ಮಹಾದೇಶ್ ಎಂ.ಗೌಡ
ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ
ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಎಂದು ಕೌದಳ್ಳಿ ಗ್ರಾಮದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನ ಕೌದಳ್ಳಿ ಗ್ರಾಮದ ನಾಯಕರ ಬೀದಿ, ಮೊದಲನೇ ವಾರ್ಡ್, ವಾಲ್ಮೀಕಿ ನಗರ, ಇನ್ನಿತರ ಬಡಾವಣೆಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆ ಎದುರಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾರೂ ಇತ್ತ ಗಮನಹರಿಸುತ್ತಿಲ್ಲ ಎಂದು ಮಹಿಳೆಯರು ದೂರಿದ್ದಾರೆ. ಈ ಕುರಿತು ಮಾತನಾಡಿದ ಮಹಿಳೆಯರು, ೨೦ ದಿನಗಳಿಂದ ವ್ಯವಸ್ಥಿತವಾಗಿ ನೀರು ಸರಬರಾಜು ಆಗುತ್ತಿಲ್ಲ. ಇದರಿಂದ ಮಹಿಳೆಯರೆಲ್ಲರೂ ತೀವ್ರ ತೊಂದರೆಗೆ ಸಿಲುಕಿದ್ದೇವೆ. ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ನಾವು ನೀರು ಹಿಡಿಯುವ ಕೆಲಸ ಮಾಡಬೇಕೋ ಅಥವಾ ಕೂಲಿ ಕೆಲಸಕ್ಕೆ ಹೋಗಬೇಕೋ ಎಂಬಂತಹ ಪರಿಸ್ಥಿತಿಯನ್ನು ಇಲಾಖೆ ಅಧಿಕಾರಿಗಳು ಸೃಷ್ಟಿ ಮಾಡಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಮೇಲಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕೂಲಿ ಬಿಟ್ಟು ನೀರು ಹಿಡಿಯುವ ಪರಿಸ್ಥಿತಿ: ಗ್ರಾಮದಲ್ಲಿ ಬಹುತೇಕ ಬಡ ಕುಟುಂಬದ ಮಹಿಳೆ ಯರೇ ಇದ್ದು, ಜೀವನ ನಿರ್ವಹಣೆಗಾಗಿ ಕೂಲಿಯನ್ನು ಅವಲಂಬಿಸಿದ್ದಾರೆ. ಸಮರ್ಪಕವಾಗಿ ನೀರು ಸರಬರಾಜು ಆಗದ ಕಾರಣ ಕೂಲಿಗೆ ಹೋಗದೆ ಪ್ರತಿದಿನ ತೋಟಗಳಲ್ಲಿ, ನಲ್ಲಿಗಳಲ್ಲಿ ನೀರು ಬರುವ ಸಮಯವನ್ನೇ ಕಾದು ಕೂರಬೇಕಾಗಿದೆ. ಇದರಿಂದ ಜೀವನ ನಿರ್ವಹಣೆಗೂ ತೊಂದರೆಯಾಗಿದೆ ಎಂದು ನಾಯಕರ ಬೀದಿಯ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.
ಟ್ಯಾಂಕರ್ ಮೂಲಕ ನೀರು ಕೊಡಿ: ದಿನನಿತ್ಯದ ಬಳಕೆಗೂ ನೀರು ಸಿಗದಂತಾಗಿದೆ. ಆದ್ದರಿಂದ ಪ್ರತಿ ಬೀದಿಗೂ ದಿನಕ್ಕೊಮ್ಮೆಯಾದರೂ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಕೌದಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…