ಕೆ.ಬಿ.ರಮೇಶ ನಾಯಕ
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತೆ, ಬಿಸಿ ನೀರು ಬಳಸುವಂತೆ ಜಾಗೃತಿ
ಮೈಸೂರು: ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೈ ಅಲರ್ಟ್ ಆಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮದೇವತೆಗಳ ಹಬ್ಬ ಪ್ರಮುಖ ಜಾತ್ರೆಗಳಲ್ಲಿ ಸಾವಿರಾರು ಜನರು ಸೇರುವ ಕಾರಣ ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮಕೈಗೊಳ್ಳುವ ಮೂಲಕ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಅಭಯ ನೀಡಲಾಗಿದೆ.
ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಕಾರ್ಯ ಚಟುವಟಿಕೆ: ಮೈಸೂರು ಜಿಲ್ಲೆಯಲ್ಲಿ ಸುಮಾರು ೧,೧೩೫ ಗ್ರಾಮ ಆರೋಗ್ಯ ಪೌಷ್ಟಿಕ ಮತ್ತು ನೈರ್ಮಲ್ಯ ಸಮಿತಿಗಳಿದ್ದು, ಈ ಸಮಿತಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಳೀಯ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗಿರುತ್ತವೆ. ಈ ಸಮಿತಿಗಳು ಗ್ರಾಮ ಮಟ್ಟದಲ್ಲಿ ಗ್ರಾಮದಲ್ಲಿನ ಸ್ವಚ್ಛತೆ ಹಾಗೂ ಆರೋಗ್ಯ ಕುರಿತು ನಿರಂತರವಾಗಿ ಗಮನವಹಿಸುತ್ತವೆ.
ಗ್ರಾಮಗಳಲ್ಲಿ ಕಸದ ರಾಶಿ ಬೀಳದಂತೆ ಕ್ರಮವಹಿಸುವ ಜೊತೆಗೆ ಚರಂಡಿಯಲ್ಲಿ ನೀರು ಒಂದೇ ಕಡೆ ನಿಲ್ಲದಂತೆ ಎಚ್ಚರ ವಹಿಸುತ್ತವೆ ಮತ್ತು ಶುದ್ಧ ಕುಡಿಯುವ ನೀರು ಸರಬರಾಜು ಆಗುತ್ತಿರುವ ಜೊತೆಗೆ ನೀರಿನ ಸರಬ ರಾಜು ಆಗುವ ಪೈಪ್‌ಗಳ ಬಗ್ಗೆ ನಿಗಾ ವಹಿಸುವುದರೊಂದಿಗೆ ಗ್ರಾಮಗಳ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಕ್ರಮ ವಹಿಸಲು ನಿರ್ದೇಶನ ನೀಡಲಾಗಿದೆ.
ಸಮುದಾಯ ಮಟ್ಟದಲ್ಲಿ ನಡೆಯುವ ಜಾತ್ರೆಗಳಲ್ಲಿ ಸುರಕ್ಷಿತವಲ್ಲದ ರೀತಿಯಲ್ಲಿ ಇಟ್ಟಿರುವ ಹಣ್ಣು, ಪಾನೀಯಗಳಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯಿದೆ. ಹಣ್ಣುಗಳ ಮೇಲೆ ನೊಣ ಇನ್ನಿತರೆ ಕ್ರಿಮಿ ಕೀಟಗಳು ಕುಳಿತು ರೋಗ ಹರಡದಂತೆ ಕ್ರಮವಹಿಸಲು ಅಧೀನ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಸಾರ್ವಜನಿಕರು ಕುದಿಸಿ ಆರಿಸಿದ ನೀರನ್ನು ಕುಡಿಯಬೇಕು. ಆಹಾರ ಸೇವಿಸುವ ಮೊದಲು ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ಈ ಬಗ್ಗೆ ಅಣಕು ಪ್ರದರ್ಶನ ನೀಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಗ್ರಾಮಗಳಲ್ಲಿನ ಟ್ಯಾಂಕ್‌ಗಳಲ್ಲಿನ ನೀರಿನ ಮಾದರಿಯನ್ನು ಕಾಲಕಾಲಕ್ಕೆ ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸುವ ಸಂಬಂಧ ಕ್ರಮ ವಹಿಸಲಾಗಿದೆ. ಮಾರ್ಗಸೂಚಿ ಅನುಸಾರ ಟ್ಯಾಂಕ್ ಸ್ವಚ್ಛಗೊಳಿಸುವ ಕುರಿತು ಸಂಬಂಧಿಸಿದ ಪ್ರಾಧಿಕಾರದೊಂದಿಗೆ ಸಮನ್ವಯದಿಂದ ಸಹಕಾರ ನೀಡಲು ಅಧಿನ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.
ಅತಿಯಾದ ಬಿಸಿಲಿನಿಂದ ಜನರು ಬಳಲುವ ಸಾಧ್ಯತೆ ಇರುವುದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಉಪ ಕೇಂದ್ರಗಳಲ್ಲಿ ಓಆರ್‌ಎಸ್ ಪಟ್ಟಣಗಳನ್ನು ಸಂಗ್ರಹಿಸಲು ಸೂಚನೆ ನೀಡಲಾಗಿದೆ ಹಾಗೂ ಸಮುದಾಯ ಮಟ್ಟದಲ್ಲಿ ಓಆರ್‌ಎಸ್ ದ್ರಾವಣವನ್ನು ತಯಾರಿಸುವ ಬಗ್ಗೆ ತರಬೇತಿ ನೀಡುವುದರ ಮೂಲಕ ಕ್ಷೇತ್ರ ಮಟ್ಟದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಪ್ರದರ್ಶನ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
ತಾಲ್ಲೂಕು ಆಸ್ಪತ್ರೆಗಳಲ್ಲಿ ಐದು ಹಾಸಿಗೆಗಳ ವ್ಯವಸ್ಥೆ: ಬೇಸಿಗೆ ಕಾಲದ ತುರ್ತು ನಿರ್ವಹಣೆಗಾಗಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎರಡು ಹಾಸಿಗೆಗಳನ್ನು ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ೫ ಹಾಸಿಗೆಗಳನ್ನು ಮೀಸಲಿಡಲಾಗಿದೆ. ಈ ಬಗ್ಗೆ ವೈದ್ಯರುಗಳಿಗೆ ತರಬೇತಿಯನ್ನು ನೀಡಲಾಗಿದೆ. ಬೇಸಿಗೆ ಕಾಲದ ನಿರ್ವಹಣೆಗಾಗಿ ಆಶಾ ಕಾರ್ಯಕರ್ತೆಯರು ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ ಸ್ವಚ್ಛತೆ ಮತ್ತು ನೈರ್ಮಲ್ಯ ಕುರಿತು ಸಲಹೆ ಸೂಚನೆಗಳನ್ನು ನೀಡುವುದರ ಜೊತೆಗೆ ನೀರು ಸಂಗ್ರಹಣೆಯ ಬಗ್ಗೆ ಪರಿಶೀಲಿಸಿ ಕ್ರಮವಹಿಸಲು ಸೂಚನೆ ನೀಡಲಾಗಿದೆ.
ಬೇಸಿಗೆಯಲ್ಲಿ ಆರೋಗ್ಯವಾಗಿರಲು ಏನೇನು ಪಾಲನೆ ಅಗತ್ಯ:
* ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅಗತ್ಯ ಹೆಚ್ಚು ಇರುತ್ತದೆ. ದಿನಕ್ಕೆ ಕನಿಷ್ಠ ೮ ಅಥವಾ ೧೦ ಗ್ಲಾಸ್ ನೀರು ಕುಡಿಯಬೇಕು
* ಹೆಚ್ಚಿನ ಪ್ರಮಾಣದಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದು, ಕಲ್ಲಂಗಡಿ, ಸೌತೆಕಾಯಿ, ಮಾವು, ಕಿತ್ತಳೆ, ಪಪ್ಪಾಯಿ ಮೊದಲಾದ ಹಣ್ಣುಗಳನ್ನು ಹೆಚ್ಚು ಸೇವಿಸಬೇಕು
* ಬೇಸಿಗೆಯಲ್ಲಿ ಹತ್ತಿಯ ಮತ್ತು ಹಗುರವಾದ ಬಟ್ಟೆಗಳನ್ನು ಧರಿಸುವುದು ಉತ್ತಮ. ಈ ಬಟ್ಟೆಗಳು ದೇಹಕ್ಕೆ ತಂಪನ್ನು ನೀಡುತ್ತವೆ ಮತ್ತು ಬೆವರು ಕಡಿಮೆ ಆಗಲು ಸಹಾಯ ಮಾಡುತ್ತವೆ
* ಸ್ವಚ್ಛ ಆಹಾರ ಸೇವಿಸುವುದು, ಹಾಳಾದ ಅಥವಾ ಹೊರಗಿನ ಆಹಾರವನ್ನು ತಿನ್ನಬಾರದು. ಸ್ವಚ್ಛವಾಗಿ ತಯಾರಿಸಿದ ತಾಜಾ ಆಹಾರವನ್ನು ಮಾತ್ರ ಸೇವಿಸಬೇಕು. ಇದರಿಂದ ಹೊಟ್ಟೆ ಸಮಸ್ಯೆಗಳು ಉಂಟಾಗುವುದಿಲ್ಲ
* ತಂಪು ಪಾನೀಯಗಳನ್ನು ಸೇವನೆ ಮಾಡುವಾಗ ಸ್ಥಳಿಯವಾಗಿ ಲಭ್ಯವಿರುವ ಮಜ್ಜಿಗೆ, ನಿಂಬೆ ಶರಬತ್ತು, ಎಳನೀರು ಇತ್ಯಾದಿ ನೈಸರ್ಗಿಕ ಪಾನೀಯಗಳನ್ನು ಸೇವಿಸುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು.
* ದಿನಕ್ಕೆ ಕನಿಷ್ಠ ಎರಡು ಬಾರಿ ಸ್ನಾನ ಮಾಡುವುದು ಮತ್ತು ಮನೆ ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅಗತ್ಯ.
” ಸರಳವಾದ ಆರೋಗ್ಯ ಸಲಹೆಗಳನ್ನು ಅನುಸರಿಸುವುದರಿಂದ ನಮ್ಮ ದೈನಂದಿನ ಜೀವನದಲ್ಲಿ ಬೇಸಿಗೆ ಕಾಲದಲ್ಲೂ ಸಹ ಆರೋಗ್ಯಕರವಾಗಿ ಮತ್ತು ಉತ್ಸಾಹದಿಂದ ಬದುಕಬಹುದು. ಆದ್ದರಿಂದ ಪ್ರತಿಯೊಬ್ಬರೂ ಬೇಸಿಗೆ ಕಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡುವುದು ಅತ್ಯವಶ್ಯ. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ನಿಗಾ ಇರಿಸಲಾಗಿದೆ.”
ಡಾ.ಪಿ.ಸಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…
ಆದಿತ್ಯ ಧರ್ ನಿರ್ದೇಶನದ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…