Mysore
19
few clouds
Light
Dark

‘ಮೆಂದಾರೆ ಗ್ರಾಮ ಸ್ಥಳಾಂತರ ಸಂಬಂಧ ಸರ್ವೆ’

mendare village shifting meeting

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಂದಾರೆ ಗ್ರಾಮವನ್ನು ಸ್ಥಳಾಂತರ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕಮಿಟಿ ರಚನೆ ಮಾಡಲಾಗಿದ್ದು, ಮೂರು ದಿನಗಳ ಕಾಲ ಸರ್ವೆ ಮಾಡಿ ವರದಿ ಸಿದ್ಧಪಡಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ಶಿವಮೂರ್ತಿ ತಿಳಿಸಿದರು. ಸಾಮಾಜಿಕ, ಆರ್ಥಿಕ ಸ್ಥಿತಿಯ ಸರ್ವೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣ ನಂತರ ಗ್ರಾಮದ ವಾಸ್ತವತೆ ತಿಳಿಯಲು ಮೆಂದಾರೆ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್‌ರವರಿಗೆ ಮೆಂದಾರೆ ಗ್ರಾಮದವರು ತಮ್ಮನ್ನು ಸ್ಥಳಾಂತರ ಮಾಡುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ. ಮಂದಾರೆ ಗ್ರಾಮದಲ್ಲಿರುವ ಕುಟುಂಬಗಳು, ವಿದ್ಯಾವಂತರು, ಅವಿದ್ಯಾವಂತರು, ಮಾಡುವ ವೃತ್ತಿ, ಸ್ವಂತ ಮನೆ, ಜಮೀನು, ಜಾನುವಾರುಗಳು, ಆಧಾರ್ ಕಾರ್ಡ್, ಮೊಬೈಲ್, ಮತದಾರರ ಗುರುತಿನ ಚೀಟಿ ಸೇರಿದಂತೆ 24 ಪ್ರಮುಖ ಅಂಶಗಳನ್ನು ಗುರುತಿಸಲು ಈಗಾಗಲೇ ಕಮಿಟಿ ರಚನೆ ಮಾಡಲಾಗಿದೆ.

ಮೇ 27ರಿಂದ ಮೂರು ದಿನಗಳ ಕಾಲ ಸರ್ವೆ ನಡೆಸಿ ಕಮಿಟಿ ಸದಸ್ಯರು ನಮಗೆ ಕಮಿಟಿ ಸದಸ್ಯರು ನಮಗೆ ವರದಿ ನೀಡಲಿದ್ದಾರೆ. ಆ ವರದಿಯ ಆಧಾರದ ಮೇಲೆ ಎಲ್ಲಾ ಮಾಹಿತಿಯನ್ನು ಕ್ರೋಢೀಕರಿಸಿ ಮತ್ತೊಮ್ಮೆ ಗ್ರಾಮದಲ್ಲಿ ಗ್ರಾಮ ಸಭೆ ನಡೆಸಿ ಸ್ಥಳಾಂತರಕ್ಕೆ ಎಷ್ಟು ಜನ ಒಪ್ಪಿಗೆ ಕೊಟ್ಟಿದ್ದಾರೆ ಎಂಬುದರ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇವೆ. ಜೂನ್ ಮೊದಲ ವಾರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅಂತಿಮ ವರದಿ ತಯಾರು ಮಾಡಿ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿಯನ್ನು ನೀಡುತ್ತೇವೆ ಎಂದು ತಿಳಿಸಿದರು.

ತಹಸಿಲ್ದಾರ್ ಗುರುಪ್ರಸಾದ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್, ಎಸಿಎಫ್ ಚಂದ್ರಶೇಖರ್, ಇಒ ಉಮೇಶ್, ಎಡಿಎಲ್ಆರ್ ನಟರಾಜು, ಕಿರಣ್, ಇನ್ನಿತರರು ಹಾಜರಿದ್ದರು.