Andolana originals

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು

೧೨ ನೇ ತರಗತಿವರೆಗೆ ಗಂಡು ಮಕ್ಕಳಿಗೂ ಉಚಿತ ಪ್ರಯಾಣಕ್ಕೆ ಸಲಹೆ

ಸಾರಿಗೆ ರೂಪುರೇಷೆ: 

* ಶಾಲಾ-ಕಾಲೇಜು ಸಮಯಕ್ಕೆ ಅಗತ್ಯ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ

* ಎಲ್ಲಾ ಬಸ್‌ಗಳಲ್ಲಿ ಸಿಸಿಟಿವಿ ಕಡ್ಡಾಯ, ಜಿಪಿಎಸ್ ನಿಗಾ, ತುರ್ತು ಪ್ಯಾನಿಕ್ ಬಟನ್ ಅಳವಡಿಕೆ

* ಮಕ್ಕಳ ಸಹಾಯವಾಣಿ ೧೦೯೮ ಪ್ರದರ್ಶಿಸುವುದು ಕಡ್ಡಾಯ

* ಬಸ್ ಸೇವೆಯಲ್ಲಿ ಮಾರ್ಗ ಮತ್ತು ಸಮಯ ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು

* ಬಸ್ ಚಾಲಕರು, ಸಿಬ್ಬಂದಿಗೆ ಮಕ್ಕಳ ಹಕ್ಕು ಕುರಿತು ತರಬೇತಿ, ಪ್ರತಿವರ್ಷ ರಿಫ್ರೆಶರ್ ಕೋರ್ಸ್ ಕಡ್ಡಾಯ

* ಹೆಚ್ಚಿನ ವಿದ್ಯಾರ್ಥಿನಿಯರು ಇರುವ ರೂಟ್‌ಗಳಲ್ಲಿ ಮಹಿಳಾ ಕಂಡಕ್ಟರ್ ಕಡ್ಡಾಯ

ಬೆಂಗಳೂರು: ಶಾಲಾ ಸಮಯದಲ್ಲಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಬಾರದಿರುವುದು, ಹೆಚ್ಚಿದ ಒತ್ತಡ, ಬಸ್‌ಗಳ ಕೊರತೆಯ ಹಿನ್ನೆಲೆಯಲ್ಲಿ ಮಕ್ಕಳು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ರೂಪಿಸಲು ಸರ್ಕಾರ ಮುಂದಾಗಿದೆ.

ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಾದ ನಂತರ ಬಸ್‌ಗಳ ಸಮಸ್ಯೆ ಹೆಚ್ಚಾಗಿ ವಿದ್ಯಾರ್ಥಿಗಳು ಪರಿಪಾಟಲು ಪಡುವಂತಾಗಿದೆ. ಈ ವಿಷಯ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಬಾಗಿಲು ತಟ್ಟಿತ್ತು. ಇದನ್ನು ಸಮಗ್ರವಾಗಿ ಅಧ್ಯಯನ ಮಾಡಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳಿಗೆ ಸುರಕ್ಷತೆ ಹಾಗೂ ವಿಶ್ವಾಸಾರ್ಹ ಸಾರಿಗೆ ಸೌಲಭ್ಯ ಒದಗಿಸಲು ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಅನುಷ್ಠಾನ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಸೂಚನೆ ಮೇರೆಗೆ ಈ ಶಿಫಾರಸನ್ನು ಪರಿಶೀಲಿಸಿ ಕ್ರಮ ವಹಿಸುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿನ ಕಾರ್ಯದರ್ಶಿ (ಸಾರಿಗೆ ಇಲಾಖೆ), ಕೆಎಸ್‌ಆರ್ಟಿಸಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕರಿಗೆ ನಿರ್ದೇಶಿಸಿದ್ದಾರೆ.

ರಾಜ್ಯದಲ್ಲಿ ಗ್ರಾಮೀಣ ಮತ್ತು ಹಿಂದುಳಿದ ವರ್ಗಗಳ ಮಕ್ಕಳು ಹೆಚ್ಚಾಗಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸಿದ್ದು, ಮಕ್ಕಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಬಸ್ಗಳಿಂದ ಬಿದ್ದು ಗಾಯಗೊಂಡಿರುವ ಪ್ರಕರಣಗಳೂ ಇವೆ. ಇದನ್ನು ತಪ್ಪಿಸಲು ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಈಗಾಗಲೇ ಹೆಣ್ಣು ಮಕ್ಕಳ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಉಚಿತ ಪ್ರಯಾಣದ ಅವಕಾಶವನ್ನು ೧೨ ನೇ ತರಗತಿವರೆಗೆ ಗಂಡು ಮಕ್ಕಳಿಗೂ ವಿಸ್ತರಿಸಬೇಕು. ಪ್ರತಿ, ಶಾಲೆ-ಕಾಲೇಜು ಮಾರ್ಗದಲ್ಲಿ ಓದುತ್ತಿರುವ ಮಕ್ಕಳ ನಿಖರ ದತ್ತಾಂಶ ಸಂಗ್ರಹಿಸಿ ರೂಟ್ ಪ್ಲಾನಿಂಗ್ ಮಾಡಬೇಕು. ಸಾರಿಗೆ ವ್ಯವಸ್ಥೆ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂದು ಸೂಚಿಸಿದೆ. ಗ್ರಾಮೀಣ ಮಾರ್ಗಗಳಲ್ಲಿ ವಿಶೇಷ ಶಾಲಾ ಮತ್ತು ಕಾಲೇಜು ಬಸ್ ಗಳನ್ನು ಕಾರ್ಯಾಚರಿಸಬೇಕು , ತರಗತಿ ಸಮಯಕ್ಕೆ ತಕ್ಕಂತೆ ಬೆಳಿಗ್ಗೆ ಮತ್ತು ಸಂಜೆ ಹೆಚ್ಚುವರಿ ಟ್ರಿಪ್‌ಗಳನ್ನು ಜಾರಿಗೊಳಿಸಬೇಕು ಎಂದು ಶಿಫಾರಸು ಮಾಡಿದೆ.

 

 

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

51 mins ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

1 hour ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

1 hour ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

1 hour ago

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

8 hours ago