ಶ್ರೀ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಶಿವರಾಜ್ ಕುಮಾರ್
ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಮೊದಲ ದಿನವೇ ಆಯೋಜಿಸಿದ್ದ ಜಂಬೂ ಸವಾರಿ ಮೆರವಣಿಗೆ ಅದ್ದೂರಿಯಾಗಿ ನೆರವೇರಿತು.
ಶ್ರೀ ಚಾಮುಂಡೇಶ್ವರಿ ವಿಗ್ರಹ ಪ್ರತಿಷ್ಠಾಪಿಸಿದ್ದ ಅಂಬಾರಿ ಹೊತ್ತ ಮಹೇಂದ್ರ ಆನೆ ಗಾಂಭೀರ್ಯದ ನಡಿಗೆ ಮೂಲಕ ಜಂಬೂ ಸವಾರಿಯ ಕೇಂದ್ರ ಬಿಂದುವೆನಿಸಿತ್ತು. ಮಹೇಂದ್ರನಿಗೆ ಹಿರಣ್ಯ, ಲಕ್ಷ್ಮಿ ಆನೆಗಳು ಸಾಥ್ ನೀಡಿ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ವೈಭವಕ್ಕೆ ಮೆರುಗು ನೀಡಿದವು.
ಕಿರಂಗೂರಿನ ಬನ್ನಿಮಂಟಪದಲ್ಲಿ ಧಾರ್ಮಿಕ, ಪಾರಂಪರಿಕ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು. ವೇದಬ್ರಹ್ಮ ಡಾ.ಭಾನು ಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಮೊದಲಿಗೆ ಸ್ಥಳ ಶುದ್ಧಿ, ಗಣಪತಿ ಹೋಮ, ಮಹಾಮಂಗಳಾರತಿ ಸೇರಿದಂತೆ ಹಲವು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಬಳಿಕ ವಿಶೇಷವಾಗಿ ನಿರ್ಮಿಸಿದ್ದ ಅಟ್ಟಣಿಗೆ ಮೇಲೆ ನಿಂತು ನಾಡದೇವತೆ ಶ್ರೀ ಚಾಮುಂಡೇಶ್ವರಿದೇವಿ ವಿಗ್ರಹವಿದ್ದ ಅಂಬಾರಿಗೆ ಡಾ.ಶಿವರಾಜ್ ಕುಮಾರ್, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿಸಚಿವ ಎನ್.ಚಲುವರಾಯಸ್ವಾಮಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ, ಎ.ಬಿ.ರಮೇಶ್ ಬಾಬು ಶಾಸಕರಾದ ಬಂಡಿಸಿದ್ದೇಗೌಡ, ಪಿ. ರವಿಕುಮಾರ್ ಗಣಿಗ, ದರ್ಶನ್ ಪುಟ್ಟಣ್ಣಯ್ಯ, ಮಾಜಿ ಶಾಸಕಿ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ, ಧನಲಕ್ಷ್ಮಿ ಚಲುವರಾಯರಾಯಸ್ವಾಮಿ, ಎಸ್.ಸುಮತಿ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್. ನಾಗರಾಜು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕರಾದ ಡಾ. ಮೀರಾ ಶಿವಲಿಂಗಯ್ಯ ಇನ್ನಿತರ ಅಧಿಕಾರಿಗಳು ಪುಷ್ಪಾರ್ಚನೆ ಮಾಡಿದರು.
ನಂತರ ಶ್ರೀ ಚಾಮುಂಡೇಶ್ವರಿ ವಿಗ್ರಹದ ಅಂಬಾರಿ ಹೊತ್ತ ಮಹೇಂದ್ರ ಆನೆ ಗಾಂಭೀ ರ್ಯದ ನಡಿಗೆ ಮೂಲಕ ಜಂಬೂ ಸವಾರಿಯ ಕೇಂದ್ರ ಬಿಂದುವೆನಿಸಿತ್ತು. ಕೇಂದ್ರ ಬಿಂದುವೆನಿಸಿತ್ತು. ಮಹೇಂದ್ರನಿಗೆ ಹಿರಣ್ಯ, ಲಕ್ಷ್ಮಿ ಆನೆಗಳು ಸಾಥ್ ನೀಡಿ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ವೈಭವಕ್ಕೆ ಮೆರುಗು ನೀಡಿದವು.
2022ರಲ್ಲಿ ಪಟಾಕಿ ಸಿಡಿತದ ಶಬ್ದಕ್ಕೆ ಬೆದರಿದ ಅಂಬಾರಿ ಹೊತ್ತಿದ್ದ ಆನೆ ಮಹೇಂದ್ರ ಗಾಬರಿಗೊಂಡು ಅತ್ತಿತ್ತ ಚಲಿಸಿದ ಪರಿಣಾಮ ನೆರೆದಿದ್ದ ಜನತೆ ದಿಕ್ಕಾಪಾಲಾಗಿ ಓಡಲಾರಂಭಿಸಿ, ಕೆಲವರು ಬಿದ್ದು ಗಾಯಗೊಂಡಿದ್ದರು. ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಾರಿ ಮುನ್ನೆಚ್ಚರಿಕೆ ವಹಿಸಿ ಸಿದ್ಧತೆ ನಡೆಸಿದ್ದರಿಂದ ಶ್ರೀರಂಗಪಟ್ಟಣ ದಸರಾ ಜಂಬೂಸವಾರಿ ಸಾಂಗವಾಗಿ ನಡೆಯಿತು.
ಬನ್ನಿಮಂಟಪದಿಂದ ಹೊರಟ ಅಂಬಾರಿ ಮೆರವಣಿಗೆಯು ಕಿರಂಗೂರು, ಬಾಬುರಾಯನ ಕೊಪ್ಪಲು ಮಾರ್ಗವಾಗಿ ಬೆಂಗಳೂರು- ಮೈಸೂರು ಹೆದ್ದಾರಿ ಮೂಲಕ ಶ್ರೀರಂಗನಾಥ ಸ್ವಾಮಿ ದೇವಾಲಯದ ಮೈದಾನದಲ್ಲಿ ನಿರ್ಮಿಸಿ ರುವ ಶ್ರೀರಂಗ ಮುಖ್ಯ ದ್ವಾರವನ್ನು ಪ್ರವೇಶಿಸಿತು.
ಮುಖ್ಯದ್ವಾರವನ್ನು ಪಟ್ಟಣದ ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ಸೇರಿದ್ದ ಅಪಾರ ಜನಸ್ತೋಮವು ಅಂಬಾರಿ ಮೆರವಣಿಗೆ ಹಾಗೂ ಕಲಾ ತಂಡಗಳ ಸೊಬಗನ್ನು ಕಣ್ಣುಂಬಿಕೊಂಡರು. ಶ್ರೀ ರಂಗನಾಥಸ್ವಾಮಿ ದೇವಾಲಯದ ಹತ್ತಿರ ನಿರ್ಮಾಣಗೊಂಡಿರುವ ವೇದಿಕೆ ಬಳಿ ಮೆರವಣಿಗೆಯನ್ನು ಅಂತ್ಯಗೊಳಿಸಲಾಯಿತು. ಪೊಲೀಸ್ ಬ್ಯಾಂಡ್, ಅಶ್ವದಳ, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ಕಂಸಾಳೆ, ಡೊಳ್ಳು ಕುಣಿತ, ಸೋಮನ ಕುಣಿತ, ಒನಕೆ ಕುಣಿತ,
ರಂಗದ ಕುಣಿತ, ಕೋಳಿ ನೃತ್ಯ, ಕಹಳೆ, ನಾಸಿಕ್ ಡೋಲ್, ದೊಡ್ಡ ಆಂಜನೇಯ, ಪಟ್ಟದ ಕುಣಿತ, ಯಕ್ಷಗಾನ ನೃತ್ಯ, ಹುಲಿವೇಷ, ಹಾಲಕ್ಕಿ ಸುಗ್ಗಿ ಕುಣಿತ, ಕೇರಳ ಚಂಡೆ, ಜಗ್ಗಲಿಗೆ, ಮಹಿಳಾ ಕೋಲಾಟ, ಮಹಿಳಾ ಡೊಳ್ಳು ಕುಣಿತ ಕಲಾ ತಂಡಗಳು ಭಾಗವಹಿಸಿ ವಿಶೇಷ ಮೆರುಗು ನೀಡಿದವು.
ಸ್ತಬ್ದ ಚಿತ್ರಗಳ ಮೆರವಣಿಗೆ ರೇಷ್ಮೆ ಇಲಾಖೆಯಿಂದ ರೇಷ್ಮೆ ಹುಳು ಸಾಕಾಣಿಕೆ ಹಾಗೂ ಅದರ ಉತ್ಪನ್ನಗಳು, ವಿದ್ಯಾ ಭಾರತಿ ಶಾಲೆಯಿಂದ ನವ ದುರ್ಗಿಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ, ಶಾಲಾ ಶಿಕ್ಷಣ ಇಲಾಖೆಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ಶಿಕ್ಷಣ ಇಲಾಖೆ ಸೌಲಭ್ಯದ ಬಗ್ಗೆ ಸ್ತಬ್ದ ಚಿತ್ರ ಸೇರಿದಂತೆ ಕೃಷಿ, ತೋಟಗಾರಿಕೆ, ಖಾದಿ ಮತ್ತು ಗ್ರಾಮೋದ್ಯೋಗ, ಆರೋಗ್ಯ, ಅಗ್ನಿ ಶಾಮಕ ಇಲಾಖೆ ಹಾಗೂ ಭಗವಾನ್ ಬುದ್ಧ ಕುರಿತ ಸ್ತಬ್ಧ ಚಿತ್ರಗಳು ಪಾಲ್ಗೊಂಡು ಮೆರವಣಿಗೆಗೆ ವಿಶೇಷ ಮೆರುಗು ನೀಡಿದವು.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…