ಖಾಸಗಿ ಟ್ಯಾಂಕರ್‌ಗಳಿಂದ ನೀರು ಪೂರೈಕೆ; ಸಮರ್ಪಕವಾಗಿ ಲಭ್ಯವಾಗದ ಕಾವೇರಿ ನೀರು
ಚಾಮರಾಜನಗರ : ನಗರದ ಸೋಮವಾರಪೇಟೆ ಬಡಾವಣೆಯಲ್ಲಿ ೧೫ ದಿನಗಳಿಂದ ಕುಡಿಯುವ ನೀರಿಗೆ ಸಮಸ್ಯೆಯಾಗಿದ್ದು, ನಿವಾಸಿಗಳು ನೀರಿಗಾಗಿ ಪರದಾಡುತ್ತಿದ್ದಾರೆ. ಸ್ಥಳೀಯ ನಗರಸಭೆಯ ಒಂದನೇ ವಾರ್ಡ್‌ಗೆ ಸೇರಿದ ಬಡಾವಣೆಯಲ್ಲಿ ೧೦ಕ್ಕೂ ಹೆಚ್ಚು ಬೋರ್‌ವೆಲ್‌ಗಳಿವೆ. ಮುಂಗಾರು ಮತ್ತು ಹಿಂಗಾರು ಮಳೆಯಿಂದ ಬೋರ್‌ವೆಲ್ಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ನೀರು ಬರುತ್ತಿಲ್ಲ.
ನಗರದ ಸೋಮವಾರಪೇಟೆ ಸೇರಿದಂತೆ ವಿವಿಧ ಬಡಾವಣೆಗಳು ಸೇರಿದಂತೆ ಸೋಮವಾರಪೇಟೆ ಬಡಾವಣೆಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಬರುತ್ತಿಲ್ಲ. ತಿ.ನರಸೀಪುರದಲ್ಲಿ ಹರಿಯುವ ಕಾವೇರಿ ನೀರನ್ನು ಜಿಲ್ಲಾ ಕೇಂದ್ರವಾದ ನಗರದ ಬಡಾವಣೆಗಳಿಗೆ ಪೂರೈಸಲಾಗುತ್ತಿದೆ.
೧೫ ದಿನಗಳಿಂದ ನಗರಕ್ಕೆ ಸರಿಯಾಗಿ ಕಾವೇರಿ ನೀರು ಬರುತ್ತಿಲ್ಲ. ತಿ.ನರಸೀಪುರದಲ್ಲಿರುವ ಪಂಪ್‌ಹೌಸ್‌ನಲ್ಲಿ ನೀರೆತ್ತುವ ಮೋಟಾರ್ ಕೆಟ್ಟಿದೆ ಎಂಬ ಕಾರಣಕ್ಕೆ ನೀರು ಪೂರೈಕೆ ವಿಳಂಬವಾಗಿದೆ. ಆದ್ದರಿಂದ ಬಡಾವಣೆಯಲ್ಲಿ ನೀರಿನ ಸಮಸ್ಯೆ ಎದುರಾಗಿದೆ.
ಬಡಾವಣೆಯಲ್ಲಿರುವ ನಗರಸಭೆಗೆ ಸೇರಿದ ಬೋರ್‌ವೆಲ್ಗಳಲ್ಲಿ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ. ಜೊತೆಗೆ ಕಾವೇರಿ ನೀರು ಕೂಡ ಸಮರ್ಪಕವಾಗಿ ಬಾರದೆ ಇರುವುದರಿಂದನಿವಾಸಿಗಳು ಖಾಸಗಿ ನೀರಿನ ಟ್ಯಾಂಕರ್ ಮೊರೆ ಹೋಗಿದ್ದಾರೆ. ಬಡಾವಣೆಯಲ್ಲಿ ವಾಸಮಾಡುತ್ತಿರುವ ಬಹುತೇಕರು ಬಡವರ್ಗಕ್ಕೆ ಸೇರಿದವರಾಗಿದ್ದು, ಹಣ ನೀಡಿ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಹಾಕಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ ನಿವಾಸಿಗಳು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರನ್ನು ಭೇಟಿ ಮಾಡಿ ಬಡಾವಣೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ. ಅಂತರ್ಜಲ ಸಿಗುವ ಕಡೆ ಬೋರ್‌ವೆಲ್ ಕೊರೆಸಿ ನೀರು ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನೊಂದು ತಿಂಗಳ ಕಾಲ ಹಿಂಗಾರು ಮಳೆ ಬೀಳುವ ನಿರೀಕ್ಷೆಯಿದೆ. ಒಂದು ವೇಳೆ ಮಳೆ ಕೈಕೊಟ್ಟರೆ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ. ಕೂಡಲೇ ನಗರಸಭೆ ಹಾಗೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಮಾಡಿ ಸಮಸ್ಯೆಯನ್ನು ಪರಿಹರಿಸಬೇಕು. ತಪ್ಪಿದಲ್ಲಿ ನಗರಸಭೆ ಕಚೇರಿ ಎದುರು ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.
” ಮುಂಗಾರು ಮತ್ತು ಹಿಂಗಾರು ಮಳೆ ಸಾಕಷ್ಟು ಬಿದ್ದಿಲ್ಲ. ಬಡಾವಣೆಯ ಎಲ್ಲ ಕಡೆಗಳಿಗೂ ಕಾವೇರಿ ನೀರು ಒದಗಿಸಬೇಕೆಂದು ಹಲವು ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಆದ್ದರಿಂದ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.”
ಎಸ್.ಮಹದೇವಯ್ಯ, ಸೋಮವಾರಪೇಟೆ ನಿವಾಸಿ
” ಸೋಮವಾರಪೇಟೆ ಬಡಾವಣೆಯಲ್ಲಿ ನೀರಿನ ಸಮಸ್ಯೆ ಇರುವುದು ನಮ್ಮ ಗಮನಕ್ಕೆ ಬಂದಿದೆ. ಬಡಾವಣೆಯ ವ್ಯಾಪ್ತಿಯಲ್ಲಿ ಅಂತರ್ಜಲ ಸಿಗುವ ಕಡೆ ಸ್ಥಳ ಗುರುತಿಸುವ ಕೆಲಸ ನಡೆದಿದೆ. ಈಗಾಗಲೇ ಬಡಾವಣೆಗೆ ಟ್ಯಾಂಕರ್ ಮೂಲಕ ಪ್ರತಿದಿನ ನೀರು ಪೂರೈಕೆ ಮಾಡಲಾಗುತ್ತಿದೆ.”
ಪ್ರಕಾಶ್, ನಗರಸಭೆ ಇಂಜಿನಿಯರ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡರ್‌ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…
ವಾಷಿಂಗ್ಟನ್: ಇರಾನ್ ಬಳಿಕ ಇದೀಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ. ಕ್ಯೂಬಾ ದೇಸದ ಮೇಲೆ…
ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ…
ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ…
ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ…