Andolana originals

ಕೃಷಿ ಪತ್ತಿನ ಸಂಘ ಚುನಾವಣೆಗೆ ಸುಪ್ರೀಂ ಸೂಚನೆ

ಮಂಜು ಕೋಟೆ

ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮುಂದುವರಿಕೆಗೆ ಆದೇಶ 

ಎಚ್.ಡಿ.ಕೋಟೆ: ಪಟ್ಟಣದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯನ್ನು ನಡೆಸುವಂತೆ ಮತ್ತು ಟಿಎಪಿಸಿಎಂಎಸ್ ಆಡಳಿತ ಮಂಡಳಿಯನ್ನು ಮುಂದಿನ ಚುನಾವಣೆವರೆಗೆ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ,ಉಪಾಧ್ಯಕ್ಷರ ಚುನಾವಣೆ ನ.೩ರಂದು ನಿಗದಿಯಾಗಿತ್ತು. ಚುನಾವಣೆ ಅಧಿಕಾರಿಯಾಗಿದ್ದ ಸಹಕಾರ ಇಲಾಖೆಯ ಸಿಡಿಒ ರೇಣುಕಾ ಅಂದು ನಾಪತ್ತೆಯಾಗಿದ್ದರಿಂದ ಚುನಾವಣೆ ನಡೆದಿರಲಿಲ್ಲ. ಈ ಕುರಿತು ಬೆಳಗನಹಳ್ಳಿ ಶಿವರಾಜ್ ನೇತೃತ್ವದ ಬಣ ಅಧಿಕಾರಿ ರೇಣುಕಾರವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಅನಾರೋಗ್ಯದ ಕಾರಣ ಹಿಂದಿನ ಚುನಾವಣೆ ದಿನ ಗೈರಾಗಿದ್ದೆ ನ. ೨೦ರಂದು ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಸುತ್ತೇವೆ ಎಂದು ರೇಣುಕಾ ಅವರು ವಕೀಲರ ಮುಖಾಂತರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ನ.೨೦ರಂದು ಚುನಾವಣೆ ನಡೆಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮುಂದುವರಿಸಲು ಸೂಚನೆ: ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ಅಧಿಕಾರಾವಧಿ ನ.೯ಕ್ಕೆ ಪೂರ್ಣಗೊಂಡಿದ್ದು, ಆಡಳಿತ ಮಂಡಳಿಯ ನೇತೃತ್ವದಲ್ಲಿ ಎಲ್ಲ ದಾಖಲಾತಿಗಳನ್ನು ಸಿದ್ಧಪಡಿಸಿಕೊಂಡಿದ್ದರೂ ಮುಂದಿನ ಚುನಾವಣೆ ದಿನಾಂಕ ನಿಗದಿ ಆಗದೇ ಇರುವುದರಿಂದ ಅಲ್ಲಿಯವರೆಗೂ ಆಡಳಿತ ಮಂಡಳಿಯನ್ನು ಮುಂದುವರಿಸುವಂತೆ ಅಧ್ಯಕ್ಷರಾದ ಮೊತ್ತ ಬಸವರಾಜಪ್ಪ, ಉಪಾಧ್ಯಕ್ಷರಾದ ನೂರ್ ಅಹ್ಮದ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಸಹಕಾರ ಇಲಾಖೆಯ ಸಹಾಯಕ ರಿಜಿಸ್ಟ್ರಾರ್ (ಎ.ಆರ್. )ಅನಸೂಯಾರವರು ಆಡಳಿತ ಮಂಡಳಿ ಅವಧಿ ಪೂರ್ಣಗೊಂಡಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಚುನಾವಣೆ ನಡೆಸಲು ಕೆಲವೊಂದು ದಾಖಲಾತಿಗಳನ್ನು ಸರಿಪಡಿಸಿಕೊಳ್ಳಲಾ ಗುತ್ತಿದೆ ಎಂದು ಸರ್ಕಾರದ ವಕೀಲರ ಮುಖಾಂತರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಧೀಶರು ಇನ್ನು ನಾಲ್ಕು ತಿಂಗಳ ಒಳಗಾಗಿ ಅಧಿಕಾರಿಗಳ ಸಮ್ಮುಖದಲ್ಲಿ ನಿರ್ದೇಶಕರ ಸ್ಥಾನಗಳ ಚುನಾವಣೆ ನಡೆಸುವಂತೆ ಆದೇಶಿಸಿದ್ದಾರೆ.

” ನ್ಯಾಯಾಲಯಕ್ಕೆ ಇದೇ ತಿಂಗಳು ೨೦ರಂದು ಕಸಬಾ ವಿಎಸ್‌ಎಸ್‌ಎನ್ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ. ಅದರಂತೆ ಎಲ್ಲಾ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ.”

ರೇಣುಕಾ, ಸಿಡಿಒ, ಸಹಕಾರ ಇಲಾಖೆ

” ಟಿಎಪಿಸಿಎಂಎಸ್ ಆಡಳಿತ ಮಂಡಳಿ ಅವಧಿ ಪೂರ್ಣಗೊಂಡಿದ್ದು, ನನ್ನನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಚುನಾವಣೆ ನಡೆಸಲು ಅನೇಕ ದಾಖಲಾತಿಗಳನ್ನು ಸರಿ ಮಾಡಬೇಕಾಗಿರುವುದರಿಂದ ನ್ಯಾಯಾಲಯದ ನಿರ್ದೇಶನದಂತೆ ನಾಲ್ಕು ತಿಂಗಳ ಒಳಗಾಗಿ ಅಧಿಕಾರಿಗಳ ನೇತೃತ್ವದಲ್ಲಿ ಚುನಾವಣೆ ನಡೆಸಲಾಗುವುದು”

ಅನಸೂಯ, ಸಹಾಯಕ ರಿಜಿಸ್ಟ್ರಾರ್ ಸಹಕಾರ ಇಲಾಖೆ

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ | ಪಾದಾಯಾತ್ರೆಗೆ ತಾತ್ಕಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…

18 mins ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

32 mins ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

1 hour ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

2 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

2 hours ago

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…

2 hours ago