ಮೈಸೂರು: ನಗರದ ರಿಂಗ್ ರಸ್ತೆಯಲ್ಲಿ ರುವ ವಿದ್ಯುತ್ ಕಂಬಗಳ ಅಸಮರ್ಪಕ ನಿರ್ವಹಣೆಯಿಂದಾಗಿ ವಿದ್ಯುತ್‌ದೀಪಗಳು ಹಾಳಾಗಿದ್ದು, ಈ ಮಾರ್ಗದಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.
ಕಿತ್ತು ಬಂದಿರುವ ಸ್ವಿಚ್‌ಗಳು: ನಗರದ ಹೆಬ್ಬಾಳದ ಮೊದಲ ಹಂತದ ಪೆಟ್ರೋಲ್ ಬಂಕ್ ಬಳಿಯಿಂದ ರಾಯಲ್ ಇನ್‌ವರೆಗಿನ ರಸ್ತೆಯಲ್ಲಿರುವ ಬಹುತೇಕ ವಿದ್ಯುತ್ ಕಂಬಗಳ ದೀಪಗಳ ಸ್ವಿಚ್‌ಗಳು ಹಾಳಾಗಿವೆ. ವಿದ್ಯುತ್ ಕಂಬಗಳಲ್ಲಿ ಅಳವಡಿಸಲಾಗಿರುವ ಕೆಲವೊಂದು ಸ್ವಿಚ್‌ಗಳು ಮುರಿದು ಬಿದ್ದಿದ್ದರೆ ಮತ್ತೆ ಕೆಲವು ಹೊರಬಂದಿವೆ. ಅಸಮರ್ಪಕ ನಿರ್ವಹಣೆಯಿಂದಾಗಿ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ರಾತ್ರಿ ವೇಳೆ ತಿರುಗಾಡುವುದು ಕಷ್ಟ ಹೆಬ್ಬಾಳದ ರಿಂಗ್ ರಸ್ತೆಯಲ್ಲಿ ರಾತ್ರಿ ಸಮಯದಲ್ಲಿ ವಾಹನಗಳ ಓಡಾಟ ಹೆಚ್ಚಾಗಿರುತ್ತದೆ. ವಿದ್ಯುತ್ ದೀಪಗಳು ಸರಿಯಾಗಿ ಕೆಲಸ ನಿರ್ವಹಿಸದೆ ಇರುವುದರಿಂದ ಸಣ್ಣ ವಾಹನಗಳು (ಬೈಕ್, ಆಟೋ) ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಚಲಿಸಲು ಕಷ್ಟವಾಗುತ್ತಿದೆ. ವಾಹನಗಳು ಎಗ್ಗಿಲ್ಲದೇ ನುಗ್ಗುವ ಈ ರಸ್ತೆಯಲ್ಲಿ ಸ್ಥಳೀಯರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗುವ ವೇಳೆ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿಯಿದೆ. ಹಲವು ತಿಂಗಳಿನಿಂದಲೂ ಈ ಸಮಸ್ಯೆ ಇದ್ದು, ತಕ್ಷಣ ಪರಿಹಾರ ಒದಗಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
ಗುಂಡಿಬಿದ್ದ ರಸ್ತೆಗಳು: ರಿಂಗ್ ರಸ್ತೆಯ ಸರ್ವೀಸ್ ರಸ್ತೆಗಳಲ್ಲೂ ಗುಂಡಿಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಬೀದಿ ದೀಪಗಳು ಹಾಳಾಗಿದ್ದು, ಮಳೆ ಬಂದ ವೇಳೆಯಲ್ಲಿ ರಸ್ತೆಯಲ್ಲಿರುವ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತಿದ್ದು , ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದರೂ ಸಂಬಂಧಪಟ್ಟವರು ರಸ್ತೆ ಹಾಗೂ ಬೀದಿ ದೀಪಗಳ ದುರಸ್ತಿಗೆ ಗಮನ ಹರಿಸಿಲ್ಲ.
ವಿದ್ಯುತ್ ಕಂಬಗಳು ಹಾಳಾಗಿರುವ ಬಗ್ಗೆ ಮಾಹಿತಿ ಪಡೆಯಲಾಗಿದ್ದು, ತಕ್ಷಣವೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. -ರಘು ನಂದನ್, ಮುಡಾ ಆಯುಕ್ತರು
ರಿಂಗ್ ರಸ್ತೆ ಹಾಗೂ ಸರ್ವೀಸ್ ರಸ್ತೆಯಲ್ಲಿ ಬೀದಿ ದೀಪಗಳು ಹಾಳಾಗಿರುವುದರಿಂದ ರಾತ್ರಿ ವೇಳೆ ಒಬ್ಬರೇ ಸುತ್ತಾಡಲು ಭಯಪಡುವಂತಾಗಿದೆ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸುವುದು ಅಗತ್ಯ. -ಮಾದೇವ್, ಹೆಬ್ಬಾಳ ನಿವಾಸಿ
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…