ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ಚರಂಡಿಗಳು ಕಸ ಕಡ್ಡಿಗಳಿಂದ ತುಂಬಿ ದುರ್ನಾತ ಬೀರುತ್ತಿವೆ. ನಾಲ್ಕು ತಿಂಗಳಿಂದ ದೊಡ್ಡ ಕವಲಂದೆ ಗ್ರಾಪಂ ವ್ಯಾಪ್ತಿಯಲ್ಲಿ ಕಸ ವಿಲೇವಾರಿಯಾಗಿಲ್ಲ ಮತ್ತು ಚರಂಡಿಯನ್ನು ಸ್ಚಚ್ಛತೆ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಾದ ದೊಡ್ಡಕವಲಂದೆ, ಗಟ್ಟವಾಡಿ, ಗಟ್ಟವಾಡಿಪುರ, ಹರಗನಪುರ, ಹೆಳವರ ಹುಂಡಿ, ಕೃಷ್ಣಾರಾಜಪುರ ಗ್ರಾಮಗಳಲ್ಲಿ ಕೂಡ ಚರಂಡಿಗಳನ್ನು ಸ್ವಚ್ಛಗೊಳಿಸದೆ ಇರುವುದರಿಂದ ಚರಂಡಿಗಳೆಲ್ಲವೂ ತುಂಬಿ ಹೋಗಿವೆ. ಕೊಳಚೆ ಚರಂಡಿ ನೀರಿನ ದುರ್ವಾಸನೆಯಿಂದ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ಗ್ರಾಮಸ್ಥರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿಯಾದರೆ ಸೊಳ್ಳೆಗಳ ಕಾಟ ಹೆಚ್ಚಾಗಿದೆ.
ನಮಗೆ ಕಸ ವಿಲೇವಾರಿ ಘಟಕ ಮಾಡಲು ಸರ್ಕಾರಿ ಜಾಗವನ್ನು ನೀಡದಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ಕೂಡಲೇ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಲು ಜಾಗ ನೀಡಬೇಕು. ಒತ್ತುವರಿಯಾಗಿರುವ ಜಮೀನನ್ನು ತೆರವು ಕಾರ್ಯಾಚರಣೆ ಮಾಡಬೇಕು. ಇಲ್ಲವಾದಲ್ಲಿ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಕಸ ಸುರಿದು ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:-ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ
ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಚರಂಡಿಗಳನ್ನು ಸ್ವಚ್ಛತೆ ಮಾಡಿದ್ದೇವೆ. ಆದರೆ ಕವಲಂದೆ ಗ್ರಾಮ ದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕೆ ಜಾಗದ ಸಮಸ್ಯೆ ಇರುವುದರಿಂದ ಸ್ವಚ್ಛತೆ
ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಚರಂಡಿ ಗಳನ್ನು ಸ್ವಚ್ಛ ಮಾಡಲಾಗುವುದು. – ನಿರ್ಮಲಾ, ಪಿಡಿಒ, ದೊಡ್ಡ ಕವಲಂದೆ ಗ್ರಾಪಂ
ಸ್ವಚ್ಛತೆ ಮಾಡಲು ನಾವು ಸಿದ್ಧರಿದ್ದೇವೆ. ಆದರೆ, ನಮಗೆ ಕಸ ವಿಲೇವಾರಿ ಮಾಡಲು ಜಾಗದ ಸಮಸ್ಯೆ ಇದ್ದು, ಕವಲಂದೆ ಗ್ರಾಮದ ಸರ್ವೆ ನಂ. ೨೩೭ರಲ್ಲಿ ೪. ೩೧ ಗುಂಟೆ ಸರ್ಕಾರಿ ಜಮೀನು ಇದೆ. ಈ ಜಮೀನನ್ನು ಅಕ್ಕ ಪಕ್ಕದ ಜಮೀನಿನವರು ಒತ್ತುವರಿ ಮಾಡಿಕೊಂಡಿದ್ದಾರೆ. ಆದ ರಿಂದ ಒತ್ತುವರಿ ಯಾಗಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಿ, ಕಸ ವಿಲೇವಾರಿ ಘಟಕ ಮಾಡಲು ಅನುಕೂಲ ಮಾಡಿಕೊಡ ಬೇಕು. ಒಂದು ವಾರದಲ್ಲಿ ಸಮಸ್ಯೆಯನ್ನು ಬಗೆಹರಿಸದಿದ್ದರೆ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಕಸ ಸುರಿದು ಪ್ರತಿಭಟನೆ ನಡೆಸಬೇಕಾಗುತ್ತದೆ. – ಪರ್ಹೀನ ಬೇಗಂ, ದೊಡ ಕವಲಂದೆ ಗ್ರಾ. ಪಂ ಅಧ್ಯಕ್ಷರು.



