ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಂದಾರೆ ಗ್ರಾಮವನ್ನು ಸ್ಥಳಾಂತರ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕಮಿಟಿ ರಚನೆ ಮಾಡಲಾಗಿದ್ದು, ಮೂರು ದಿನಗಳ ಕಾಲ ಸರ್ವೆ ಮಾಡಿ ವರದಿ ಸಿದ್ಧಪಡಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ಶಿವಮೂರ್ತಿ ತಿಳಿಸಿದರು. ಸಾಮಾಜಿಕ, ಆರ್ಥಿಕ ಸ್ಥಿತಿಯ ಸರ್ವೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣ ನಂತರ ಗ್ರಾಮದ ವಾಸ್ತವತೆ ತಿಳಿಯಲು ಮೆಂದಾರೆ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್‌ರವರಿಗೆ ಮೆಂದಾರೆ ಗ್ರಾಮದವರು ತಮ್ಮನ್ನು ಸ್ಥಳಾಂತರ ಮಾಡುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ. ಮಂದಾರೆ ಗ್ರಾಮದಲ್ಲಿರುವ ಕುಟುಂಬಗಳು, ವಿದ್ಯಾವಂತರು, ಅವಿದ್ಯಾವಂತರು, ಮಾಡುವ ವೃತ್ತಿ, ಸ್ವಂತ ಮನೆ, ಜಮೀನು, ಜಾನುವಾರುಗಳು, ಆಧಾರ್ ಕಾರ್ಡ್, ಮೊಬೈಲ್, ಮತದಾರರ ಗುರುತಿನ ಚೀಟಿ ಸೇರಿದಂತೆ 24 ಪ್ರಮುಖ ಅಂಶಗಳನ್ನು ಗುರುತಿಸಲು ಈಗಾಗಲೇ ಕಮಿಟಿ ರಚನೆ ಮಾಡಲಾಗಿದೆ.
ಮೇ 27ರಿಂದ ಮೂರು ದಿನಗಳ ಕಾಲ ಸರ್ವೆ ನಡೆಸಿ ಕಮಿಟಿ ಸದಸ್ಯರು ನಮಗೆ ಕಮಿಟಿ ಸದಸ್ಯರು ನಮಗೆ ವರದಿ ನೀಡಲಿದ್ದಾರೆ. ಆ ವರದಿಯ ಆಧಾರದ ಮೇಲೆ ಎಲ್ಲಾ ಮಾಹಿತಿಯನ್ನು ಕ್ರೋಢೀಕರಿಸಿ ಮತ್ತೊಮ್ಮೆ ಗ್ರಾಮದಲ್ಲಿ ಗ್ರಾಮ ಸಭೆ ನಡೆಸಿ ಸ್ಥಳಾಂತರಕ್ಕೆ ಎಷ್ಟು ಜನ ಒಪ್ಪಿಗೆ ಕೊಟ್ಟಿದ್ದಾರೆ ಎಂಬುದರ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇವೆ. ಜೂನ್ ಮೊದಲ ವಾರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅಂತಿಮ ವರದಿ ತಯಾರು ಮಾಡಿ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿಯನ್ನು ನೀಡುತ್ತೇವೆ ಎಂದು ತಿಳಿಸಿದರು.
ತಹಸಿಲ್ದಾರ್ ಗುರುಪ್ರಸಾದ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್, ಎಸಿಎಫ್ ಚಂದ್ರಶೇಖರ್, ಇಒ ಉಮೇಶ್, ಎಡಿಎಲ್ಆರ್ ನಟರಾಜು, ಕಿರಣ್, ಇನ್ನಿತರರು ಹಾಜರಿದ್ದರು.
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಬಂಧನ ಹಾಗೂ ಬಿಡುಗಡೆಗೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಸರ್ಕಾರದ…
ಮೈಸೂರು: ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಮಾಗಿ ಉತ್ಸವಕ್ಕೆ ಚಾಲನೆ…
ಕಲಬುರ್ಗಿ: ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಸದನದಲ್ಲಿ ದ್ವೇಷದ ಮಾತನ್ನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹುಚ್ಚುನಾಯಿ…