ಓದುಗರ ಪತ್ರ
ಮೈಸೂರಿನ ಮಹಾರಾಜ ಕಾಲೇಜು ತನ್ನದೇ ಆದ ಇತಿಹಾಸ, ಗೌರವವನ್ನು ಹೊಂದಿದೆ. ಇಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಈ ಕಾಲೇಜು ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಇತ್ತೀಚೆಗೆ ಈ ಕಾಲೇಜಿನಲ್ಲಿ ಪದವಿ ಮುಗಿಸಿರುವ ವಿದ್ಯಾರ್ಥಿಗಳ ಗೋಳು ಹೇಳತೀರದಾಗಿದೆ.
ಕಾಲೇಜಿಗೆ ಸೇರುವ ಮುನ್ನ ವಿದ್ಯಾರ್ಥಿಗಳಿಂದ ಮೂಲ ದಾಖಲೆಗಳನ್ನು ಪಡೆದುಕೊಳ್ಳುತ್ತಾರೆ. ಪದವಿ ಮುಗಿದ ನಂತರ ವಿದ್ಯಾರ್ಥಿಗಳು ಆ ದಾಖಲೆಗಳನ್ನು ವಾಪಸ್ ಪಡೆದುಕೊಳ್ಳಬೇಕಾಗಿರುತ್ತದೆ. ಈ ಕಾಲೇಜಿನಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳ ಉನ್ನತ ಶೈಕ್ಷಣಿಕ ವ್ಯಾಸಂಗಕ್ಕಾಗಿ, ಉದ್ಯೋಗಗಳಿಗಾಗಿ, ದಾಖಲೆಗಳು ಅತ್ಯವಶ್ಯಕವಾಗಿರುತ್ತವೆ. ಮೂಲ ದಾಖಲೆಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ತಿಂಗಳುಗಳೇ ಕಳೆದರೂ ವಾಪಸ್ ನೀಡುತ್ತಿಲ್ಲ. ಸಂಬಂಧಪಟ್ಟವರಿಂದ ಸರಿಯಾದ ಮಾಹಿತಿಯೂ ದೊರಕುತ್ತಿಲ್ಲ. ನಾಳೆ ಬಾ, ಅವರನ್ನು ಕೇಳು, ಇವರನ್ನು ಕೇಳು ಎಂದು ಸಬೂಬು ಹೇಳಿ ವಿದ್ಯಾರ್ಥಿಗಳನ್ನು ಪ್ರತಿದಿನ ಅಲೆದಾಡಿಸುತ್ತಿದ್ದಾರೆ.
ಮಹಾರಾಜ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಬಹುತೇಕ ವಿದ್ಯಾರ್ಥಿಗಳು, ಬಡ ವಿದ್ಯಾರ್ಥಿಗಳು ಹಾಗೂ ದೂರದ ಹಳ್ಳಿಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಾಗಿರುತ್ತಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಕೊಂಡು ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ನೆರವಾಗಬೇಕು.
– ಅಭಿಷೇಕ್, ನೊಂದ ವಿದ್ಯಾರ್ಥಿ,ಕಲ್ಲಂಬಾಳು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…