40 ಕೋಟಿ ರೂ. ವೆಚ್ಚದಲ್ಲಿ ಯೋಜನೆ; ಪುರಸಭಾ ವ್ಯಾಪ್ತಿಯ ವಾರ್ಡ್‌ಗಳಿಗೆ ನೀರು ಪೂರೈಕೆಗೆ ಕ್ರಮ
-ಕೆ.ಬಿ. ಶಂಷುದ್ದೀನ್
ಕುಶಾಲನಗರ: ಪುರಸಭೆ ವ್ಯಾಪ್ತಿಯ ಕುಡಿಯುವ ನೀರಿನ ಕೊರತೆ ನೀಗಿಸುವ ನಿಟ್ಟಿನಲ್ಲಿ ಅಮೃತ್ 2.0 ಯೋಜನೆಯಡಿ 40 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ ಕುಶಾಲನಗರ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.
ಕುಶಾಲನಗರ ಪುರಸಭೆಯ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಹಂತಹಂತವಾಗಿ ಕುಡಿಯುವ ನೀರನ್ನು ಸರಬರಾಜು ವ್ಯವಸ್ಥೆ ಮಾಡಲು ಬೃಹತ್ ಪೈಪ್‌ಲೈನ್ ಕಾಮಗಾರಿ ಆರಂಭವಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕಡಾ. ಮಂಥರ್ ಗೌಡ ಅವರ ಹೊಸ ಚಿಂತನೆಯೊಂದಿಗೆ ಕೂಡಿಗೆಯಲ್ಲಿ ಕಾವೇರಿ-ಹಾರಂಗಿ ನದಿ ಸಂಗಮವಾಗುವ ಸ್ಥಳದಿಂದ ನೂತನ, ತಂತ್ರಜ್ಞಾನದ ಯಂತ್ರಗಳ ಬಳಕೆ ಮೂಲಕ ನೀರನ್ನು ತೆಗೆದು ಕುಶಾಲನಗರ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆ ಇದಾಗಿದೆ.
ಕುಶಾಲನಗರ ಪಟ್ಟಣ ವ್ಯಾಪ್ತಿಯ ಕರ್ನಾಟಕ ನೀರು ಸರಬರಾಜು, ಒಳಚರಂಡಿ ಮಂಡಳಿಯ ವತಿಯಿಂದ ಅನೇಕ ವರ್ಷಗಳಿಂದಲೂ ನಗರಕ್ಕೆ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುತ್ತಿದೆ. ಆದರೆ ಬೇಸಿಗೆ ಸಂದರ್ಭ ಕಾವೇರಿ ನದಿಯ ನೀರು ಕಡಿಮೆಯಾಗಿ ಕುಡಿಯುವ ನೀರಿನ ಸಮಸ್ಯೆ ಆಗುತ್ತಿರುವುದನ್ನು ತಪ್ಪಿಸಲು ಈ ಯೋಜನೆ ರೂಪಿಸಲಾಗಿದೆ.
ಹಾರಂಗಿಯಿಂದ ಕುಶಾಲನಗರಕ್ಕೆ ಕುಡಿಯುವ ನೀರಿನ ಸರಬರಾಜು ಬಗ್ಗೆ ಅನೇಕ ಸಲಹೆಗಳು ಬಂದರೂ ಕುಶಾಲನಗರ ಪುರಸಭೆ ವ್ಯಾಪ್ತಿಗೆ ಹತ್ತಿರ ಮತ್ತು ವರ್ಷಪೂರ್ತಿ ನದಿಯಲ್ಲಿ ನೀರು ಇರುವ ಸ್ಥಳವಾಗಿರುವ ಕೂಡಿಗೆಯ ಸಂಗಮದಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಚಿಂತನೆ ನಡೆಸಲಾಗಿದೆ.
ಈಗಾಗಲೇ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಲಕ ಸಂಬಂಧಿಸಿದ ಜಾಗದ ಪರಿಶೀಲನೆ, ಮತ್ತು ಅದಕ್ಕೆ ಸಂಬಂಧಿಸಿದ ಕ್ರಿಯಾ ಯೋಜನೆಯ ಅಂದಾಜು ಪಟ್ಟಿಯು 40 ಕೋಟಿ ರೂ. ವೆಚ್ಚದಲ್ಲಿ ಸಿದ್ಧವಾಗಿದೆ. ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಸಂಗಮದಿಂದ ಹಾಸನ-ಕೂಡಿಗೆ ಹೆದ್ದಾರಿ ಅಂಚಿನಲ್ಲಿ ಬೃಹತ್ ಗಾತ್ರದ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಆರಂಭಗೊಂಡಿದೆ.
ಕುಶಾಲನಗರದ ಜಲಗಾರದ ಶುದ್ಧೀಕರಣ ಕೇಂದ್ರದ ಆವರಣದಲ್ಲಿ ಈಗಾಗಲೇ 10 ಲಕ್ಷ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣ ಕಾರ್ಯವು ಪೂರ್ಣಗೊಂಡಿದ್ದು, ಮುಂದಿನ ಹಂತದ ಕಾಮಗಾರಿಯು ಭರದಿಂದ ಸಾಗುತ್ತಿದೆ.
ಅಮೃತ್ 2.0 ಯೋಜನೆಯ ಅಡಿಯಲ್ಲಿ ಶಾಶ್ವತ ಕುಡಿಯುವ ನೀರನ್ನು ಕಲ್ಪಿಸುವ ಯೋಜನೆ ರೂಪಿಸಲಾಗಿದೆ. ಕಾವೇರಿ-ಹಾರಂಗಿ ನದಿ ಸಂಗಮದಿಂದ ಕೂಡಿಗೆ, ಕೂಡುಮಂಗಳೂರು, ಕೂಡ್ಲೂರು, ಗುಮ್ಮನಕೊಲ್ಲಿ, ಮುಳ್ಳುಸೋಗೆ ಮಾರ್ಗದ ಮೂಲಕ ಪೈಪ್ ಜೋಡಣೆ ಮಾಡಲಾಗುತ್ತದೆ. ಗುಮ್ಮನಕೊಲ್ಲಿ ಗ್ರಾಮದ ಮೂಲಕ ಕುಶಾಲನಗರದ ಹೃದಯ ಭಾಗದಲ್ಲಿರುವ ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಬೃಹತ್ ಟ್ಯಾಂಕ್‌ಗೆ ನೀರನ್ನು ಸರಬರಾಜು ಮಾಡಲಾಗುತ್ತದೆ. ಟ್ಯಾಂಕ್‌ನಿಂದ ಪೈಪ್‌ಗಳ ಜೋಡಣೆ ಮೂಲಕ ಪುರಸಭೆಯ ಎಲ್ಲಾ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರನ್ನು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.
ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿತ್ತು. ಇದೀಗ 40 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿದೆ. ಎರಡು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಕಾಮಗಾರಿ ಪೂರ್ಣಗೊಂಡ ನಂತರ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ.
-ಜಯಲಕ್ಷ್ಮಿಚಂದ್ರು, ಅಧ್ಯಕ್ಷರು, ಕುಶಾಲನಗರ ಪುರಸಭೆ.
ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ಕಾಮಗಾರಿ
ನಡೆಸಲಾಗುತ್ತಿದೆ. ಈಗಾಗಲೇ ಶೇ.40ರಷ್ಟು ಕಾಮಗಾರಿ ಮುಗಿದಿದೆ. 2026ರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು.
-ಅಭಿಷೇಕ್, ಸಹಾಯಕ ಅಭಿಯಂತರರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…