ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ
ಪ್ರಶಾಂತ್ ಎಸ್.
ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ ದೇವರಾಜ ಅರಸು ಕಾಲೋನಿ ಮತ್ತು ಪೌರಕಾರ್ಮಿಕರ ಕಾಲೋನಿಗಳಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿದ್ದು, ಈ ಭಾಗದ ಜನತೆ ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.
ಶುದ್ಧ ಕುಡಿಯುವ ನೀರಿನ ಘಟಕ ಸುಸ್ಥಿತಿಯಲ್ಲಿದ್ದಾಗ ಈ ಕಾಲೋನಿಗಳಿಗೆ ಬರುವ ಸಾರ್ವಜನಿಕರು, ಸುತ್ತಮುತ್ತಲಿನ ಅಂಗಡಿ ಮಾಲೀಕರು, ಕೂಲಿ ಕಾರ್ಮಿಕರು ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಯಂತ್ರಗಳೆಲ್ಲ ಕೆಟ್ಟು ಹೋಗಿವೆ.
ನಲ್ಲಿ ಹಾಗೂ ಕಾಯಿನ್ ಬಾಕ್ಸ್ ನಾಪತ್ತೆ: ಶುದ್ಧ ಕುಡಿಯುವ ನೀರಿನ ಘಟಕದ ಬಾಗಿಲಿನ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಆದರೂ ನಗರಪಾಲಿಕೆ ಅಧಿಕಾರಿಗಳು ಮಾತ್ರ ಇತ್ತ ಗಮನಗರಿಸಿಲ್ಲ. ೬೨ನೇ ವಾರ್ಡ್‌ನಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ತುಂಬಿಸಿಕೊಳ್ಳಲು ಅಳವಡಿಸಲಾಗಿದ್ದ ಪೈಪ್ ಹಾಗೂ ೫ ರೂ. ನಾಣ್ಯ ಹಾಕಲು ಇಡಲಾಗಿದ್ದ ಕಾಯಿನ್ ಬಾಕ್ಸ್ ಕೂಡ ನಾಪತ್ತೆಯಾಗಿದೆ.
ಸರ್ಕಾರದ ಆಸ್ತಿಯನ್ನು ರಕ್ಷಣೆ ಮಾಡಬೇಕಾದ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿನ ಘಟಕ ಉಪಯೋಗಕ್ಕೆ ಬಾರದಂತಾಗಿದೆ. ಇದೀಗ ಬೇಸಿಗೆ ಪ್ರಾರಂಭವಾಗಿರುವುದರಿಂದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರಿನ ಅಗತ್ಯವಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದುರಸ್ತಿ ಮಾಡುವವರು ಯಾರು?: ನಿರ್ವಹಣೆ ಕೊರತೆಯಿಂದಾಗಿ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದು, ಇಲ್ಲಿ ಹೆಸರಿಗಷ್ಟೇ ಶುದ್ಧ ನೀರಿನ ಘಟಕವಿದೆ. ಅಲ್ಲಿ ನೀರು ಬರುತ್ತಿಲ್ಲ. ದುರಸ್ತಿ ಮಾಡುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಇಲ್ಲವಾಗಿದೆ. ತಾಂತ್ರಿಕ ದೋಷ ಸೇರಿದಂತೆ ಇನ್ನಿತರ ಕಾರಣಗಳಿಂದ ಘಟಕ ಕಾರ್ಯ ನಿರ್ವಹಿಸದೆ ಇರುವ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರೂ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದೂರುತ್ತಾರೆ ಸ್ಥಳೀಯರು.
” ಶುದ್ಧ ಕುಡಿಯುವ ನೀರಿನ ಘಟಕ ಕೆಲ ತಾಂತ್ರಿಕ ದೋಷಗಳಿಂದ ಕೆಟ್ಟಿದ್ದು, ನಂತರ ಇದನ್ನು ಅಧಿಕಾರಿಗಳು ದುರಸ್ತಿ ಮಾಡದೇ ಇರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ. ಬೇಸಿಗೆ ಕಾಲದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯವಿದೆ. ನಗರ ಪಾಲಿಕೆ ಇದನ್ನು ದುರಸ್ತಿ ಮಾಡಿದರೆ ಈ ಭಾಗದ ನಿವಾಸಿಗಳಿಗೆ ಅನುಕೂಲವಾಗಲಿದೆ.”
-ನಾರಾಯಣ ಹೆಗ್ಗಡೆ, ಸ್ಥಳೀಯರು
” ನಗರ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಭಿಯಂತರರಿಗೆ ಸೂಚನೆ ನೀಡಿದ್ದು, ಅದನ್ನು ಪರಿಶೀಲಿಸಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟಿದ್ದರೆ ಶೀಘ್ರದಲ್ಲಿಯೇ ದುರಸ್ತಿ ಮಾಡಿಸಲಾಗುವುದು.”
-ಶೇಖ್ ತನ್ವೀರ್ ಆಸಿಫ್, ನಗರಪಾಲಿಕೆ ಆಯುಕ್ತರು
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…