ಓದುಗರ ಪತ್ರ
ಇತ್ತೀಚೆಗೆ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕಂದಾಯ ಇಲಾಖೆಯಲ್ಲಿ ಲಂಚವಿಲ್ಲದೆ ಯಾವುದೇ ಕಡತಗಳೂ ವಿಲೇವಾರಿಯಾಗುವುದಿಲ್ಲ ಎನ್ನುವಂತಾಗಿದೆ. ಜಾತಿ ಮತ್ತು ಆದಾಯ ಪ್ರಮಾಣಪತ್ರ ಮಾಡಿಸಬೇಕಾದರೂ, ಪೌತಿ ಖಾತೆ, ಖಾತೆ ಬದಲಾವಣೆ, ಭೂಮಿ ಸರ್ವೆ, ಪಹಣಿ ತಿದ್ದುಪಡಿಯಂತಹ ಭೂ ದಾಖಲೆಯ ಸೇವೆಗಳು, ಸಾಮಾಜಿಕ ಭದ್ರತಾ ಯೋಜನೆ ಸೇರಿದಂತೆ ಇನ್ನಿತರ ಯಾವುದೇ ಸಾರ್ವಜನಿಕ ಸೇವೆಗಳನ್ನು ಸಕಾಲದಲ್ಲಿ ಪಡೆಯಬೇಕಾದರೂ ಲಂಚ ಕೊಡಲೇ ಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.
ರಾಜ್ಯ ಕಂದಾಯ ಸಚಿವರು ಲಂಚ ಪಡೆಯುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿ ಇಲಾಖೆಯಲ್ಲಿನ ಭ್ರಷ್ಟಾ ಚಾರಕ್ಕೆ ಕಡಿವಾಣ ಹಾಕಬೇಕು. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಪಡೆಯದೇ ಬಡ ಮತ್ತು ಮಧ್ಯಮ ವರ್ಗದ ಜನರ ಕೆಲಸಗಳನ್ನು ವಿಳಂಬ ನೀತಿ ಅನುಸರಿಸದೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕಿದೆ.
– ಎಂ. ಪಿ . ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…