ಲುಗಳ ಶುಚಿತ್ವಕ್ಕೆ ಕ್ರಮ ಕೈಗೊಳ್ಳಲಾಗಿದೆ. ಸುಣ್ಣಬಣ್ಣ ಬಳಿಯುವ ಕಾರ್ಯವೂ ಪ್ರಗತಿಯಲ್ಲಿದ್ದು, ಕಾವೇರಿ ನೀರಾವರಿ ನಿಗಮದ ವತಿಯಿಂದ ತ್ರಿವೇಣಿ ಸಂಗ್ರಮ ಸ್ನಾನ ಘಟ್ಟದಲ್ಲಿ ಹೂಳೆತ್ತುವುದು ಹಾಗೂ ದೇವಾಲಯದ ಆವರಣಗಳು ಮತ್ತು ಭಾಗಮಂಡಲಕ್ಕೆ ಸಂಪರ್ಕಿಸುವ ರಸ್ತೆಗಳ ಇಕ್ಕೆಲಗಳಲ್ಲಿ ಕಾಡು ಕಡಿದು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಕೆಲಸ ಪ್ರಗತಿಯಲ್ಲಿದೆ. ತಲಕಾವೇರಿ, ಭಾಗಮಂಡಲಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಭಕ್ತರ ಅನುಕೂಲಕ್ಕಾಗಿ ಆಗತ್ಯವಿರುವೆಡೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪಿಂಡ ಪ್ರದಾನ ಕಾರ್ಯಕ್ಕೂ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ.

ಸರ್ಕಾರದಿಂದ ಅನುದಾನ ಮಂಜೂರು:  ಜಾತ್ರಾ ಮಹೋತ್ಸದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಹಾಗೂ ಇತರೆ ನಿರ್ವಹಣೆಗಾಗಿ ಕಾವೇರಿ ನೀರಾವರಿ ನಿಗಮದ ವತಿಯಿಂದ ೨ ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ. ಜೊತೆಗೆ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರದ ವತಿಯಿಂದ ಮುಜರಾಯಿ ಇಲಾಖೆಯ ಮೂಲಕ ೭೫ ಲಕ್ಷ ರೂ. ಅನುದಾನವನ್ನು ಮಂಜೂರು ಮಾಡಿ ಆದೇಶಿಸಿಸಲಾಗಿದೆ.

” ಇತ್ತೀಚೆಗೆ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಸೂಚನೆಯಂತೆ ಎಲ್ಲಾ ಅಗತ್ಯ ಸೌಕರ್ಯಗಳನ್ನು ಒದಗಿಸಲು ನಿರ್ದೇಶನ ನೀಡಲಾಗಿದೆ. ಎಲ್ಲಾ ಭಕ್ತಾದಿಗಳು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ಜಾತ್ರಾ ಮಹೋತ್ಸವನ್ನು ಯಶಸ್ವಿಗೊಳಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು.”

ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ

” ಅ.೧೭ರಂದು ಕಾವೇರಿ ತೀರ್ಥೋದ್ಭವಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಭಾಗಮಂಡಲದಿಂದ ತಲಕಾವೇರಿಗೆ ೨೫ ಉಚಿತ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು. ಕ್ಷೇತ್ರಕ್ಕೆ ಆಗಮಿಸಲು ಮತ್ತು ವಾಪಸು ತೆರಳಲು ಜಿಲ್ಲೆಯ ವಿವಿಧೆಡೆಗಳಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುವುದು. ಹೆಚ್ಚಿನ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.”

ಎ.ಎಸ್. ಪೊನ್ನಣ್ಣ, ವಿರಾಜಪೇಟೆ ಕ್ಷೇತ್ರದ ಶಾಸಕರು

ನವೀನ್ ಡಿಸೋಜ

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

39 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

51 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago