Mysore
27
broken clouds

Social Media

ಗುರುವಾರ, 07 ಮೇ 2026
Light
Dark

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ

ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ

ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ ಗುರುತಿಸಿಕೊಂಡಿರುವ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ (ಯಿಫಾ), ಇದೀಗ ಕ್ರೀಡಾ ಕ್ಷೇತ್ರದಲ್ಲಿ ಹೊಸ ಚರಿತ್ರೆ ಬರೆಯಲು ಮುಂದಾಗಿದೆ. ಇದೇ ಮೊದಲ ಬಾರಿಗೆ ಸೋಮವಾರಪೇಟೆ ಪಟ್ಟಣದ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯನ್ನು ಆಯೋಜಿಸಿದೆ.

ಮೇ ೭ರಿಂದ ೧೦ರವರೆಗೆ ನಡೆಯಲಿರುವ ಈ ಕ್ರೀಡಾಕೂಟ, ಕೊಡಗಿನಲ್ಲಿ ಸುಮಾರು ೨೫ ವರ್ಷಗಳ ಬಳಿಕ ನಡೆಯುತ್ತಿರುವ ದೊಡ್ಡ ಮಟ್ಟದ ಹಾಕಿ ಟೂರ್ನಿಯಾಗಿದೆ. ಜಿಲ್ಲೆಯ ಯುವ ಕ್ರೀಡಾಪಟುಗಳಲ್ಲಿ ಹೊಸ ಚೈತನ್ಯ ಮೂಡಿಸುವ ನಿರೀಕ್ಷೆ ವ್ಯಕ್ತವಾಗಿದೆ.

ರಾಜ್ಯದ ವಿವಿಧ ಭಾಗಗಳಿಂದ ಪ್ರಬಲ ತಂಡಗಳು ಕಣಕ್ಕಿಳಿಯಲಿದ್ದು, ಪ್ರತಿಯೊಂದು ಪಂದ್ಯವೂ ರೋಚಕ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಪಂದ್ಯಾವಳಿಯ ಸಿದ್ಧತೆಗಳು ಈಗಾಗಲೇ ಅಂತಿಮ ಹಂತ ತಲುಪಿದ್ದು, ಆಟಗಾರರ ವಸತಿ, ಆಹಾರ, ವೈದ್ಯಕೀಯ ಹಾಗೂ ಭದ್ರತಾ ವ್ಯವಸ್ಥೆಗಳನ್ನೂ ಸಮರ್ಪಕವಾಗಿ ರೂಪಿಸ ಲಾಗಿದೆ. ಪ್ರೇಕ್ಷಕರಿಗಾಗಿ ವಿಶೇಷ ಆಸನ ವ್ಯವಸ್ಥೆ ಹಾಗೂ ಮೂಲಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕ್ರೀಡಾ ಹಬ್ಬದ ವಾತಾವರಣ ನಿರ್ಮಾಣಕ್ಕೆ ಸಂಘಟನೆ ಮುಂದಾಗಿದೆ.

ಯಿಫಾ ಸಮಾಜಮುಖಿ ಕೆಲಸ: 

೨೦೧೮ರಲ್ಲಿ ಆರಂಭವಾದ ಯಿಫಾ ಸಂಘಟನೆ ಹಲವು ಸಮಾಜಮುಖಿ ಕಾರ್ಯಗಳ ಮೂಲಕ ಗಮನ ಸೆಳೆದಿದೆ. ಸ್ಥಾಪನೆಯಾದ ಮೊದಲ ವರ್ಷದಲ್ಲೇ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರ ರಕ್ಷಣೆಗೆ ಧಾವಿಸಿತು. ೨೦೧೯ರಲ್ಲಿ ಉತ್ತರ ಕರ್ನಾಟಕದ ಪ್ರವಾಹ ಸಂದರ್ಭದಲ್ಲಿಯೂ ಸಂತ್ರಸ್ತರಿಗೆ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ೨೦೨೦-೨೧ರ ಕೋವಿಡ್ ಅವಽಯಲ್ಲಿ ೨೦೦೦ಕ್ಕೂ ಹೆಚ್ಚು ಆಹಾರ ಕಿಟ್‌ಗಳನ್ನು ವಿತರಿಸುವುದರ ಜೊತೆಗೆ, ಕೋವಿಡ್‌ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದಲ್ಲೂ ಭಾಗವಹಿಸಿ ಮಾನವೀಯ ಸೇವೆ ಸಲ್ಲಿಸಿದೆ. ಪ್ರಣವ್ ಫೌಂಡೇಶನ್‌ನೊಂದಿಗೆ ಕೈಜೋಡಿಸಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಗಿದೆ. ಬಸ್ ನಿಲ್ದಾಣಗಳ ಸ್ವಚ್ಛತೆ ಕಾರ್ಯಗಳನ್ನು ನಡೆಸುತ್ತಾ, ಯಿಫಾ ಸಂಘಟನೆ ಸಮಾಜಮುಖಿ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ.

” ಸಂಘಟನೆಯು ಕೃಷಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಕ್ರೀಡೆಯ ಮೂಲಕ ಯುವಜನರಲ್ಲಿ ಶಿಸ್ತು, ಆರೋಗ್ಯ ಬೆಳೆಸುವ ಗುರಿಯನ್ನೂ ಹೊಂದಿದೆ. ಕೊಡಗಿನಲ್ಲಿ ೨೫ ವರ್ಷಗಳ ನಂತರ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ರಾಜ್ಯಮಟ್ಟದ ಪ್ರತಿಷ್ಠಿತ ತಂಡಗಳು ಪಾಲ್ಗೊಳ್ಳಲಿವೆ.”

-ಶ್ರೀನಿಧಿ ಲಿಂಗಪ್ಪ, ಅಧ್ಯಕ್ಷರು, ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್

ರಾಜ್ಯಮಟ್ಟದ ಪ್ರತಿಷ್ಠಿತ ತಂಡಗಳು ಭಾಗಿ: 

ಕೆನರಾ ಬ್ಯಾಂಕ್, ಕರ್ನಾಟಕ ಸ್ಟೇಟ್ ಪೊಲೀಸ್, ಎಜಿಒಆರ್‌ಸಿ, ಸೌತ್ ವೆಸ್ಟರ್ನ್ ರೈಲ್ವೇಸ್, ಕಸ್ಟಮ್ಸ್, ಡಿವೈಇಎಸ್, ಸದರ್ನ್ ಕಮಾಂಡ್ ಹಾಗೂ ಆತಿಥೇಯ ಯಿಫಾ ತಂಡಗಳು ಭಾಗವಹಿಸುತ್ತಿವೆ.

” ಪಂದ್ಯಾಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ ರೂ. ೨ ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ  ಸ್ಥಾನ ಪಡೆಯುವ ತಂಡಕ್ಕೆ ರೂ.೧ ಲಕ್ಷ ನಗದು ಹಾಗೂ ಟ್ರೋಫಿ, ತೃತೀಯ ಸ್ಥಾನ ಪಡೆಯುವ ತಂಡಕ್ಕೆ ರೂ. ೫೦ ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಇದರೊಂದಿಗೆ ವೈಯಕ್ತಿಕ ವಿಭಾಗದಲ್ಲಿಯೂ ಪ್ರಶಸ್ತಿಗಳನ್ನು ವಿತರಿಸಲಾಗುವುದು.”

-ಹರ್ಷಿತ್ ಶಿವಪ್ಪ, ಉಪಾಧ್ಯಕ್ಷರು, ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್

 

 

Tags:
error: Content is protected !!