Andolana originals

ಮಹಿಳಾ ಸಬಲೀಕರಣಕ್ಕೆ ಹಲವು ಸೌಲಭ್ಯಗಳ ಆಸರೆ

ನವೀನ್ ಡಿಸೋಜ

ಮಿಷನ್ ಶಕ್ತಿ ಯೋಜನೆಯಡಿ ಕೊಡಗಿನಲ್ಲಿ ೭೨ ಅರಿವು ಕಾರ್ಯಾಗಾರ; ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜಾಗೃತಿ

ಮಡಿಕೇರಿ: ಮಹಿಳೆಯರ ಸುರಕ್ಷತೆ, ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣದ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ‘ಮಿಷನ್ ಶಕ್ತಿ’ ಯೋಜನೆ ಕೊಡಗು ಜಿಲ್ಲೆಯಲ್ಲಿ ಮಹಿಳಾ ಪರ ಕಾರ್ಯಕ್ರಮಗಳಿಗೆ ಆಸರೆ ಯಾಗಿದೆ. ಸಂಕಷ್ಟದಲ್ಲಿರುವ ಮಹಿಳೆಯರಿಗೆ ತಕ್ಷಣದ ನೆರವು, ಕಾನೂನು ರಕ್ಷಣೆ, ಪುನರ್ವಸತಿ, ಉದ್ಯೋಗಸ್ಥ ಮಹಿಳೆಯರಿಗೆ ಸುರಕ್ಷಿತ ವಸತಿ ಹಾಗೂ ಆರ್ಥಿಕ ಸಹಾಯದ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಯೋಜನೆ ನೆರವಾಗುತ್ತಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆಯು ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣವನ್ನು ಒಂದೇ ವೇದಿಕೆಯಡಿ ತರುವ ಪ್ರಯತ್ನವಾಗಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸುವುದರೊಂದಿಗೆ, ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ ಸಮಾಜದಲ್ಲಿ ಗೌರವಯು ತವಾಗಿ ಬದುಕುವ ವಾತಾವರಣ ನಿರ್ಮಿಸು ವುದು ಇದರ ಪ್ರಮುಖ ಆಶಯವಾಗಿದೆ.

ಯೋಜನೆಯಡಿ ‘ಸಂಕಲ್ಪ’ ಕಾರ್ಯಕ್ರಮದ ಮೂಲಕ ಜಿಲ್ಲಾ ಮಟ್ಟದ ಮಹಿಳಾ ಸಬಲೀಕರಣ ಘಟಕ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಾಗೂ ಕಾನೂನು ಕ್ಷೇತ್ರಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡಲಾಗುತ್ತಿದೆ. ವಿವಿಧ ಇಲಾಖೆಗಳ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಹಿತಿ ನೀಡಿ ಅವುಗಳನ್ನು ಪಡೆದುಕೊಳ್ಳಲು ಪ್ರೇರೇಪಿಸಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ ೭೨ ಅರಿವು ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ.

ಇದರೊಂದಿಗೆ ‘ಬೇಟಿ ಬಚಾವೋ, ಬೇಟಿ ಪಢಾವೋ’, ಪೋಕ್ಸೊ ಕಾಯ್ದೆ, ಮಕ್ಕಳ ಸಹಾಯವಾಣಿ ೧೦೯೮, ಮಹಿಳಾ ಸಹಾಯವಾಣಿ ೧೮೧ ಹಾಗೂ ತುರ್ತು ಸಹಾಯವಾಣಿ ೧೧೨ ಕುರಿತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗಿದೆ. ಹೆಣ್ಣು ಮಕ್ಕಳ ಜನನಕ್ಕೆ ಪ್ರೋತ್ಸಾಹ, ಶಿಕ್ಷಣಕ್ಕೆ ಆದ್ಯತೆ, ಲಿಂಗಾನುಪಾತ ಸುಧಾರಣೆ, ಬಾಲ್ಯವಿವಾಹ ತಡೆ ಹಾಗೂ ಮಹಿಳೆಯರ ಹಕ್ಕುಗಳ ರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

ಮಹಿಳೆಯರ ಮೇಲಿನ ದೌರ್ಜನ್ಯ, ಕೌಟುಂಬಿಕ ಹಿಂಸೆ, ಲೈಂಗಿಕ ಕಿರುಕುಳ ಹಾಗೂ ಶೋಷಣೆಯಂತಹ ಸಂದರ್ಭಗಳಲ್ಲಿ ನೆರವಾಗಲು ‘ಸಖಿ ಒನ್ ಸ್ಟಾಪ್ ಸೆಂಟರ್’ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟಕ್ಕೆ ಸಿಲುಕಿದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ನೆರವು, ಕಾನೂನು ಸಲಹೆ, ಪೊಲೀಸ್ ಸಹಕಾರ, ತಾತ್ಕಾಲಿಕ ಆಶ್ರಯ ಹಾಗೂ ಆಪ್ತ ಸಮಾಲೋಚನೆ ಒದಗಿಸಲಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಮಹಿಳೆಯರಿಗೆ ರಕ್ಷಣೆ ಕಲ್ಪಿಸಿ, ಅವರು ಮತ್ತೆ ಗೌರವಯುತ ಬದುಕಿಗೆ ಮರಳಲು ನೆರವಾಗುವುದು ಈ ಕೇಂದ್ರದ ಉದ್ದೇಶವಾಗಿದೆ.

ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ಹಾಗೂ ಪೌಷ್ಟಿಕತೆಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಜಾರಿಯಲ್ಲಿದೆ. ಮೊದಲ ಮಗುವಿನ ಜನನಕ್ಕೆ ಅರ್ಹ ಮಹಿಳೆಯರಿಗೆ ಎರಡು ಕಂತುಗಳಲ್ಲಿ ಒಟ್ಟು ೫ ಸಾವಿರ ರೂ. ಆರ್ಥಿಕ ನೆರವು ನೀಡಲಾಗುತ್ತದೆ. ಎರಡನೇ ಮಗು ಹೆಣ್ಣು ಮಗುವಾಗಿದ್ದಲ್ಲಿ ಅರ್ಹ ಫಲಾನುಭವಿಗಳಿಗೆ ಒಂದೇ ಕಂತಿನಲ್ಲಿ ೬ ಸಾವಿರ ರೂ. ನೇರ ನಗದು ವರ್ಗಾವಣೆ ಮೂಲಕ ಒದಗಿಸಲಾಗುತ್ತದೆ. ಈ ನೆರವು ಗರ್ಭಾವಸ್ಥೆಯಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಪೌಷ್ಟಿಕ ಆಹಾರ ಸೇವನೆಗೆ ಸಹಕಾರಿಯಾಗಿದೆ. ಅರ್ಹರು ಸಮೀಪದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಉದ್ಯೋಗದ ನಿಮಿತ್ತ ಸ್ವಂತ ಊರುಗಳಿಂದ ದೂರವಿರುವ ಮಹಿಳೆಯರಿಗೆ ಸುರಕ್ಷಿತ ವಸತಿ ಕಲ್ಪಿಸುವ ‘ಸಖಿ ನಿವಾಸ’ ಯೋಜನೆಯಡಿ ಕೊಡಗು ಜಿಲ್ಲೆಯಲ್ಲಿ ಈವರೆಗೆ ೨೮ ಉದ್ಯೋಗಸ್ಥ ಮಹಿಳೆಯರು ಸೌಲಭ್ಯ ಪಡೆದಿದ್ದಾರೆ. ಸುರಕ್ಷಿತ ವಸತಿ ವ್ಯವಸ್ಥೆ ದೊರೆಯುವುದರಿಂದ ಮಹಿಳೆಯರು ಯಾವುದೇ ಆತಂಕವಿಲ್ಲದೆ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗಿದೆ.

ಅದೇ ರೀತಿ ಉದ್ಯೋಗಸ್ಥ ಮಹಿಳೆಯರ ಮಕ್ಕಳ ಆರೈಕೆಗೂ ಆದ್ಯತೆ ನೀಡಲಾಗಿದೆ. ಆರು ತಿಂಗಳಿಂದ ಆರು ವರ್ಷದವರೆಗಿನ ಮಕ್ಕಳಿಗೆ ಪಾಲನಾ ಕೇಂದ್ರಗಳ ಮೂಲಕ ಆರೈಕೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ತಾಯಂದಿರು ಉದ್ಯೋಗಕ್ಕೆ ತೆರಳಿದ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ, ಪೋಷಣೆ ಮತ್ತು ಅಗತ್ಯ ಆರೈಕೆಯನ್ನು ಈ ಕೇಂದ್ರಗಳು ಒದಗಿಸುತ್ತವೆ.

ತುರ್ತು ಸಂದರ್ಭಕ್ಕೆ ಸಹಾಯವಾಣಿ:  ಮಹಿಳೆಯರು ಮತ್ತು ಮಕ್ಕಳು ಸಂಕಷ್ಟಕ್ಕೆ ಸಿಲುಕಿದಾಗ ತಕ್ಷಣ ನೆರವು ಪಡೆಯಲು ಸರ್ಕಾರ ವಿವಿಧ ಸಹಾಯವಾಣಿ ವ್ಯವಸ್ಥೆಗಳನ್ನು ಕಲ್ಪಿಸಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಸಂಕಷ್ಟದ ಸಂದರ್ಭಗಳಲ್ಲಿ ೧೮೧, ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆಗಾಗಿ ೧೦೯೮ ಹಾಗೂ ಪೊಲೀಸ್ ಸೇರಿದಂತೆ ತುರ್ತು ಸೇವೆಗಳಿಗಾಗಿ ೧೧೨ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

” ಕೊಡಗು ಜಿಲ್ಲೆಯ ಮಹಿಳೆಯರು ಮತ್ತು ಮಕ್ಕಳು ಮಿಷನ್ ಶಕ್ತಿ ಯೋಜನೆಯಡಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ಸದುಪಯೋಗಪಡಿಸಿಕೊಳ್ಳಬೇಕು. ಮಹಿಳೆಯರ ರಕ್ಷಣೆ, ಗೌರವ ಮತ್ತು ಸ್ವಾವಲಂಬನೆಗೆ ಆದ್ಯತೆ ನೀಡುವ ಮೂಲಕ ಸಬಲ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು.”

-ಪ್ರಸನ್ನ ಕುಮಾರ್, ಉಪ ನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

 

 

ಆಂದೋಲನ ಡೆಸ್ಕ್

Recent Posts

ಸಹಕಾರ ಸಪ್ತಾಹಕ್ಕೆ ಕೇಂದ್ರ ಸರ್ಕಾರದ ಅಸಹಕಾರ

ಕೆ.ಬಿ.ರಮೇಶನಾಯಕ ಜುಲೈನಲ್ಲಿ ಅಂತಾರಾಷ್ಟ್ರೀಯ ಸಹಕಾರ ದಿನ ಆಚರಣೆಗೆ ಸೂಚನೆ  ಸಪ್ತಾಹದ ಶೀರ್ಷಿಕೆಯೇ ಬದಲು; ನ.೧೪ರಂದು ನೆಹರು ಜನ್ಮದಿನ ಮರೆಸಲು ಯತ್ನ?…

4 mins ago

ಬಿಳಿಗಿರಿರಂಗನ ಬೆಟ್ಟದಲ್ಲಿ ಹುಂಡಿ ಎಣಿಕೆ: 18 ಲಕ್ಷದ 69 ಸಾವಿರ ರೂ. ಸಂಗ್ರಹ

ಯಳಂದೂರು: ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗುರುವಾರ…

15 hours ago

ಎಥೆನಾಲ್‌ ಮಿಶ್ರಣ: 63 ಸ್ಯಾಂಪಲ್‌ ಪರೀಕ್ಷೆಗೆ ಕಳಿಸಿದರೂ ಫಲಿತಾಂಶ ಕೊಟ್ಟಿಲ್ಲ ಎಂದ ರಿಜ್ವಾನ್‌ ಅರ್ಷದ್‌!

ಬೆಂಗಳೂರು: ಪೆಟ್ರೋಲ್‌ನಲ್ಲಿ ಮಿತಿ ಮೀರಿದ ಎಥೆನಾಲ್‌ ಮಿಶ್ರಣದ ಆರೋಪಕ್ಕೆ ಸಂಬಂಧಿಸಿದಂತೆ ಪರೀಕ್ಷೆಗೆ ಕಳುಹಿಸಿದ್ದ 63 ಸ್ಯಾಂಪಲ್‌ಗಳ ಫಲಿತಾಂಶ ನೀಡಿಲ್ಲ ಎಂದು…

15 hours ago

ಬಿಳಿಗಿರಿರಂಗನ ಬೆಟ್ಟದ ವರದತ್ತಿ ಮಂಟಪೋತ್ಸವ: ವರದೇ ನಾಯಕರ ಕುಲಪರಂಪರೆಯ ಜೀವಂತ ಸಾಕ್ಷಿ

ಯಳಂದೂರು: ಚಾಮರಾಜನಗರ ಜಿಲ್ಲೆಯ ಪವಿತ್ರ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನ ಬೆಟ್ಟದ ಶ್ರೀ ತಿರುವೆಂಗಳನಾಥ ಸ್ವಾಮಿ ದೇವಾಲಯಕ್ಕೂ ಯಳಂದೂರು ಮೂಲದ ವರದೇ…

16 hours ago

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: ಮೂರು ತಿಂಗಳಲ್ಲಿ ಹೊಸ ಆ್ಯಪ್‌ ಎಂದ ಸಚಿವ ಯು.ಟಿ. ಖಾದರ್‌!

ಬೆಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಬಳಸುವುದಕ್ಕೆ ಕಡಿವಾಣ ಹಾಕಲು ಹೊಸ ಮೊಬೈಲ್‌ ಆ್ಯಪ್‌ ತರಲು ಯೋಜಿಸಲಾಗಿದೆ.…

16 hours ago

ಬಾಳೆಗೊನೆಯಲ್ಲಿ ಡ್ರಗ್ಸ್‌ ಸಾಗಾಟ ಪ್ರಕರಣ: ನಂಜನಗೂಡು ನಂಟಿನ ಬಗ್ಗೆ ಎಸ್ಪಿ ಸ್ಪಷ್ಟನೆ

ಮೈಸೂರು: ಬಾಳೆಗೊನೆ ಮೂಲಕ ಡ್ರಗ್ಸ್‌ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ…

18 hours ago