ಪುನೀತ್ ಮಡಿಕೇರಿ
ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪರಿಶ್ರಮ
ಮಡಿಕೇರಿ: ಮಾ.೨೧ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿಯ ಫಲಿತಾಂಶದಲ್ಲಿ ರಾಜ್ಯದಲ್ಲಿ ೧ನೇ ಸ್ಥಾನ ಪಡೆಯಲು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪರಿಶ್ರಮವಹಿಸುತ್ತಿದೆ.
ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೆ ೪ನೇ ಸ್ಥಾನ ಪಡೆದುಕೊಂಡಿತ್ತು. ಈಗ ಫಲಿತಾಂಶವನ್ನು ಮತ್ತಷ್ಟು ಸುಧಾರಿಸಿ ಮೊದಲ ಸ್ಥಾನ ಪಡೆಯುವ ಗುರಿಯೊಂದಿಗೆ ಕೊಡಗು ಜಿಲ್ಲಾಡಳಿತವು ಶೈಕ್ಷಣಿಕ ವರ್ಷದ ಆರಂಭದಿಂದಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. ಎಸ್‌ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಈ ಬಾರಿ ಕೊಡಗು ಜಿಲ್ಲೆ ರಾಜ್ಯದಲ್ಲಿ ನಂ.೧ ಸ್ಥಾನ ಗಳಿಸುವುದು ಹೇಗೆ ಎಂಬ ಉದ್ದೇಶಿತ ಗುರಿಯೊಂದಿಗೆ ಶ್ರಮ ವಹಿಸಲಾಗುತ್ತಿದೆ.
ಈ ಬಾರಿ ಜಿಲ್ಲೆಯಲ್ಲಿ ಒಟ್ಟು ೬೯೯೭ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಎಸ್ಸೆಸ್ಸೆಲ್ಸಿ ಶಿಕ್ಷಣ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಮೊದಲ ಪ್ರಮುಖ ಘಟ್ಟವಾಗಿದ್ದು, ಇಲ್ಲಿನ ಸಾಧನೆ,ಗಳಿಸಿದ ಅಂಕಗಳು,ಪಡೆದ ಜ್ಞಾನ ಜೀವನದ ಎಲ್ಲ ಹಂತಗಳಲ್ಲೂ ಪ್ರಭಾವ ಬೀರುತ್ತದೆ. ಕೊಡಗು ಜಿಲ್ಲೆ ೨೦೨೨-೨೩ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ೯ನೇ ಸ್ಥಾನವನ್ನು ಗಳಿಸಿತ್ತು. ೨೦೨೩-೨೪ನೇ ಸಾಲಿನಲ್ಲಿ ರಾಜ್ಯಕ್ಕೆ ೪ನೇ ಸ್ಥಾನ ಪಡೆದುಕೊಂಡು ಐದು ಸ್ಥಾನಗಳು ಮೇಲೇರಿತು. ಪ್ರಸಕ್ತ ಸಾಲಿನಲ್ಲಿ(೨೦೨೪-೨೫)ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯಬೇಕೆಂಬ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಕುರಿತು ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರೇಪಣೆ ಮೂಡಿಸಲು ಕ್ರಮಗಳನ್ನು ಕೈಗೊಂಡಿದೆ.
ಹೀಗಿತ್ತು ಪರೀಕ್ಷೆಗೆ ಪೂರ್ವತಯಾರಿ: ಪುನರಾವರ್ತನೆ, ವಿಶೇಷ ತರಗತಿ, ಗುಂಪು ಅಧ್ಯಯನ, ತೆರೆದ ಪುಸ್ತಕ ಪರೀಕ್ಷೆಯನ್ನು ನಡೆಸಲಾಗಿದೆ. ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ನಡೆಸಲಾಗಿದೆ. ಸರಳವಾಗಿ ವಿಷಯದ ಪುನರಾವರ್ತನೆ ಮಾಡುವ ಮೂಲಕ ಮಕ್ಕಳಲ್ಲಿ ಕಲಿಕೆಯ ಅಭಿರುಚಿಯನ್ನು ಹೆಚ್ಚಿಸಲಾಗಿದೆ. ಆಪ್ತ ಸಮಾಲೋಚನೆ ಮೂಲಕವೂ ಪರೀಕ್ಷೆಯ ಬಗೆಗಿನ ಆತಂಕ, ಭಯ ಹೋಗಲಾಡಿಸುವ ಕೆಲಸ ಮಾಡಲಾಗಿದೆ. ೩-೪ ಶಾಲೆಗಳನ್ನು ಒಟ್ಟು ಸೇರಿಸಿ ಪ್ರತಿಭಾವಂತ ಶಿಕ್ಷಕರ ಮೂಲಕ ತರಬೇತಿ ಕೊಡಿಸಲಾಗಿದೆ.
ಪರೀಕ್ಷೆಗೆ ಹಾಜರಾಗಲಿರುವ ೬,೯೯೭ ವಿದ್ಯಾರ್ಥಿಗಳು: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.೨೧ ರಿಂದ ಏ.೪ ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು ೧೭೧ ಶಾಲೆಗಳಿವೆ. ಕೊಡಗು ಜಿಯಲ್ಲಿ ಈ ಬಾರಿ ೬,೯೯೭ ವಿದ್ಯಾರ್ಥಿಗಳು ಎಸ್‌ಎಸ್‌ಎಲಸಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ೬,೬೨೨ ಹೊಸ ವಿದ್ಯಾರ್ಥಿಗಳು, ೩೭೫ ಪುನರಾವರ್ತಿತ ಮತ್ತು ಖಾಸಗಿ ವಿದ್ಯಾರ್ಥಿಗಳು ಎಸ್‌ಎಸ್‌ಎಲಸಿ ಪರೀಕ್ಷೆ ಬರೆಯಲಿzರೆ. ಕೊಡಗು ಜಿಯಲ್ಲಿ ಒಟ್ಟು ೨೭ ಪರೀಕ್ಷಾ ಕೇಂದ್ರಗಳಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ೮, ಸೋಮವಾರಪೇಟೆ ತಾಲ್ಲೂಕಿನಲ್ಲಿ ೧೧ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ೮ ಪರೀಕ್ಷಾ ಕೇಂದ್ರಗಳಿವೆ.
” ಮಾ.೨೧ ರಿಂದ ಏ.೪ ರವರೆಗೆ ಜಿಲ್ಲೆಯ ೨೭ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯ ೧೭೧ ಪ್ರೌಢ ಶಾಲೆಗಳಿಂದ ೬,೯೯೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಬಂದೋಬಸ್ತ್ ಕಲ್ಪಿಸಲಾಗುವುದು. ಜತೆಗೆ ಸಿಸಿಟಿವಿ ಅಳವಡಿಸಲಾಗುತ್ತಿದೆ. ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ೨೦೨೪-೨೫ನೇ ಸಾಲಿ ನಲ್ಲಿ ೧ನೇ ಸ್ಥಾನ ಪಡೆಯಲು ಪ್ರಯತ್ನಿಸಲಾಗುತ್ತಿದೆ.”
– ಸಿ.ರಂಗಧಾಮಪ್ಪ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ
೮ ಜಾಗೃತ ದಳ ರಚನೆ:
ಪರೀಕ್ಷಾ ಕೇಂದ್ರಗಳಿಗೆ ಪೀಠೋಪಕರಣ, ಶೌಚಾಲಯ, ಕುಡಿಯುವ ನೀರು, ಸಿಸಿಟಿವಿ, ವೆಬಕಾಸ್ಟಿಂಗ್ ಮತ್ತು ಇಂಟರ್ ನೆಟ್ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಎಸ್‌ಎಸ್‌ಎಲಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಜಿಯಲ್ಲಿ ಒಟ್ಟು ೮ ಜಾಗೃತ ದಳಗಳನ್ನು ರಚಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಜಿ ಖಜಾನೆಯಿಂದ ಸುಗಮವಾಗಿ ಮತ್ತು ಸುರಕ್ಷಿತವಾಗಿ ಸಾಗಿಸಲು ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ ಮತ್ತು ಪ್ರತೀ ಮಾರ್ಗಕ್ಕೆ ಒಬ್ಬರಂತೆ ೭ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದ್ದು, ಮಾರ್ಗಾಧಿಕಾರಿಗಳ ವಾಹನ ಭದ್ರತೆಗೆ ಒಬ್ಬರು ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅಧೀಕ್ಷಕರು ಮತ್ತು ಉಪ ಮುಖ್ಯ ಅಧೀಕ್ಷಕರು ಹಾಗೂ ಸ್ಥಾನಿಕ ಜಾಗೃತದಳದ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…