ಮಹಾದೇಶ್ ಎಂ ಗೌಡ
ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ ಹಲವು ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಮಕ್ಕಳು ವಿವಿಧ ಊರುಗಳಲ್ಲಿರುವ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಸಮರ್ಪಕ ವಾಹನ ವ್ಯವಸ್ಥೆ ಇಲ್ಲ. ಪ್ರತಿನಿತ್ಯ ೧೪ ಕಿ.ಮೀ. (೭+೭) ನಡೆದುಕೊಂಡು ಓಡಾಡಬೇಕಿದೆ. ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದ್ದು ವಾಹನ ವ್ಯವಸ್ಥೆ ಮಾಡಿಕೊಡಬೇಕು ಎಂದು ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.
ಗ್ರಾಮದಲ್ಲಿ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಜ್ಜೀಪುರ, ರಾಮಾ ಪುರ, ಹನೂರು, ಕೊಳ್ಳೇಗಾಲ ಪಟ್ಟಣದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಶಾಲೆಗೆ ತೆರಳಲು ಸಮರ್ಪಕ ರಸ್ತೆ ಹಾಗೂ ವಾಹನ ವ್ಯವಸ್ಥೆ ಇಲ್ಲದೆ ಇರುವುದರಿಂದ ಪ್ರತಿನಿತ್ಯ ಶಾಲೆಗೆ ಆಗಮಿಸಲು ೭ ಕಿಮೀ, ವಾಪಸ್ ಗ್ರಾಮಕ್ಕೆ ತೆರಳಲು ೭ ಕಿಮೀ ನಡೆದುಕೊಂಡು ಹೋಗ ಬೇಕಿದೆ. ಒಟ್ಟಾರೆ ನಿತ್ಯ ೧೪ ಕಿಮೀ ನಡೆದುಕೊಂಡು ಹೋಗುತ್ತಿರು ವುದರಿಂದ ಶಾಲಾ ಸಮಯಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ.
ಆದರೆ ಶಾಲೆಗೆ ತೆರಳಲು ಸಮರ್ಪಕ ರಸ್ತೆ ಹಾಗೂ ವಾಹನದ ವ್ಯವಸ್ಥೆ ಇಲ್ಲದೆ ಇರುವುದರಿಂದ ಪ್ರತಿನಿತ್ಯ ಶಾಲೆಗೆ ಆಗಮಿಸಲು ೭ ಕಿ.ಮೀ.ವಾಪಸ್ಗ್ರಾಮಕ್ಕೆ ತೆರಳಲು ೭ ಕಿ.ಮೀ. ನಡೆದುಕೊಂಡು ಹೋಗ ಬೇಕಿದೆ ಒಟ್ಟಾರೆ ನಿತ್ಯ ೧೪ ಕಿ.ಮೀ. ನಡೆದುಕೊಂಡು ಹೋಗುತ್ತಿರುವುದರಿಂದ ಪ್ರತಿನಿತ್ಯ ಶಾಲಾ ಅವಧಿಗೆ ಸರಿಯಾಗಿ ಹೋಗಲು ಸಾಧ್ಯ ವಾಗುತ್ತಿಲ್ಲ. ಇದರಿಂದ ಪ್ರವ ಚನಗಳಿಂದ ವಂಚಿತರಾಗುತ್ತಿ ದ್ದಾರೆ.
ವಾಹನದ ವ್ಯವಸ್ಥೆಗೆ ಮನವಿ: ಗ್ರಾಮದ ವಿದ್ಯಾರ್ಥಿಗಳು ತಾಲ್ಲೂಕಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೋಗ ಬೇಕಾಗಿರುವುದರಿಂದ ಪ್ರತಿನಿತ್ಯ ೧೪ ಕಿಲೋ ಮೀಟರ್ ನಡೆದು ಕೊಂಡು ಹೋಗಬೇಕಿದೆ. ಇದರಿಂದ ಎರಡರಿಂದ ಮೂರು ಗಂಟೆಗಳ ಕಾಲ ವ್ಯರ್ಥವಾಗುತ್ತಿದೆ. ಈ ನಿಟ್ಟಿ ನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವ್ಯಾನ್ ಅಥವಾ ಮಿನಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸ್ಥಳೀಯ ಶಾಸಕರಾದ ಎಂ.ಆರ್.ಮಂಜುನಾಥ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಮನವಿ ಪತ್ರದಲ್ಲಿ ಏನಿದೆ?: ಮುಖ್ಯಮಂತ್ರಿಗಳು ಹಾಗೂ ಶಾಸಕರಿಗೆ ಬರೆದಿರುವ ಮನವಿ ಪತ್ರದಲ್ಲಿ ವಿದ್ಯಾರ್ಥಿಗಳು, ನಮ್ಮ ಗ್ರಾಮಕ್ಕೆ ಸಮರ್ಪಕ ರಸ್ತೆ ಇಲ್ಲ. ಹಾಗಾಗಿ ವಾಹನಗಳ ವ್ಯವಸ್ಥೆಯೂ ಇಲ್ಲ. ಪ್ರತಿದಿನ ಬೆಳಿಗ್ಗೆಮತ್ತು ಸಂಜೆ ನಡೆದುಕೊಂಡೇ ಓಡಾಡಬೇಕಾಗಿದೆ. ಕಾಡು ಪ್ರಾಣಿಗಳ ದಾಳಿ ಭೀತಿಯೂ ನಮ್ಮನ್ನು ಕಾಡುತ್ತಿದೆ. ಆದ್ದರಿಂದ ನಮಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಾಹನದ ವ್ಯವಸ್ಥೆ ಮಾಡಿಕೊಡಬೇಕು. ಗ್ರಾಮದ ವಿದ್ಯಾರ್ಥಿಗಳಾದ ಶರಣ್ಯ ಚೇತನ್ ಗೋಕುಲ್ ಮಾದೇಗೌಡ, ಈಶ್ವರಿ, ರಶ್ಮಿ, ಉಮೇಶ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಸಹಿ ಮಾಡಿ ಮನವಿ ಮಾಡಿಕೊಂಡಿದ್ದಾರೆ.
” ಪಚ್ಚೆದೊಡ್ಡಿ ಗ್ರಾಮದ ವಿದ್ಯಾರ್ಥಿಗಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವುದು ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರ ಅನುದಾನದಿಂದ ಒಂದು ವಾಹನ ಒದಗಿಸಲು ಸೂಕ್ತ ಕ್ರಮ ವಹಿಸುತ್ತೇನೆ.”
-ಎಂ.ಆರ್.ಮಂಜುನಾಥ್, ಶಾಸಕ, ಹನೂರು ಕ್ಷೇತ್ರ
” ಪ್ರತಿನಿತ್ಯ ನಡೆದುಕೊಂಡು ಹೋಗಬೇಕಿದ್ದು, ಶಾಲೆಗೆ ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ. ಪ್ರತಿದಿನವೂ ಎರಡು ಗಂಟೆಗಳು ನಡೆದುಕೊಂಡು ಹೋಗುವುದರಲ್ಲಿ ಕಳೆದು ಹೋಗುತ್ತಿವೆ. ಮುಖ್ಯಮಂತ್ರಿಗಳು ನಮ್ಮ ಗ್ರಾಮಕ್ಕೆ ರಸ್ತೆ ನಿರ್ಮಿಸಬೇಕು. ವಾಹನದ ವ್ಯವಸ್ಥೆಯನ್ನೂ ಕಲ್ಪಿಸಬೇಕು. ಕಾಡುಪ್ರಾಣಿಗಳಿಂದ ಯಾವುದಾದರೂ ತೊಂದರೆಯಾದರೆ, ಯಾರು ಹೊಣೆ?”
-ಶರಣ್ಯ, ವಿದ್ಯಾರ್ಥಿನಿ, ಪಚ್ಚೆದೊಡ್ಡಿ
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…