Andolana originals

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್.

ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ

ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ

ಮೈಸೂರು: ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು,  ನಾನಾ ಕಡೆಗಳಿಂದ ಮೈಸೂರಿಗೆ ಬಂದು ಹೋಗುವ ಪ್ರಯಾಣಿಕರಿಗೆ ಕುಡಿಯುವ ನೀರಿನ ಬವಣೆಯ ಬಿಸಿ ತಟ್ಟಿದೆ.

ಚಾಮರಾಜನಗರ, ಗುಂಡ್ಲುಪೇಟೆ, ಗೋಣಿಕೊಪ್ಪ, ವಿರಾಜಪೇಟೆ, ಮಡಿಕೇರಿ, ಎಚ್.ಡಿ.ಕೋಟೆ, ಸರಗೂರು, ಹಾಸನ, ಬೆಂಗಳೂರು, ಕೆ.ಆರ್.ಪೇಟೆ ಸೇರಿದಂತೆ ರಾಜ್ಯದ ಹಲವೆಡೆ ಹೋಗಲು ಪ್ರತಿ ನಿತ್ಯ ಸಾವಿರಾರು ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಆಗಮಿಸುತ್ತಾರೆ. ಆದರೆ, ಇಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾಗಿದೆ.

ಇದ್ದರೂ ಇಲ್ಲದಂತಿರುವ ನೀರಿನ ಘಟಕ: ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ಅದು ಸ್ಥಗಿತವಾಗಿ ತಿಂಗಳುಗಳೇ ಕಳೆದಿವೆ. ಆದರೆ ಕೆಎಸ್‌ಆರ್ಟಿಸಿ ಸಂಸ್ಥೆ ಮಾತ್ರ ಅದನ್ನು ದುರಸ್ತಿಪಡಿಸಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡದಿರುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ನಗರಕ್ಕೆ ಬರುವ ಪ್ರಯಾಣಿಕರು ಅನಿವಾರ್ಯವಾಗಿ ಹೊರಗೆ ದುಡ್ಡು ಕೊಟ್ಟು ಮಿನರಲ್ ವಾಟರ್‌ಗಳನ್ನು ತೆಗೆದುಕೊಳ್ಳಬೇಕಿದೆ.

ಹೋಟೆಲ್‌ಗಳಲ್ಲಿ ನೀರು ಕುಡಿಯಲು ಹೋದರೆ ಹೋಟೆಲ್ ಅವರು ಕೊಡುವುದಿಲ್ಲ. ನೀರು ಪಡೆಯ ಬೇಕಾದರೆ ಅಲ್ಲಿ ಏನಾದರೂ ತಿನ್ನಬೇಕು. ಟೀ ಮತ್ತು ಕಾಫಿ ಕುಡಿಯಬೇಕು. ಇದು ಪ್ರಯಾಣಿಕರಿಗೆ ಹೊರೆಯಾಗಿ ಪರಿಣಮಿಸಿದೆ.

ಇಂದು, ನಾಳೆ ಮಾಡಿಸೋಣ ಎಂದು ಕಾಲ ಕಳೆದು ಪ್ರಯಾಣಿಕರಿಗೆ ನೀರಿನ ಸಮಸ್ಯೆ ನೀಗಿಸಲು ಹಿಂದೇಟು ಹಾಕುತ್ತಿರುವ ಸಾರಿಗೆ ನಿಗಮದ ಅಧಿಕಾರಿಗಳು ಬಸ್ ನಿಲ್ದಾಣದಲ್ಲಿ ಆಗಿರುವ ಸಮಸ್ಯೆಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ.

” ಹಣವಂತರು ಮಿನರಲ್ ವಾಟರ್ ಬಾಟಲಿಗಳನ್ನು ಖರೀದಿಸುತ್ತಾರೆ. ಬಡ ಪ್ರಯಾಣಿಕರು ಏನು ಮಾಡಬೇಕು? ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್ಟಿಸಿಯವರು ತುರ್ತಾಗಿ ನೀರಿನ ಸೌಲಭ್ಯ ಕಲ್ಪಿಸಬೇಕು.”

ದೇವರಾಜು, ವಿರಾಜಪೇಟೆ

” ಶುದ್ಧ ಕುಡಿಯುವ ನೀರಿನ ಘಟಕದ ಸಮಸ್ಯೆ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಕೂಡಲೇ ಪರಿಶೀಲಿಸಿ ಅದನ್ನು  ದುರಸ್ತಿಗೊಳಿಸಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು.”

ಶ್ರೀನಿವಾಸ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago